ಉತ್ತರ ಕರ್ನಾಟಕ ಜನರ ನೆರವಿಗೆ ಬಂದ ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ
Recommended Video
ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕ ಜನರ ನೆರವಿಗೆ ಕನ್ನಡ ಚಿತ್ರರಂಗ ಧಾವಿಸಿದೆ. ಈಗಾಗಲೆ ಸ್ಟಾರ್ ನಟರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ನಟರ ಮನವಿ ಮೇರೆಗೆ ಅಗತ್ಯ ವಸ್ತುಗಳನ್ನು ತಕ್ಷಣಕ್ಕೆ ತಲುಪಿಸುವ ಕಾರ್ಯದಲ್ಲಿ ಅಭಿಮಾನಿಗಳು ನಿರತರಾಗಿದ್ದಾರೆ.
ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?
ಸುದೀಪ್, ದರ್ಶನ್, ಗಣೇಶ್, ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಅನೇಕ ನಟರು ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಮತ್ತು ರಕ್ಷಿತ್ ಶೆಟ್ಟಿ ಕೂಡ ಉತ್ತರ ಕರ್ನಾಟಕ ಜನರ ನೆರವಿಗೆ ನಿಂತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ರಕ್ಷಿತ್ ಶೆಟ್ಟಿ "ಪರಮ್ವಾ ಸ್ಟುಡಿಯೋ ಕಡೆಯಿಂದ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಜನರಿಗೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ಸರಬರಾಜು ಮಾಡುತ್ತಿದ್ದೀವಿ. ಯಾರಾದ್ರು ಕೈ ಜೋಡಿಸಬಹುದು' ಎಂದು ಹೇಳಿದ್ದಾರೆ.

ಇನ್ನು ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಉತ್ತರ ಕರ್ನಾಟಕ ಜನರ ಆದಷ್ಟು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ. "ಪ್ರವಾಹದಿಂದ ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕ ಜನರಿಗೆ ಸಹಾಯ ಮಾಡೋಣ ಮತ್ತು ಅವರಿಗಾಗಿ ಪ್ರಾರ್ಥನೆ ಮಾಡೋಣ. ಅವರಿಗೆ ಬೇಕಾದ ಅಗತ್ಯತೆಗಳನ್ನು ನಮಗೆ ಸಾಧ್ಯವಾದಷ್ಟು ಉತ್ತಮವಾದನ್ನು ನೀಡೋಣ" ಎಂದಿದ್ದಾರೆ.


Click it and Unblock the Notifications











