For Quick Alerts
  ALLOW NOTIFICATIONS  
  For Daily Alerts

  ಗ್ಯಾಂಗ್ ಸ್ಟರ್ ಜೊತೆ ಸೇರಿದ ಖ್ಯಾತ ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್

  |

  ಖ್ಯಾತ ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ರಘು ದೀಕ್ಷಿತ್ ಇದೀಗ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ.

  ಬ್ಯಾಂಗ್ ಎನ್ನುವ ಸಿನಿಮಾ ಮೂಲಕ ರಘು ದೀಕ್ಷಿತ್ ತೆರೆಮೇಲೆ ಬರಲು ಸಿದ್ಧರಾಗುತ್ತಿದ್ದಾರೆ. ಬ್ಯಾಂಗ್ ಇದೊಂದು ಗ್ಯಾಂಗ್ ಸ್ಟರ್ ಸಿನಿಮಾ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿ ಶಾನ್ವಿ ಶ್ರೀವಾಸ್ತವ್ ಕಾಣಿಸಿಕೊಳ್ಳುತ್ತಿದ್ದಾರೆ. ಗ್ಲಾಮರ್ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಶಾನ್ವಿ ಮೊದಲ ಬಾರಿಗೆ ಗ್ಯಾಂಗ್ ಸ್ಟರ್ ಆಗಿ ಕನ್ನಡ ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ.

  ಸುಳ್ಳು ಸುದ್ದಿ ಪ್ರಕಟಿಸಿದ ಚಾನೆಲ್‌ ವಿರುದ್ಧ ರಘು ದೀಕ್ಷಿತ್ ಗರಂ

  ಇನ್ನು ವಿಶೇಷ ಎಂದರೆ ಚಿತ್ರದಲ್ಲಿ ಮತ್ತೋರ್ವ ನಾಯಕಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಸಾತ್ವಿಕ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ರಘು ದೀಕ್ಷಿತ್ ಮತ್ತು ಶಾನ್ವಿ ಇಬ್ಬರು ಈ ತಿಂಗಳಿಂದ ಚಿತ್ರೀಕರಣದಲ್ಲಿ ಹಾಜರಾಗುತ್ತಿದ್ದಾರೆ.

  ಅಂದಹಾಗೆ ಬ್ಯಾಂಗ್ ಸಿನಿಮಾಗೆ ಶ್ರೀ ಗಣೇಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಬಾರಿಗೆ ಗಣೇಶ್ ಸಿನಿಮಾ ನಿರ್ದೇಶನಕ್ಕೆ ಕೈಹಾಕಿದ್ದು, ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ. ಬ್ಯಾಂಗ್ ಚಿತ್ರಕ್ಕೆ ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜನೆ ಮಾಡುತಿದ್ದಾರೆ.

  ರಘು ದೀಕ್ಷಿತ್ ಬಣ್ಣ ಹಚ್ಚುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ ಸಿದ್ದಾರ್ಥ್ ಮಹೇಶ್ ನಾಯಕನಾಗಿ ನಟಿಸುತ್ತಿರುವ 'ಗರುಡ' ಸಿನಿಮಾದಲ್ಲಿ ರಘು ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ರಘು ದೀಕ್ಷಿತ್ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ಆದರೆ ಈ ಸಿನಿಮಾ ಇನ್ನು ರಿಲೀಸ್ ಆಗಿಲ್ಲ.

  ತೆಲುಗಿನಲ್ಲಿ ರಾಬರ್ಟ್ ಆರ್ಭಟಕ್ಕೆ ಸಿಕ್ಕಿರುವ ಚಿತ್ರಮಂದಿರಗಳು ಎಷ್ಟು ಗೊತ್ತಾ | Darshan |Roberrt |Roberrt Telugu

  ಗರುಡ ಚಿತ್ರದಲ್ಲಿ ರಘು ಗುಪ್ತಚರ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮೊದಲ ಬಾರಿಗೆ ಬಣ್ಣ ಹಚ್ಚಿದ ರಘು ದೀಕ್ಷಿತ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಎರಡನೇ ಸಿನಿಮಾದಲ್ಲಿ ನಟಿಸಲು ತಯಾರಿ ನಡೆಸಿದ್ದಾರೆ.

  English summary
  Famous Singer And composer Raghu Dixit playing important role in Bang movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X