»   » ಹೊಸ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾದ ರಾಧಿಕಾ ಪಂಡಿತ್

ಹೊಸ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾದ ರಾಧಿಕಾ ಪಂಡಿತ್

Posted By:
Subscribe to Filmibeat Kannada

ನಟಿ ರಾಧಿಕಾ ಪಂಡಿತ್ ಮದುವೆಯ ಬಳಿಕ ಒಂದು ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚಿಗಷ್ಟೆ ನೆರವೇರಿತ್ತು. ಅದೇ ರೀತಿ ಈಗ ಈ ಚಿತ್ರದ ಶೂಟಿಂಗ್ ಶುರುವಾಗಿದ್ದು ರಾಧಿಕಾ ಪಂಡಿತ್ ಕೂಡ ಅದರಲ್ಲಿ ಭಾಗಿಯಾಗಿದ್ದಾರೆ.

ತಮ್ಮ ಹೊಸ ಸಿನಿಮಾದ ಮೊದಲ ದಿನದ ಚಿತ್ರೀಕರಣದ ಫೋಟೋವನ್ನು ರಾಧಿಕಾ ಪಂಡಿತ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ ನಲ್ಲಿ ತೆಗೆದ ಈ ಫೋಟೋದಲ್ಲಿ ರಾಧಿಕಾ ಸಿಂಪಲ್ ಸುಂದರಿ ಆಗಿದ್ದಾರೆ. ಇನ್ನು ಮತ್ತೆ ಸಿನಿಮಾ ಮಾಡುತ್ತಿರುವ ರಾಧಿಕಾ ಅವರಿಗೆ ಅವರ ಅನೇಕ ಅಭಿಮಾನಿಗಳು ಕಮೆಂಟ್ ಮಾಡಿ ಶುಭ ಕೋರಿದ್ದಾರೆ.

Radhika Pandit's new movie shooting started

ಅಂದಹಾಗೆ, ರಾಧಿಕಾ ಪಂಡಿತ್ ಅವರ ಹೊಸ ಸಿನಿಮಾಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕರಾದ ಮಣಿರತ್ನಂ ಅವರ ಜೊತೆ ಕೆಲಸ ಮಾಡಿದ್ದ ನಿರ್ದೇಶಕಿ ಪ್ರಿಯಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದೆ ತಮಿಳಿನಲ್ಲಿ ಅವರು ಮೂರು ಚಿತ್ರವನ್ನು ನಿರ್ದೇಶಿಸಿದ್ದಾರೆ. ರಾಧಿಕಾ ಪಂಡಿತ್ ಅವರ ಈ ಸಿನಿಮಾ ಮಹಿಳಾ ಪ್ರಧಾನ ಚಿತ್ರವಾಗಿಲ್ಲ. ಅವರ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ ಹೀರೋ ಪಾತ್ರಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆಯಂತೆ. ಇನ್ನು 'ರಂಗಿತರಂಗ' ಖ್ಯಾತಿಯ ನಟ ನಿರೂಪ್ ಭಂಡಾರಿ ಈ ಚಿತ್ರದ ಹೀರೋ ಆಗಿದ್ದು, ಚಿತ್ರದ ಟೈಟಲ್ ಇನ್ನು ಬಹಿರಂಗ ಆಗಿಲ್ಲ.

English summary
Kannada actress Radhika Pandit and Nirup Bhandari's new movie shooting started. The movie is producing by Rockline Venkatesh.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X