ಉತ್ತರ ಕರ್ನಾಟಕ ಜನರ ನೆರವಿಗೆ ನಿಂತ ಟಾಲಿವುಡ್ ನಟ
ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದ ಆರು ಜಿಲ್ಲೆಗಳು ಅಕ್ಷರಶಃ ನೆರೆಯಿಂದ ಮುಳುಗಿ ಹೋಗಿದ್ದು ನಡುಗಡ್ಡೆಯಾಗಿರುವ ಪ್ರದೇಶದಲ್ಲಿ ಜನರು ಸಿಲುಕಿ ನರಳಾಡುತ್ತಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರುವ ಜನರ ನೆರವಿಗೆ ಸ್ಯಾಂಡಲ್ ವುಡ್ ನ ಕೆಲವು ನಟರು ಕೂಡ ಧಾವಿಸಿದ್ದಾರೆ.
ಸ್ಯಾಂಡಲ್ ವುಡ್ ನಟರ ಜೊತೆಗೆ ಟಾಲಿವುಡ್ ವಿಲನ್ ಕಬೀರ್ ದುಹಾನ್ ಸಿಂಗ್ ಕೂಡ ಉತ್ತರ ಕರ್ನಾಟಕ ಜನರ ನೆರವಿಗೆ ನಿಂತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಬೀರ್ "ಪ್ರವಾರದಿಂದ ಸಂಕಷ್ಟದಲ್ಲಿ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೆ ಬೆಂಬಲದೊಂದಿದೆ ನೀವು ಸಹಾಯ ಮಾಡಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ಕಬೀರ್ ದುಹಾನ್ ಸಿಂಗ್ ಕಿಚ್ಚ ಸುದೀಪ್ ಗೆಳೆಯ. ಸುದೀಪ್ ಜೊತೆ ಹೆಬ್ಬುಲಿ ಚಿತ್ರದಲ್ಲಿ ಅಬ್ಬರಿಸಿದ್ದ ದುಹಾನ್ ಈಗ ಪೈಲ್ವಾನ್ ಸಿನಿಮಾದಲ್ಲೂ ಮಿಂಚಿದ್ದಾರೆ. ಸದ್ಯ ಕಿಚ್ಚ ಉತ್ತರ ಕರ್ನಾಟಕ ಜನರ ನೆರವಿಗೆ ಧಾವಿಸುತ್ತಿದ್ದಂತೆ ಕಬೀರ್ ದುಹಾನ್ ಕೂಡ ಕರ್ನಾಟಕ ಸಹಾಯಕ್ಕೆ ಧಾವಿಸಿದ್ದಾರೆ.

ಸ್ಯಾಂಡಲ್ ವುಡ್ ನ ಸಾಕಷ್ಟು ನಟರು ಸಂಕಷ್ಟದಲ್ಲಿರುವ ಜನರ ನೆರವಿಗೆ ನಿಂತಿದ್ದಾರೆ. ನಟ ದರ್ಶನ್ ಕೂಡ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ತಕ್ಷಣಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ನಟ ಶರಣ್ ಕೂಡ ಉತ್ತರ ಕರ್ನಾಟಕ ಜನರ ನೆರವಿಗೆ ನಿಂತಿದ್ದಾರೆ.


Click it and Unblock the Notifications











