Just In
Don't Miss!
- News
ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಸೇರಿ ಏಳು ಮಂದಿಗೆ ಪದ್ಮವಿಭೂಷಣ
- Sports
ಐಎಸ್ಎಲ್: ಬಾಗನ್ ಸೋಲಿಸುವ ಆತ್ಮವಿಶ್ವಾಸದಲ್ಲಿ ನಾರ್ಥ್ ಈಸ್ಟ್
- Automobiles
ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾದ ಒಕಿನಾವ
- Finance
ಎಲ್&ಟಿ ತ್ರೈಮಾಸಿಕ ಆದಾಯ 5% ಏರಿಕೆ: ದಾಖಲೆಯ 2,467 ಕೋಟಿ ರೂಪಾಯಿ
- Lifestyle
ನಿಮ್ಮ ದೇಹದ ಮೇಲಿನ ಕೂದಲು ಹೇಳುತ್ತೆ ನಿಮ್ಮ ಆರೋಗ್ಯದ ಭವಿಷ್ಯ
- Education
Indian Air Force Recruitment 2021: ಏರ್ಮೆನ್ ಗ್ರೂಪ್ X & Y ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾದ ರಾಧಿಕಾ ಕುಮಾರಸ್ವಾಮಿ
ನಟಿ ರಾಧಿಕಾ ಕುಮಾರಸ್ವಾಮಿ ಅವರು ಸಿಸಿಬಿ ಮುಂದೆ ಇಂದು ಹಾಜರಾಗಿದ್ದು, ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನಿನ್ನೆ ನೊಟೀಸ್ ಜಾರಿ ಮಾಡಿದ್ದರು. ಅದರಂತೆ ಇಂದು ರಾಧಿಕಾ ಕುಮಾರಸ್ವಾಮಿ ಅವರು ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.
ಸಿಸಿಬಿ ಕಚೇರಿಯಲ್ಲಿ ರಾಧಿಕಾ ಕುಮಾರಸ್ವಾಮಿ !
— oneindiakannada (@OneindiaKannada) January 8, 2021
ವಂಚಕ ಸ್ವಾಮಿ ಖಾತೆಯಿಂದ ಹಣ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿರುವ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಎಸಿಎಂ ಎಂ.ಎನ್. ನಾಗರಾಜ್ ವಿಚಾರಣೆ ನಡೆಸುತ್ತಿದ್ದಾರೆ.#RadhikaKumaraswamy #CCB pic.twitter.com/aU491MVuh9
ಆರ್‌ಆರ್‌ಆರ್ ಮುಖಂಡನ ಹೆಸರಿನಲ್ಲಿ ನಿಗಮ ಮಂಡಳಿಗಳಲ್ಲಿ ಅಧಿಕಾರ ಕೊಡಿಸುವುದಾಗಿ, ರಾಜ್ಯಪಾಲರನ್ನಾಗಿ ಮಾಡುವುದಾಗಿ ಸುಳ್ಳು ಹೇಳಿ ಹಲವರಿಂದ ಕೋಟ್ಯಂತರ ಹಣವನ್ನು ವಸೂಲಿ ಮಾಡಿದ್ದ ಯುವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಹಣ ವರ್ಗಾವಣೆ ಆಗಿದ್ದ ಕಾರಣ ರಾಧಿಕಾ ಅವರನ್ನು ಸಿಸಿಬಿ ವಿಚಾರಣೆ ನಡೆಸುತ್ತಿದೆ.
ರಾಧಿಕಾ ಅವರು 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿ ಪ್ರವೇಶಿಸಿದ್ದು, ಸಿಸಿಬಿಯ ಎಸಿಪಿ ನಾಗರಾಜ್ ಹಾಗೂ ತಂಡದಿಂದ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಯುತ್ತಿದೆ. ತಂಡದಲ್ಲಿ ಮಹಿಳಾ ಅಧಿಕಾರಿಗಳು ಸಹ ಇರಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರ ಮೊಬೈಲ್ ಅನ್ನು ವಶಕ್ಕೆ ಪಡೆವ ಸಾಧ್ಯತೆ ಇದೆ.
ಯುವರಾಜ್ ಜೊತೆಗಿನ ಹಣಕಾಸು ಸಂಬಂಧ. ಆತನ ಪರಿಚಯ, ಹಣ ಪಡೆದುಕೊಂಡಿದ್ದಕ್ಕೆ ಕಾರಣ. ಬೇರೆ ಇತರೆ ಹಣಕಾಸು ವ್ಯವಹಾರಗಳು ಇನ್ನಿತರೆ ವಿಷಯಗಳ ಬಗ್ಗೆ ಸಿಸಿಬಿ ಪೊಲೀಸರು ರಾಧಿಕಾ ಕುಮಾರಸ್ವಾಮಿ ಅನ್ನು ವಿಚಾರಣೆ ನಡೆಸಲಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಅನ್ನು ಕೆಲವು ದಿನಗಳ ಹಿಂದೆ ಇದೇ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.