For Quick Alerts
  ALLOW NOTIFICATIONS  
  For Daily Alerts

  ಮದುವೆ ವಾರ್ಷಿಕೋತ್ಸವ ಸಂಭ್ರಮದ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

  |

  ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಇತ್ತೀಚಿಗಷ್ಟೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ.

  2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

  ಐರಾ ಯಶ್ ಗೆ ಹುಟ್ಟುಹಬ್ಬದ ಸಂಭ್ರಮ; ಅಪರೂಪದ ಫೋಟೋ ಶೇರ್ ಮಾಡಿ ವಿಶ್ ಮಾಡಿದ ರಾಧಿಕಾ

  4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

  ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.

  ಇದಕ್ಕೋಸ್ಕರ ತುಂಬಾ ದಿನದಿಂದ ಕಾಯ್ತಾ ಇದ್ದೆ | prajwal Devaraj | Veeram | Filmibeat Kannada

  ರಾಧಿಕಾ ಸದ್ಯ ಇಬ್ಬರು ಮುದ್ದಾದ ಮಕ್ಕಳನ್ನು ನೋಡಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಯಶ್ ಕೆಜಿಎಫ್-2 ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಹೈದರಾಬಾದ್ ನಲ್ಲಿ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

  English summary
  Actres Radhika Pandit shares their fourth year wedding anniversary celebration photo.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X