ಇಂದು ಸಿಗಲಿಲ್ಲ ರಾಗಿಣಿಗೆ ಜಾಮೀನು: ಅರ್ಜಿ ವಿಚಾರಣೆ ಮುಂದೂಡಿಕೆ

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಗೆ ಇಂದು ಸಹ ಜಾಮೀನು ದೊರೆತಿಲ್ಲ.

ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ತ್ರಿಸದಸ್ಯ ಪೀಠವು ಮುಂದೂಡಿದೆ.

ಜಾಮೀನು ಕೋರಿ ರಾಗಿಣಿಯು ಈ ಮೊದಲು ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ರಾಜ್ಯ ಹೈಕೋರ್ಟ್ ರಾಗಿಣಿ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Ragini Dwivedis Bail Plea Adjourned By Supreme Court

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ ಅವರುಗಳು ರಾಗಿಣಿ ಹಾಗೂ ಶಿವಪ್ರಕಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ.

ರಾಗಿಣಿ ದ್ವಿವೇದಿಯನ್ನು ಸೆಪ್ಟೆಂಬರ್ 3 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಅವರ ಮೇಲೆ ಡ್ರಗ್ಸ್ ಸೇವನೆ ಮತ್ತು ಮಾರಾಟದ ಆರೋಪ ಇದೆ. ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿ ಗೆ ರಾಜ್ಯ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

More from Filmibeat

English summary
Ragini Dwivedi's bail plea adjourned by Supreme court three judge bench. She arrested by CCB police in Drug case.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X