For Quick Alerts
  ALLOW NOTIFICATIONS  
  For Daily Alerts

  ನಟಿ ರಾಧಿಕಾ ಕುಮಾರಸ್ವಾಮಿ ಮಸ್ತ್ ಡಾನ್ಸ್‌: ವಿಡಿಯೋಗೆ ಭಾರಿ ಮೆಚ್ಚುಗೆ!

  |

  ರಾಧಿಕಾ ಕುಮಾರಸ್ವಾಮಿ ಇತ್ತೀಚೆಗೆ ಅಷ್ಟಾಗಿ ಸಿನಿಮಾ ಮಾಡುತ್ತಿಲ್ಲ. ಸಿನಿಮಾಗಳಿಗಿಂತಲೂ ರಾಧಿಕಾ ಅವರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯ ಆಗಿರುತ್ತಾರೆ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಒಂದೊಂದು ಅಪ್ಡೇಟ್‌ಗಳನ್ನು ಕೊಡುತ್ತಾ ಇರುತ್ತಾರೆ. ಜೊತೆಗೆ ಫೋಟೊ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ.

  ಇತ್ತೀಚೆಗೆ ರಾಧಿಕಾ ಅವರು ಡಾನ್ಸ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ರಾಧಿಕ ಅವರ ಡಾನ್ಸ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ರಾಧಿಕಾ ಅವರು ಮತ್ತೊಂದು ವಿಡಿಯೋ ಅಪ್ಲೋಡ್‌ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಧಿಕಾ ಅವರು ಸಿಕ್ಕಾಪಟ್ಟೆ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ.

  ಕಪ್ಪು ಬಣ್ಣದ ಗೌನ್‌ ತೊಟ್ಟು ಹಿಂದಿಯ 'ಮೇರ ಯಾರ್' ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಾಧಿಕಾ ಅವರ ಈ ವಿಡಿಯೋ ಕೂಡ ಸಾಕಷ್ಟು ಮೆಚ್ಚುಗೆ ಗಳಿಸಿದೆ. ವಿಡಿಯೋ ವೈರಲ್‌ ಆಗಿದೆ. ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅವರ ಅಭಿಮಾನಿ ಬಳಗವನ್ನು ಈ ರೀತಿಯಾಗಿ ರಂಜಿಸುತ್ತಾ ಇರುತ್ತಾರೆ.


  ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಅಭಿನಯ ಮಾತ್ರ ಅಲ್ಲ, ಅವರಿಗೆ ಡಾನ್ಸ್‌ನಲ್ಲೂ ಅಷ್ಟೇ ಹೆಚ್ಚಿನ ಆಸಕ್ತಿ ಇದೆ. ಇದೀಗ ಅರೆಯದ ಹುಡುಗಿರು ಕೂಡ ನಾಚುವಂತೆ ಡಾನ್ಸ್ ಮಾಡಿದ್ದಾರೆ. ಸಿಕ್ಕಾಪಟ್ಟೆ ಎನರ್ಜಿಯಿಂದ ರಾಧಿಕಾವರು ಈ ವಿಡಿಯೋದಲ್ಲಿ ಸ್ಟೆಪ್‌ ಹಾಕಿದ್ದಾರೆ. ಅವರ ಎನರ್ಜಿ ಬಗ್ಗೆ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. ಜೊತೆಗೆ ಅವರ ನೃತ್ಯವನ್ನು ಮೆಚ್ಚಿಕೊಂಡಿದ್ದಾರೆ.

  ಇನ್ನು ರಾಧಿಕಾ ಅವರು ಮುಂದೆ ಯಾವ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡಲ್ಲ. ಅದರೆ ಅವರು ಆದಷ್ಟು ಬೇಗ ಮತ್ತೊಂದು ಸಿನಿಮಾ ಮಾಡಲಿ ಎನ್ನುವುದು ಅವರ ಅಭಿಮಾನಿಗಳ ಮಹತ್ತರ ಆಸೆ ಆಗಿದೆ. ಅದನ್ನು ಕೂಡ ಸಾಕಷ್ಟು ಮಂದಿ ಕಮೆಂಟ್‌ ಮೂಲಕ ತಿಳಿಸಿದ್ದಾರೆ.

  English summary
  Radhika Kumaraswamy New Dance Goes Viral, Fans want Her Comeback
  Tuesday, January 18, 2022, 13:56
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X