twitter
    For Quick Alerts
    ALLOW NOTIFICATIONS  
    For Daily Alerts

    ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ: ರಾಗಿಣಿಗೆ ಸಿಗುತ್ತದೆಯೇ ಜಾಮೀನು?

    |

    ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು (ಜನವರಿ 08) ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

    ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೆಲವು ದಿನಗಳ ಹಿಂದೆ ರಾಜ್ಯ ಹೈಕೋರ್ಟ್ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ಅರ್ಜಿಯ ವಿಚಾರಣೆ ಆರಂಭವಾಗಲಿದ್ದು, 11:30 ಕ್ಕೆ ಸಮಯ ನಿಗದಿಪಡಿಸಲಾಗಿದೆ.

    ರಾಗಿಣಿಯನ್ನು ಪ್ರೀತಿಸಿದ್ದೇ ತಪ್ಪಾಯ್ತು: ಡ್ರಗ್ಸ್ ಪ್ರಕರಣ ಆರೋಪಿ ಶಿವಪ್ರಕಾಶ್ರಾಗಿಣಿಯನ್ನು ಪ್ರೀತಿಸಿದ್ದೇ ತಪ್ಪಾಯ್ತು: ಡ್ರಗ್ಸ್ ಪ್ರಕರಣ ಆರೋಪಿ ಶಿವಪ್ರಕಾಶ್

    ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದಾರೆ. ನಟಿ ರಾಗಿಣಿಯು ಮಾದಕ ವಸ್ತು ಸೇವನೆ ಮತ್ತು ಮಾರಾಟದಲ್ಲಿಯೂ ಭಾಗಿಯಾಗಿದ್ದರು ಹಾಗಾಗಿ ಅವರ ಹೆಚ್ಚಿನ ವಿಚಾರಣೆ ಅಗತ್ಯವಿರುವ ಕಾರಣ ಅವರಿಗೆ ಜಾಮೀನು ನೀಡಬಾರದು ಎಂದು ಮನವಿ ಆಕ್ಷೇಪಣೆ ಸಲ್ಲಿಸಿದ್ದಾರೆ.

    Ragini Dwivedis Bail Plea Will Hear By Supreme Court On January 08

    ರಾಗಿಣಿ ಬಂಧನದ ನಂತರ ಇದೇ ಮಾದಕ ವಸ್ತು ಪ್ರಕರಣದಲ್ಲಿ ಬಂಧನವಾಗಿದ್ದ ನಟಿ ಸಂಜನಾ ಗಲ್ರಾನಿಗೆ ಈಗಾಗಲೇ ಜಾಮೀನು ದೊರೆತಿದೆ. ಅನಾರೋಗ್ಯದ ಆಧಾರದ ಮೇಲೆ ಸಂಜನಾ ಜಾಮೀನಿಗೆ ಅರ್ಜಿ ಹಾಕಿದ್ದರು, ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

    ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ರಾಗಿಣಿ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಗಿಣಿ ನವೆಂಬರ್ ಅಂತ್ಯದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡಿ. 4ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ನವೀನ್ ಸಿನ್ಹಾ ಮತ್ತು ಕೆಎಂ ಜೋಸೆಫ್ ಅವರ ಪೀಠ ರಾಜ್ಯ ಸರ್ಕಾರ ಮತ್ತು ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿತ್ತು. 2020ರ ಸೆ. 4ರಂದು ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

    ರಾಗಿಣಿಗೆ ಕಳೆದ ತಿಂಗಳು ಅನಾರೋಗ್ಯ ಉಂಟಾಗಿತ್ತು. ಜೈಲು ಆಸ್ಪತ್ರೆ ಬದಲಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ರಾಗಿಣಿ ಚಿಕಿತ್ಸೆ ಪಡೆದಿದ್ದರು. ಇಂದಿನ ವಿಚಾರಣೆಯಲ್ಲಿ ಈ ಅಂಶವೂ ಪ್ರಧಾನವಾಗಲಿದೆ.

    Recommended Video

    ಅನ್ನದಾನ, ರಕ್ತದಾನ ಮಾಡಿ ಅಭಿಮಾನ ಮೆರೆದ ಯಶ್ ಅಭಿಮಾನಿಗಳು | Filmibeat Kannada

    ಮಾದಕ ವಸ್ತು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಿವಪ್ರಕಾಶ್‌ಗೆ ನಿರೀಕ್ಷಣಾ ಜಾಮೀನು ದೊರೆತಿದ್ದು, ಆತ ಸಿಸಿಬಿಯ ವಿಚಾರಣೆ ಎದುರಿಸುತ್ತಿದ್ದಾರೆ.

    English summary
    Drug case accused Ragini Dwivide filled bail plea to supreme court. Matter will be hear today.
    Friday, January 8, 2021, 9:42
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X