For Quick Alerts
  ALLOW NOTIFICATIONS  
  For Daily Alerts

  ಶ್ರೀರಾಮ ನವಮಿ ದಿನವೇ 'ಶಬರಿ'ಯಾದ ರಚಿತಾ ರಾಮ್

  |

  ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೈತುಂಬ ಸಿನಿಮಾಗಳನ್ನು ಇಟ್ಟುಕೊಂಡಿರುವ ರಚಿತಾ ಸಿನಿಮಾಗಳ ಲಿಸ್ಟ್ ಗೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ರಚಿತಾ ಶಬರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಶ್ರೀರಾಮ ನವಮಿ ದಿನವೇ ಶಬರಿಯಾಗಿ ಅಭಿಮಾನಿಗಳ ಮುಂದೆ ಬಂದಿರುವ ಮೂಲಕ ರಚಿತಾ ಅಚ್ಚರಿ ಮೂಡಿಸಿದ್ದಾರೆ.

  ಡಿಂಪಲ್ ಕ್ವೀನ್ ನಟನೆಯ ಹೊಸ ಸಿನಿಮಾಗೆ 'ಶಬರಿ ಸರ್ಚಿಂಗ್ ಫಾರ್ ರಾವಣ' ಎಂದು ಶೀರ್ಷಿಕೆ ಇಡಲಾಗಿದೆ. ಇಂದು ರಾಮ ನವಮಿಯ ವಿಶೇಷವಾಗಿ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ನಲ್ಲಿ ಉಗ್ರ ಅವತಾರ ತಾಳಿರುವ ರಚಿತಾ ಲುಕ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

  ಈ ಫೋಟೋದಲ್ಲಿರುವ ಕನ್ನಡದ ಸ್ಟಾರ್ ನಟ ಯಾರೆಂದು ಗುರುತಿಸಬಲ್ಲಿರಾ?ಈ ಫೋಟೋದಲ್ಲಿರುವ ಕನ್ನಡದ ಸ್ಟಾರ್ ನಟ ಯಾರೆಂದು ಗುರುತಿಸಬಲ್ಲಿರಾ?

  ಅಂದಹಾಗೆ ಶಬರಿ ಸರ್ಚಿಂಗ್ ಫಾರ್ ರಾವಣ ಚಿತ್ರಕ್ಕೆ ನವೀನ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಂಕಲನಕಾರನಾಗಿ ಗುರುತಿಸಿಕೊಂಡಿದ್ದ ನವೀನ್ ಶಬರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾ ಆದಾಗಿದ್ದು, ಚಿತ್ರದಲ್ಲಿ ರಚಿತಾ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ.

  ಚಿತ್ರದ ಪೋಸ್ಟರ್ ಶೇರ್ ಮಾಡಿರುವ ರಚಿತಾ, ಎಲ್ಲರಿಗೂ ಶ್ರೀರಾಮ ನವಮಿಯ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಹೊಸ ಸಿನಿಮಾಗೆ ಎಲ್ಲರ ಆಶೀರ್ವಾದ ಇರಲಿ ಎಂದು ಕೇಳಿಕೊಂಡಿದ್ದಾರೆ.

  Radhika Kumaraswamy ಮಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು? | Filmibeat Kannada

  ಇನ್ನು ಶಬರಿ ಸರ್ಚಿಂಗ್ ಫಾರ್ ರಾವಣ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ರಚಿತಾ ರಾಮ್ ಬಳಿ ಸದ್ಯ ಬ್ಯಾಡ್ ಮ್ಯಾನರ್ಸ್, ರಚ್ಚು ಐ ಲವ್ ಯು, ವೀರಂ, ಮ್ಯಾಟ್ನಿ, ಲಿಲ್ಲಿ, ಏಪ್ರಿಲ್, ಡಾಲಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ರಚಿತಾ ಬ್ಯುಸಿಯಾಗಿದ್ದಾರೆ.

  English summary
  Actress Rachita Ram new movie title Shabari searching for Ravana.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X