Just In
- 2 hrs ago
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- 2 hrs ago
'ದಳಪತಿ 65' ಸಿನಿಮಾಗೆ ಇವರೇ ನಾಯಕಿ; ಟ್ವಿಟ್ಟರ್ ನಲ್ಲಿ ಅಭಿಮಾನಿಗಳ ಟ್ರೆಂಡ್
- 3 hrs ago
ಶಿವಣ್ಣನಿಗೆ ಕೃಷ್ಣ-ಮಿಲನಾ ಜೋಡಿಯ ಮದುವೆ ಆಮಂತ್ರಣ- ಡಿ ಬಾಸ್ ಗೆ ಯಾವಾಗ ಕೊಡ್ತೀರಾ ಎನ್ನುತ್ತಿದ್ದಾರೆ ಅಭಿಮಾನಿಗಳು
- 11 hrs ago
ಮತ್ತೆ ಬಾಲಿವುಡ್ಗೆ ಪಯಣ ಬೆಳೆಸಿದ ದುಲ್ಕರ್ ಸಲ್ಮಾನ್
Don't Miss!
- News
ಚುನಾವಣೆಗೂ ಮುನ್ನ ಅಮಿತ್ ಶಾ ಜೊತೆ ಇಪಿಎಸ್ ಮಹತ್ವದ ಚರ್ಚೆ
- Automobiles
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
RSS ಮುಖಂಡ ಅಂತೇಳಿ ಕೋಟಿಗಟ್ಟಲೆ ವಂಚಿಸಿದ ಯುವರಾಜ್: ಖ್ಯಾತ ನಟಿ, ಸಹೋದರನ ಹೆಸರು ಲಿಂಕ್?
ಆರ್‌ಎಸ್ಎಸ್ ಮುಖಂಡ ಅಂತೇಳಿ ಪ್ರಮುಖ ವ್ಯಕ್ತಿ ಹಾಗೂ ಉದ್ಯಮಿಗಳಿಂದ ಕೋಟ್ಯಾಂತರ ರೂಪಾಯಿ ವಂಚಿಸಿರುವ ಆರೋಪದಲ್ಲಿ ಯುವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಆರ್‌ಎಸ್‌ಎಸ್ ರಾಷ್ಟ್ರೀಯ ಮುಖಂಡರು ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಹೆಸರು ಹೇಳಿಕೊಂಡು, 'ಎಲ್ಲರೂ ನನಗೆ ಆಪ್ತರು, ನಿಮಗೆ ಒಳ್ಳೆಯ ಸ್ಥಾನ ಕೊಡಿಸುತ್ತೇನೆ' ಎಂದು ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು.
ಸಿಸಿಬಿ ಪೊಲೀಸರು ಯುವರಾಜ್ ಮನೆ ಮೇಲೆ ದಾಳಿ ನಡೆಸಿ ಅರೆಸ್ಟ್ ಮಾಡಿದ್ದರು. ಇದೀಗ, ವಿಚಾರಣೆ ವೇಳೆ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಅವರ ಸಹೋದರನ ಖಾತೆಗೆ ಭಾರಿ ಮೊತ್ತದ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆ ರಾಧಿಕಾ ಮತ್ತು ಸಹೋದರನಿಗೆ ಈ ಕೇಸ್ ಕಂಟಕ ಆಗಲಿದ್ಯಾ ಎಂಬ ಅನುಮಾನ ಶುರುವಾಗಿದೆ. ಈ ಸಂಬಂಧ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಟಿವಿ 9 ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದು, ''ಆತ ನಮ್ಮ ಕುಟುಂಬಕ್ಕೆ ಪರಿಚಿತ, ಆದರೆ, ಹಣಕಾಸಿನ ವ್ಯವಹಾರ ನಡೆದಿಲ್ಲ'' ಎಂದು ತಿಳಿಸಿದ್ದಾರೆ. ಮುಂದೆ ಓದಿ....
ರಾಜ್ಯಪಾಲರನ್ನಾಗಿ ಮಾಡ್ತೀನಿ ಅಂತ 10 ಕೋಟಿ ವಂಚಿಸಿದ ಯುವರಾಜ !

ನಮ್ಮ ಕುಟುಂಬಕ್ಕೆ ಸ್ವಾಮೀಜಿಯಾಗಿ ಪರಿಚಿತರು
''ಯುವರಾಜ್ ಸ್ವಾಮಿ ಎಂಬ ವ್ಯಕ್ತಿ ನಮ್ಮ ಕುಟುಂಬಕ್ಕೆ 15 ವರ್ಷದಿಂದ ಪರಿಚಿತರು. ಅವರ ಭವಿಷ್ಯವನ್ನು ನಮ್ಮ ತಂದೆ-ತಾಯಿ ಹೆಚ್ಚು ನಂಬುತ್ತಿದ್ದರು. ನಮ್ಮ ತಂದೆ ಸಾವಿನ ವಿಚಾರದಲ್ಲೂ ಅವರು ಹೇಳಿದ ಭವಿಷ್ಯ ನಿಜವಾಗಿತ್ತು ಎಂದು ತಮ್ಮ ತಾಯಿ ಹೇಳಿದ್ದರು. ಹೀಗೆ, ನಮ್ಮ ಕುಟುಂಬಕ್ಕೆ ಪರಿಚಿತರು ಅಷ್ಟೇ. ಇದನ್ನು ಬಿಟ್ಟು ಬೇರೆ ಯಾವುದೇ ರೀತಿಯ ವ್ಯವಹಾರಿಕ ಸಂಬಂಧ ನಮ್ಮ ಮತ್ತು ಅವರು ನಡುವೆ ಇಲ್ಲ'' ಎಂದು ಟಿವಿ9 ವಾಹಿನಿಗೆ ಸ್ಪಷ್ಟನೆ ನೀಡಿದ್ದಾರೆ.

ಸಿಸಿಬಿ ವಿಚಾರಣೆಗೆ ಕರೆದಿದ್ದರು
ಯುವರಾಜ್ ಜೊತೆಗಿನ ಸಂಪರ್ಕದ ಹಿನ್ನೆಲೆ ಸಿಸಿಬಿ ಪೊಲೀಸರು ರವಿರಾಜ್ ಅವರನ್ನು ವಿಚಾರಣೆ ಮಾಡಿದ್ದರು ಎಂದು ಸ್ವತಃ ರವಿರಾಜ್ ಮಾಹಿತಿ ನೀಡಿದ್ದಾರೆ. 'ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ಒಂದು ಗಂಟೆ ಕಾಲ ವಿಚಾರಣೆಗೆ ಒಳಪಟ್ಟಿದ್ದೆ'' ಎಂದು ಒಪ್ಪಿಕೊಂಡಿದ್ದಾರೆ.

ರಾಧಿಕಾ ಹಣಕಾಸಿನ ವ್ಯವಹಾರದ ಬಗ್ಗೆ ಗೊತ್ತಿಲ್ಲ
ಬಂಧಿತ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಅವರಿಗೂ ಹಾಗು ರವಿರಾಜ್ ಇಬ್ಬರಿಗೂ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ರವಿರಾಜ್ ''ನನ್ನ ಖಾತೆಗೆ ಹಣ ವರ್ಗಾವಣೆ ಆಗಿಲ್ಲ, ನನಗೂ ಮತ್ತು ಅವರ ನಡುವೆ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ನನ್ನ ಸಹೋದರಿ ಕುರಿತು ನನಗೆ ಸದ್ಯಕ್ಕೆ ಮಾಹಿತಿ ಇಲ್ಲ'' ಎಂದು ಹೇಳಿದ್ದಾರೆ.

ಮಧ್ಯಾಹ್ನ ಸುದ್ದಿಗೋಷ್ಠಿ?
ಸದ್ಯ ಬೆಂಗಳೂರಿನಿಂದ ಹೊರಗೆ ಇರುವ ರಾಧಿಕಾ ಕುಮಾರಸ್ವಾಮಿ ಮತ್ತು ರವಿರಾಜ್ ಮಧ್ಯಾಹ್ನದ ವೇಳೆ ಡಾಲರ್ಸ್ ಕಾಲೋನಿಯಲ್ಲಿರುವ ಮನೆಗೆ ಬರಲಿದ್ದಾರೆ. ಆ ನಂತರ 2.30ರ ವೇಳೆ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಸ್ಪಷ್ಟನೆ ನೀಡಲಿದ್ದಾರೆ ಎಂದು ಸ್ವತಃ ರವಿರಾಜ್ ಅವರೇ ಮಾಹಿತಿ ನೀಡಿದ್ದಾರೆ.