For Quick Alerts
  ALLOW NOTIFICATIONS  
  For Daily Alerts

  ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ರಾಗಿಣಿ

  |

  ನಟಿ ರಾಗಿಣಿ ದ್ವಿವೇದಿ ಕೆಲವು ದಿನಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಉಚಿತ ಆಹಾರ ವಿತರಣೆ, ದಿನಸಿ ಸಾಮಗ್ರಿ ವಿತರಣೆ ಇನ್ನಿತರೆ ಕಾರ್ಯಗಳನ್ನು ಮಾಡುತ್ತಿದ್ದಾರೆ.

  ಕೋವಿಡ್ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ನಟಿ Ragini Dwivedi | Filmibeat Kannada

  ನಟಿ ರಾಗಿಣಿ ದ್ವಿವೇದಿ ಇಂದು ಕೋವಿಡ್ ಲಸಿಕೆ ಪಡೆದಿದ್ದು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ. ಲಸಿಕೆ ಪಡೆದವರು ಒಂದು ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ. ಹಾಗಾಗಿ ರಾಗಿಣಿ ತಾವು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ.

  ರಕ್ತದಾನ ಮಾಡಿ ಪ್ರಮಾಣ ಪತ್ರ ಪಡೆದ ಚಿತ್ರಗಳನ್ನು ರಾಗಿಣಿ ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದು, ಹಲವಾರು ಮಂದಿ ರಾಗಿಣಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇತ್ತೀಚೆಗಷ್ಟೆ ನಟ ವಶಿಷ್ಟ ಸಿಂಹ ಸಹ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿ ಮಾದರಿಯಾಗಿದ್ದರು.

  ಲಸಿಕೆ ಪಡೆದ ಬಳಿಕ ಸಮಾಜ ಸೇವಾ ಕಾರ್ಯ ಮುಂದುವರೆಸಿರುವ ರಾಗಿಣಿ, ಸುಮಾರು 500 ಮಂದಿಗೆ ಉಚಿತವಾಗಿ ಆಹಾರ ನೀಡಿದ್ದಾರೆ.

  ಕೆಲವು ದಿನಗಳ ಹಿಂದೆಯಷ್ಟೆ ಸ್ಮಶಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ದಿನಸಿ ಸಾಮಗ್ರಿಗಳನ್ನು ರಾಗಿಣಿ ಹಂಚಿದ್ದರು. ಪ್ರತಿದಿನವೂ ಆಹಾರ ವಿತರಣೆ ಮಾಡುತ್ತಿರುವ ರಾಗಿಣಿ, ಸಮಾಜ ಸೇವೆಯ ವಿಡಿಯೋ, ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

  ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಟಿ ರಾಗಿಣಿ ದ್ವಿವೇದಿ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. 140 ದಿನಗಳ ಕಾಲ ಜೈಲುವಾಸ ಅನುಭವಿಸಿದ ರಾಗಿಣಿ ಆ ನಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದರು. ಪ್ರಕರಣದ ವಿಚಾರಣೆ ಇನ್ನೂ ಜಾರಿಯಲ್ಲಿದೆ.

  ರಾಗಿಣಿ ಜೊತೆಗೆ ನಟಿ ಸಂಜನಾ ಗಲ್ರಾನಿಯನ್ನು ಸಹ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಅವರೂ ಸಹ ಜಾಮೀನಿನ ಮೇಲೆ ಹೊರಗೆ ಇದ್ದು, ಸಂಜನಾ ಸಹ ಈಗ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

  English summary
  Actress Ragini Dwivedi donate blood before taking vaccine today. She doing social work in this COVID situation.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X