»   » ರವಿಚಂದ್ರನ್ 'ರಾಜೇಂದ್ರ ಪೊನ್ನಪ್ಪ'ಗೆ ರಾಧಿಕಾ ಕುಮಾರಸ್ವಾಮಿ ನಾಯಕಿ

ರವಿಚಂದ್ರನ್ 'ರಾಜೇಂದ್ರ ಪೊನ್ನಪ್ಪ'ಗೆ ರಾಧಿಕಾ ಕುಮಾರಸ್ವಾಮಿ ನಾಯಕಿ

Posted By:
Subscribe to Filmibeat Kannada

ಕ್ರೇಜಿಸ್ಟಾರ್ ರವಿಚಂದ್ರನ್ ರವರು ಸುದೀಪ್ ನಾಯಕ ನಟನೆಯ 'ಹೆಬ್ಬುಲಿ' ಚಿತ್ರದಲ್ಲಿ ಕಾಣಿಸಿಕೊಂಡ ನಂತರ, ಅವರ ಅಭಿನಯದ ಮೂರು ಚಿತ್ರಗಳು ಸೆಟ್ಟೇರಿವೆ.

ರವಿಚಂದ್ರನ್ ಅಭಿನಯದ ಈ ಮೂರು ಚಿತ್ರಗಳಲ್ಲಿ ಎರಡು ಚಿತ್ರಗಳಿಗೆ ಇತರೆ ನಿರ್ದೇಶಕರು ಆಕ್ಷನ್ ಕಟ್ ಹೇಳುತ್ತಿದ್ದು, 'ರಾಜೇಂದ್ರ ಪೊನ್ನಪ್ಪ' ಚಿತ್ರವನ್ನು ಮಾತ್ರ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಇಷ್ಟುದಿನ ನಾಯಕಿ ಯಾರು ಎಂಬ ಪ್ರಶ್ನೆ ಕಾಡುತ್ತಿತ್ತು. ಈಗ ಈ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ಶಿವರಾತ್ರಿ ಹಬ್ಬಕ್ಕೆ ಹೊಸ ದಾಖಲೆ ಬರೆಯಲಿದ್ದಾರೆ ರವಿಚಂದ್ರನ್

Radhika Kumaraswamy is the heroine for Ravichandran Starrer 'Rajendra Ponnappa' film

ನಟಿ ರಾಧಿಕಾ ಕುಮಾರಸ್ವಾಮಿ ರವರು ಅಂತಿಮವಾಗಿ 'ರಾಜೇಂದ್ರ ಪೊನ್ನಪ್ಪ' ಚಿತ್ರದ ನಾಯಕಿಯಾಗಿ ಆಯ್ಕೆ ಆಗಿದ್ದು, ಶೀಘ್ರದಲ್ಲಿ ಚಿತ್ರೀಕರಣಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದಿದೆ. ಈ ಹಿಂದೆ ರಾಧಿಕಾ ಅವರು 'ಹಠವಾದಿ' ಚಿತ್ರದಲ್ಲಿ ಕ್ರೇಜಿಸ್ಟಾರ್ ಗೆ ನಾಯಕಿಯಾಗಿ, 'ಒಡಹುಟ್ಟಿದವಳು' ಚಿತ್ರದಲ್ಲಿ ತಂಗಿಯಾಗಿ ನಟಿಸಿದ್ದರು. ಈಗ ರವಿಚಂದ್ರನ್ ರವರು ನಟನೆ ಮತ್ತು ನಿರ್ದೇಶನದ ಜೊತೆಗೆ ನಿರ್ಮಾಣ ಮಾಡುತ್ತಿರುವ 'ರಾಜೇಂದ್ರ ಪೊನ್ನಪ್ಪ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಲಿದ್ದಾರೆ.

ಹೊಸ ಅದೃಷ್ಟ ಪರೀಕ್ಷೆಗೆ ನಿಂತ ರಾಧಿಕಾ ಕುಮಾರಸ್ವಾಮಿ, ಏನದು?

'ರಾಜೇಂದ್ರ ಪೊನ್ನಪ್ಪ' ಟೈಟಲ್ ಅನ್ನು ರವಿಚಂದ್ರನ್ ರವರ 'ದೃಶ್ಯಂ' ಚಿತ್ರದಿಂದ ಆಯ್ದುಕೊಳ್ಳಲಾಗಿದೆ. ಈ ಚಿತ್ರದಲ್ಲಿ ಅವರು ಕ್ರಿಮಿನಲ್ ಲಾಯರ್ ಆಗಿ ಪಾತ್ರ ನಿರ್ವಹಿಸಲಿದ್ದಾರೆ. ಜಿ.ಎಸ್.ವಿ ಸೀತಾರಾಮ್ ಛಾಯಾಗ್ರಹಣ, ಗೌತಮ್ ಶ್ರೀವತ್ಸ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

English summary
Actress Radhika has been selected as the heroine for Ravichandran starrer 'Rajendra Ponnappa' and the actress will be joining the set soon. This movie is directs by Ravichandran.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada