Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾದ ರಾಧಿಕಾ ಕುಮಾರಸ್ವಾಮಿ
ನಟಿ ರಾಧಿಕಾ ಕುಮಾರಸ್ವಾಮಿ ಅವರು ಸಿಸಿಬಿ ಮುಂದೆ ಇಂದು ಹಾಜರಾಗಿದ್ದು, ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ.
Recommended Video
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನಿನ್ನೆ ನೊಟೀಸ್ ಜಾರಿ ಮಾಡಿದ್ದರು. ಅದರಂತೆ ಇಂದು ರಾಧಿಕಾ ಕುಮಾರಸ್ವಾಮಿ ಅವರು ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.
ಸಿಸಿಬಿ ಕಚೇರಿಯಲ್ಲಿ ರಾಧಿಕಾ ಕುಮಾರಸ್ವಾಮಿ !
ವಂಚಕ ಸ್ವಾಮಿ ಖಾತೆಯಿಂದ ಹಣ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿರುವ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಎಸಿಎಂ ಎಂ.ಎನ್. ನಾಗರಾಜ್ ವಿಚಾರಣೆ ನಡೆಸುತ್ತಿದ್ದಾರೆ.#RadhikaKumaraswamy #CCB pic.twitter.com/aU491MVuh9— oneindiakannada (@OneindiaKannada) January 8, 2021
ಆರ್ಆರ್ಆರ್ ಮುಖಂಡನ ಹೆಸರಿನಲ್ಲಿ ನಿಗಮ ಮಂಡಳಿಗಳಲ್ಲಿ ಅಧಿಕಾರ ಕೊಡಿಸುವುದಾಗಿ, ರಾಜ್ಯಪಾಲರನ್ನಾಗಿ ಮಾಡುವುದಾಗಿ ಸುಳ್ಳು ಹೇಳಿ ಹಲವರಿಂದ ಕೋಟ್ಯಂತರ ಹಣವನ್ನು ವಸೂಲಿ ಮಾಡಿದ್ದ ಯುವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಹಣ ವರ್ಗಾವಣೆ ಆಗಿದ್ದ ಕಾರಣ ರಾಧಿಕಾ ಅವರನ್ನು ಸಿಸಿಬಿ ವಿಚಾರಣೆ ನಡೆಸುತ್ತಿದೆ.
ರಾಧಿಕಾ ಅವರು 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿ ಪ್ರವೇಶಿಸಿದ್ದು, ಸಿಸಿಬಿಯ ಎಸಿಪಿ ನಾಗರಾಜ್ ಹಾಗೂ ತಂಡದಿಂದ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಯುತ್ತಿದೆ. ತಂಡದಲ್ಲಿ ಮಹಿಳಾ ಅಧಿಕಾರಿಗಳು ಸಹ ಇರಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರ ಮೊಬೈಲ್ ಅನ್ನು ವಶಕ್ಕೆ ಪಡೆವ ಸಾಧ್ಯತೆ ಇದೆ.
ಯುವರಾಜ್ ಜೊತೆಗಿನ ಹಣಕಾಸು ಸಂಬಂಧ. ಆತನ ಪರಿಚಯ, ಹಣ ಪಡೆದುಕೊಂಡಿದ್ದಕ್ಕೆ ಕಾರಣ. ಬೇರೆ ಇತರೆ ಹಣಕಾಸು ವ್ಯವಹಾರಗಳು ಇನ್ನಿತರೆ ವಿಷಯಗಳ ಬಗ್ಗೆ ಸಿಸಿಬಿ ಪೊಲೀಸರು ರಾಧಿಕಾ ಕುಮಾರಸ್ವಾಮಿ ಅನ್ನು ವಿಚಾರಣೆ ನಡೆಸಲಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಅನ್ನು ಕೆಲವು ದಿನಗಳ ಹಿಂದೆ ಇದೇ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.