ಸಿಸಿಬಿ ವಿಚಾರಣೆ ಮುಗಿಸಿ ಮೈಸೂರಿನತ್ತ ಪ್ರಯಾಣ ಬೆಳೆಸಿದ ರಾಧಿಕಾ ಕುಮಾರಸ್ವಾಮಿ
ವಂಚನೆ ಆರೋಪದಲ್ಲಿ ಬಂಧನವಾಗಿರುವ ಯುವರಾಜ್ ಖಾತೆಯಿಂದ ಕೋಟ್ಯಾಂತರ ರೂಪಾಯಿ ವರ್ಗಾವಣೆ ಆಗಿದೆ ಎಂಬ ಆರೋಪದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು.
Recommended Video
ನೋಟಿಸ್ ಹಿನ್ನೆಲೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಇಂದು ಭೇಟಿ ನೀಡಿದ್ದ ರಾಧಿಕಾ ಕುಮಾರಸ್ವಾಮಿ, ತಮ್ಮ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ.
ವಿಚಾರಣೆ ಮುಗಿಸಿ ಹೊರಗೆ ಬಂದ ನಟಿ ''ಸಿಸಿಬಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ, ಅಗತ್ಯವಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗುತ್ತೇನೆ'' ಎಂದು ಪ್ರತಿಕ್ರಿಯೆ ನೀಡಿದರು.

ಸಿಸಿಬಿ ಕಚೇರಿಯಿಂದ ಹೊರಟ ರಾಧಿಕಾ ಕುಮಾರಸ್ವಾಮಿ ಮೈಸೂರಿನ ಕಡೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರು ರಸ್ತೆಯಲ್ಲಿ ರಾಧಿಕಾ ಕುಮಾರಸ್ವಾಮಿ ಹೊರಟರು ಎಂದು ತಿಳಿದು ಬಂದಿದೆ.
ರಾಧಿಕಾ ವಿಚಾರಣೆ ಹಿನ್ನೆಲೆ ಸಹೋದರ ರವಿರಾಜ್ ಅವರನ್ನು ಸಹ ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದರು. ರಾಧಿಕಾ ಹಾಗೂ ರವಿರಾಜ್ ಇಬ್ಬರನ್ನು ಮುಖಾಮುಖಿ ಕೂರಿಸಿ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.
ಸಿಸಿಬಿ ವಿಚಾರಣೆಯಲ್ಲಿ ಯಾವೆಲ್ಲ ಪ್ರಶ್ನೆಗಳು ಕೇಳಲಾಯಿತು ಹಾಗೂ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಯಿತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಆರ್‌ಎಸ್‌ಎಸ್ ಮುಖಂಡ ಎಂದು ಹೇಳಿಕೊಂಡು ಪ್ರಭಾವಿ ವ್ಯಕ್ತಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಯುವರಾಜ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಯಿಂದ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ 15 ಲಕ್ಷ ಹಾಗೂ ಗೊತ್ತಿರುವವರ ಕಡೆಯಿಂದ 60 ಲಕ್ಷ, ಒಟ್ಟು 75 ಲಕ್ಷ ಹಣ ವರ್ಗಾವಣೆ ಆಗಿದೆ. ಈ ಸಂಬಂಧ ಪೊಲೀಸರು ವಿವರಣೆ ಕೇಳಿದ್ದಾರೆ ಎನ್ನಲಾಗಿದೆ.
ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದು ರಾಧಿಕಾ ''75 ಲಕ್ಷ ಹಣ ನನ್ನ ಖಾತೆಗೆ ಬಂದಿರುವುದು ನಿಜ. ಅದು ಸಿನಿಮಾ ಸಂಬಂಧ ಅಡ್ವಾನ್ಸ್ ನೀಡಿದ್ದರು. ಅದನ್ನು ಬಿಟ್ಟರೆ ಬೇರೆ ವ್ಯವಹಾರವೂ ನಡೆದಿಲ್ಲ'' ಎಂದು ಹೇಳಿದ್ದರು.


Click it and Unblock the Notifications











