'ಪುಷ್ಪಕ ವಿಮಾನ'ದಲ್ಲಿ ರಚಿತಾ ರಾಮ್ 'ಲಾಯರ್', ಫಸ್ಟ್ ಲುಕ್ ರಿಲೀಸ್!
ನಟ ಕಮ್ ನಿರ್ದೇಶಕ ರಮೇಶ್ ಅರವಿಂದ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ 'ಪುಷ್ಪಕ ವಿಮಾನ', ರಿಲೀಸ್ ಗೆ ರೆಡಿಯಾಗಿದೆ. ತಂದೆ-ಮಗಳ ಬಾಂಧವ್ಯವನ್ನು ಬಿಂಬಿಸಿರುವ 'ಪುಷ್ಪಕ ವಿಮಾನ' ಚಿತ್ರದಲ್ಲಿ ನಟ ರಮೇಶ್ ಅರವಿಂದ್ ಅವರು ತಂದೆಯ ಪಾತ್ರ ನಿರ್ವಹಿಸಿದ್ದು, ನಟಿ ರಚಿತಾ ರಾಮ್ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಇನ್ನೂ ಚಿತ್ರದಲ್ಲಿ ರಮೇಶ್ ಅರವಿಂದ್ ಹಾಗೂ ಬೇಬಿ ಯುವಿನಾ ಜೋಡಿ ಹೇಗೆ ಕಾಣಿಸಿಕೊಳ್ಳಲಿದೆ ಎಂಬುದನ್ನ ಟ್ರೈಲರ್ ಹಾಗೂ ಫೊಸ್ಟರ್ ಗಳಲ್ಲಿ ನೋಡಿದ್ದೀವಿ. ಆದ್ರೆ, ರಚಿತಾ ರಾಮ್ ಚಿತ್ರದಲ್ಲಿ ಮಗಳ ಪಾತ್ರ ಮಾಡುತ್ತಿದ್ದಾರೆ ಎನ್ನುವುದು ಬಿಟ್ರೆ, ಇದುವರೆಗೂ ರಚಿತಾ ಪಾತ್ರ ಹೇಗಿರುತ್ತೆ ಅವರ ಗೆಟಪ್ ಹೇಗಿರುತ್ತೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿರಲಿಲ್ಲ.[ಹೊಸ ವರ್ಷದ ಆರಂಭದಲ್ಲಿ ಹಾರಲಿದೆ 'ಪುಷ್ಪಕ ವಿಮಾನ' ]

ಆದ್ರೀಗ, 'ಪುಷ್ಪಕ ವಿಮಾನ' ಚಿತ್ರದಲ್ಲಿ ರಚಿತಾ ರಾಮ್ ಅವರು ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನ ಚಿತ್ರತಂಡ ರಿವಿಲ್ ಮಾಡಿದೆ. ಅಂದ್ಹಾಗೆ, ರಚಿತಾ 'ಪುಷ್ಪಕ ವಿಮಾನ' ಚಿತ್ರದಲ್ಲಿ 'ಲಾಯರ್' ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಫಸ್ಟ್ ಲುಕ್ ಬಿಡುಗಡೆಯಾಗಿದೆ.['ಪುಷ್ಪಕ ವಿಮಾನ' ಸೆಟ್ ನಲ್ಲಿ ಕಣ್ಣೀರು ಹಾಕಿದ ರಚಿತಾ ]

ಇದೇ ಮೊದಲ ಬಾರಿಗೆ ರಚಿತಾ ರಾಮ್, 'ಲಾಯರ್' ಪಾತ್ರವನ್ನ ನಿರ್ವಹಿಸುತ್ತಿದ್ದು, ಸಾಮಾನ್ಯವಾಗಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿಸಿದೆ. ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕವನ್ನ ಪ್ರಕಟಿಸಿದ್ದು, ಜನವರಿ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.[ಅಪ್ಪ-ಮಗಳ ಮುದ್ದಾದ 'ಪುಷ್ಪಕ ವಿಮಾನ' ನೋಡಿದ್ರಾ? ]

'ಪುಷ್ಪಕ ವಿಮಾನ'ದ ವಿಶೇಷ ಪಾತ್ರದಲ್ಲಿ ನಟಿ ಜೂಹಿ ಚಾವ್ಲಾ ಅಭಿನಯಿಸಿದ್ದು, ಚಿತ್ರದ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ನವ ನಿರ್ದೇಶಕ ಎಸ್ ರವೀಂದ್ರನಾಥ್ ಚೊಚ್ಚಲ ಬಾರಿಗೆ ಆಕ್ಷನ್-ಕಟ್ ಹೇಳಿರುವ 'ಪುಷ್ಪಕ ವಿಮಾನ', ವಿಖ್ಯಾತ್ ಪಿಕ್ಚರ್ಸ್ ಮತ್ತು ಒಡೆಯರ್ ಫ್ಯಾಕ್ಟರಿ ಸಹಯೋಗದಲ್ಲಿ ನಿರ್ಮಾಣವಾಗಿದೆ. ಚಿತ್ರಕ್ಕೆ ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.


Click it and Unblock the Notifications