»   » ರಾಘವೇಂದ್ರ ರಾಜ್ ಕುಮಾರ್ ದಂಪತಿಗೆ ನಿರೀಕ್ಷಣಾ ಜಾಮೀನು

ರಾಘವೇಂದ್ರ ರಾಜ್ ಕುಮಾರ್ ದಂಪತಿಗೆ ನಿರೀಕ್ಷಣಾ ಜಾಮೀನು

Posted By:
Subscribe to Filmibeat Kannada

ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಹೆಂಡತಿ ಮಂಗಳಾಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಶನಿವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಘವೇಂದ್ರ ರಾಜ್ ಕುಮಾರ್ ಒಡೆತನದ ಚಲನಚಿತ್ರ ನಿರ್ಮಾಣ ಸಂಸ್ಥೆ ವಜ್ರೇಶ್ವರಿ ಕಂಬೈನ್ಸ್ ನಲ್ಲಿ ಅಕೌಂಟಂಟ್ ಆಗಿದ್ದ ಉಮೇಶ್ ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ರಾಘವೇಂದ್ರ ದಂಪತಿ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು.

Raghavendra Rajkumar couple get anticipatory bail

ಉಮೇಶ್ ಅವರು ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿಗೆ ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಮಂಗಳಾ ಅವರ ಕಿರುಕುಳವೇ ಕಾರಣ ಎಂದು ಉಮೇಶ್ ಮಗ ವಿನಾಯಕ ದೂರು ನೀಡಿದ್ದರಿಂದ ರಾಘವೇಂದ್ರ ದಂಪತಿಗೆ ಬಂಧನ ಭೀತಿ ಎದುರಾಗಿತ್ತು. ಆದ್ದರಿಂದ ನಿರೀಕ್ಷಣಾ ಜಾಮೀನು ಕೋರಿ ಅವರು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. [ರಾಘಣ್ಣ ದಂಪತಿ ವಿರುದ್ದ ಕೇಸ್ ದಾಖಲು]
English summary
Actor and producer and owner of Vajreshwari combines Raghavendra Rajkumar and his wife Mangala have been given interim anticipatory bail by sessions court in Bengaluru on Saturday. The couple were in soup due to suicide of worker in their production house. It was alleged that Raghavendra couple abetted the worker to commit suicide.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada