For Quick Alerts
  ALLOW NOTIFICATIONS  
  For Daily Alerts

  ಅಪರೂಪದ ಫೋಟೋ ಶೇರ್ ಮಾಡಿ ಮುದ್ದು ಮಗನಿಗೆ ರಾಧಿಕಾ ವಿಶ್ ಮಾಡಿದ್ದು ಹೀಗೆ

  |

  ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಎರಡನೇ ಮಗನ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇವತ್ತಿಗೆ (ಅ.30) ಯಶ್ ಎರಡನೇ ಮಗು ಯಥರ್ವ್ ಹುಟ್ಟಿ ಒಂದು ವರ್ಷವಾಗಿದೆ. ಕಳೆದ ವರ್ಷ 2019 ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಎರಡನೇ ಮಗುವಿಗೆ ಜನ್ಮ ನೀಡಿದ್ದರು.

  ಇಂದು ರಾಧಿಕಾ ದಂಪತಿ ಮಗನ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಆದರೆ ಅದ್ದೂರಿ ಹುಟ್ಟುಹಬ್ಬಕ್ಕೆ ಕೊರೊನಾ ಬ್ರೇಕ್ ಹಾಕಿದೆ. ಮುದ್ದು ಮಗನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದರು, ಆದರೀಗ ಸರಳವಾಗಿ ತೀರಾ ಆಪ್ತರ ಜೊತೆ ಮಾತ್ರ ಸೆಲೆಬ್ರೇಟ್ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ.

  ರಾಕಿಂಗ್ ಸ್ಟಾರ್ ಯಶ್ ಮಗನ ಮೊದಲ ವರ್ಷದ ಹುಟ್ಟುಹಬ್ಬದ ಪ್ಲಾನ್ ಏನು?ರಾಕಿಂಗ್ ಸ್ಟಾರ್ ಯಶ್ ಮಗನ ಮೊದಲ ವರ್ಷದ ಹುಟ್ಟುಹಬ್ಬದ ಪ್ಲಾನ್ ಏನು?

  ಅಂದ್ಹಾಗೆ ಮುದ್ದು ಮಗನ ಹುಟ್ಟುಹಬ್ಬಕ್ಕೆ ರಾಧಿಕಾ ಪಂಡಿತ್ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. ಮಗನ ಅಪರೂಪದ ಫೋಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಗರ್ಭಿಣಿ ಆಗಿದ್ದ ಫೋಟೋದಿಂದ ಯಥರ್ವ್ ನಿಗೆ ಒಂದು ವರ್ಷ ತುಂಬುವವರೆಗಿನ ಎಲ್ಲಾ ಫೋಟೋವನ್ನು ಶೇರ್ ಮಾಡಿದ್ದಾರೆ.

  ಯಥರ್ವ್ ಜನಿಸಿದಾಗ ಯಶ್ ಮಗುವನ್ನು ರಾಧಿಕಾಗೆ ತೋರಿಸುತ್ತಿರುವ ಸುಂದರ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ. ಈ ಎಲ್ಲಾ ಅಪರೂಪದ ಫೋಟೋಗಳನ್ನು ಹಂಚಿಕೊಂಡು ರಾಧಿಕಾ ಮಗನಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. "ಹುಟ್ಟುಹಬ್ಬ ಶುಭಾಶಯಗಳು ನನ್ನ ಪ್ರೀತಿಯ ಮಗನೆ. ಯಾವಾಗಲು ನಿನ್ನನ್ನು ಪ್ರೀತಿಸುತ್ತೇನೆ" ಎಂದು ಮಗನಿಗೆ ಶುಭ ಹಾರೈಸಿದ್ದಾರೆ.

  ರಾಧಿಕಾ ಪೋಸ್ಟ್ ಗೆ ಸಿಕ್ಕಾಪಟ್ಟೆ ಲೈಕ್ಸ್ ಹರಿದುಬರುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ. ಅಂದ್ಹಾಗೆ ಮಗನ ಹುಟ್ಟುಹಬ್ಬವನ್ನು ಮನೆಯಲ್ಲೇ ಆಚರಣೆ ಮಾಡಲು ಯಶ್ ದಂಪತಿ ನಿರ್ಧರಿಸಿದ್ದಾರಂತೆ.

  ಮುನಿರತ್ನ ಈ ದೊಡ್ಡ ಗುಣಕ್ಕೆ ನಾನು ಅವರ ಬೆಂಬಲಕ್ಕೆ ನಿಂತಿದ್ದೇನೆ | Filmibeat Kannada

  ಮಗಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಇಡೀ ಚಿತ್ರರಂಗಕ್ಕೆ ಆಹ್ವಾನ ನೀಡಿದ್ದರು. ಬಹುತೇಕರು ಯಶ್ ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಮಗನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದರು. ಆದರೆ ಕೊರೊನಾ ಕಾರಣದಿಂದ ಅದ್ದೂರಿ ತನಕ್ಕೆ ಬ್ರೇಕ್ ಬಿದ್ದಿದೆ.

  English summary
  Radhika Pandit shares unseen pics her son Yatharv and She Wishes her son on his Birthday.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X