ಪಂಚ ಭಾಷೆಯಲ್ಲಿ ಮಿಂಚಲಿದ್ದಾರೆ ರಾಧಿಕಾ ಕುಮಾರಸ್ವಾಮಿ
Recommended Video
ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ 'ದಮಯಂತಿ'ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ. ಹಾಗಂತ ಈ ತಿಂಗಳು ರಾಧಿಕಾ ಅಭಿನಯದ ಸಿನಿಮಾ ರಿಲೀಸ್ ಆಗುತ್ತೆ ಅಂತ ಅಂದ್ಕೋಬೇಡಿ 'ದಮಯಂತಿ' ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.
ಹೌದು, 'ದಮಯಂತಿ' ಚಿತ್ರದ ಟೀಸರ್ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ 'ದಮಯಂತಿ' ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ವಿಶೇಷ ಅಂದ್ರೆ ಚಿತ್ರ ಐದು ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.
ಸದ್ಯ ಟೀಸರ್ ಕೂಡ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿದೆ ಚಿತ್ರತಂಡ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಅಂದ್ಹಾಗೆ ಹಿಂದಿ ಮತ್ತು ಮಲಯಾಳಂಗೆ 'ದಮಯಂತಿ' ಡಬ್ ಮಾಡಲಾಗಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಕನ್ನಡದಂತೆ ನೇರವಾಗಿ ಚಿತ್ರೀಕರಣ ಮಾಡಿರುವುದು ವಿಶೇಷ.

ಇನ್ನು ವಿಶೇಷ ಅಂದ್ರೆ ಐದು ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಟೀಸರ್ ಅನ್ನು, ಆಯಾಯ ಭಾಷೆಯಲ್ಲಿ ಅಲ್ಲಿನ ಸ್ಟಾರ್ ನಟರ ಬಳಿ ಅದ್ಧೂರಿಯಾಗಿ ರಿಲೀಸ್ ಮಾಡಿಸುವ ಪ್ಲಾನ್ ಮಾಡಿದೆ ಚಿತ್ರತಂಡ. ಈ ತಿಂಗಳ ಅಂತ್ಯಕ್ಕೆ ಟೀಸರ್ ರಿಲೀಸ್ ಆದ್ರೆ ಮುಂದಿನ ತಿಂಗಳು ಆಗಸ್ಟ್ ನಲ್ಲಿ ಚಿತ್ರದ ಹಾಡುಗಳು ತೆರೆಗೆ ಬರುವ ಸಾಧ್ಯತೆ ಇದೆ.
ದಮಯಂತಿ ನವರಸನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈಗಾಗಲೆ ರಿಲೀಸ್ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ಒಂದಿಷ್ಟು ಲುಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸದ್ಯ ಐದು ಭಾಷೆಯಲ್ಲಿ ಅಬ್ಬರಿಸಲು ಸಿದ್ಧವಾಗಿರುವ ದಮಯಂತಿ ಸೆಪ್ಟಂಬರ್ ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.


Click it and Unblock the Notifications











