'ರಮಣ'ನ ಹುಡುಕಾಟದಲ್ಲಿ ನಿರ್ದೇಶಕ ಚೇತನ್ ಕುಮಾರ್, ಕೃಷ್ಣ

ಕನ್ನಡದಲ್ಲಿ ಹೊಸ ಸಿನಿಮಾದ ಪೋಸ್ಟರ್ ವೊಂದು ಬಿಡುಗಡೆಯಾಗಿದೆ. 'ರಾಧ ಸರ್ಚಿಂಗ್ ರಮಣ ಮಿಸ್ಸಿಂಗ್' ಸಿನಿಮಾದ ಪೋಸ್ಟರ್ ಪ್ರೇಮಿಗಳ ದಿನದ ವಿಶೇಷವಾಗಿ ಬಿಡುಗಡೆಯಾಗಿದೆ.

ಕನ್ನಡದ ಖ್ಯಾತ ನಿರ್ದೇಶಕರಾದ ಬಹದ್ದೂರ್ ಚೇತನ್ ಕುಮಾರ್, ಪೈಲ್ವಾನ್ ಕೃಷ್ಣ ಹಾಗೂ ನಟ ಗುಳ್ಟು ನವೀನ್ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಸಿನಿಮಾಗೆ ಕೃಷ್ಣ, ನವೀನ್, ಚೇತನ್ ಶುಭಾಶಯ ತಿಳಿಸಿದ್ದಾರೆ.

ಈ ಸಿನಿಮಾದ ಮೂಲಕ ರಾಘವ್ ಹೀರೋ ಆಗಿದ್ದಾರೆ. ಎಂ ಎನ್ ಶ್ರೀಕಾಂತ್ ನಿರ್ದೇಶಕ ಮಾಡಿದ್ದಾರೆ. ಸಂಜನಾ ಬುರ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ.

Radha Searching Ramana Missing Movie Poster Released

ರಾಘವ್ ಕಾಲೇಜ್ ಹುಡುಗನ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಆಕ್ಟಿಂಗ್, ಡ್ಯಾನ್ಸ್ ಕಲಿತಿದ್ದಾರೆ. ತಿಂಗಳುಗಳ ಕಾಲ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ.

ಯಶಸ್ವಿ ಶಂಕರ್ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಾಹಕರಾಗಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಒಂದು ಹಾಡಿನ ಚಿತ್ರೀಕರಣ ಬಾಕಿ ಇದೆಯಂತೆ.

Radha Searching Ramana Missing Movie Poster Released

ಸದ್ಯ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿದೆ. ಮಾರ್ಚ್ ತಿಂಗಳಿನಲ್ಲಿ ಹಾಡುಗಳು ಹಾಗೂ ಮೇ ನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲಾನ್ ನಲ್ಲಿ ಚಿತ್ರತಂಡವಿದೆ.

More from Filmibeat

English summary
Actor Raghav's 'Radha Searching Ramana Missing' kannada movie poster released.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X