ವೈವಾಹಿಕ ಜೀವನಕ್ಕೆ ಕಾಲಿಟ್ಟ ಖ್ಯಾತ ನಟ ರಾಜ್ ದೀಪಕ್ ಶೆಟ್ಟಿ
ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ಜನಪ್ರಿಯತೆ ಪಡೆದುಕೊಂಡಿರುವ ಖ್ಯಾತ ನಟ ರಾಜ್ ದೀಪಕ್ ಶೆಟ್ಟಿ ಅವರು ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಹಾಗೂ ಮಂಗಳೂರಿನಲ್ಲಿ ಇವೆಂಟ್ ಆರ್ಗನೈಸರ್ ಆಗಿರುವ ಸೋನಿಯಾ ರಾಡ್ರಿಗಸ್ ಜೊತೆ ಸಪ್ತಪದಿ ತುಳಿದಿದ್ದಾರೆ.
ಪಣಂಬೂರಿನ ನಂದನೇಶ್ವರ ದೇವಸ್ಥಾನದಲ್ಲಿ ರಾಜ್ ದೀಪಕ್ ಶೆಟ್ಟಿ ಅವರ ವಿವಾಹ ಕಾರ್ಯಕ್ರಮ ನಡೆದಿದ್ದು, ಈ ಫೋಟೋಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮದುವೆಯ ಆರತಕ್ಷತೆ ಕುರಿತು ಸಹ ಮಾಹಿತಿ ನೀಡಿದ್ದಾರೆ. ಮುಂದೆ ಓದಿ...

ಪಣಂಬೂರಿನ ನಂದನೇಶ್ವರ ದೇವಸ್ಥಾನದಲ್ಲಿ ವಿವಾಹ
ಜೂನ್ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಅವರ ವಿವಾಹ ಮಂಗಳೂರಿನ ಪಣಂಬೂರಿನ ನಂದನೇಶ್ವರ ದೇವಸ್ಥಾನದಲ್ಲಿ ನೆರವೇರಿದೆ.

ಕುಟುಂಬ ಮತ್ತು ಆಪ್ತರಷ್ಟೇ ಭಾಗಿ
ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಅವರ ವಿವಾಹ ಗುರು ಹಿರಿಯರು ನಿಶ್ಚಿಯಸಿದಂತೆ ಮದುವೆ ನಡೆದಿದ್ದು, ಕೇವಲ ಕುಟುಂಬಸ್ಥರು ಮತ್ತು ಆಪ್ತರಷ್ಟೇ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಮೇ ತಿಂಗಳಲ್ಲಿ ಮದುವೆ ಆಗಬೇಕಿತ್ತು
ಎಲ್ಲ ಅಂದುಕೊಂಡಂತೆ ಆಗಿದ್ದರೆ ಮೇ ತಿಂಗಳಲ್ಲಿ ರಾಜ್ ದೀಪಕ್ ಶೆಟ್ಟಿ ಮತ್ತು ಸೋನಿಯಾ ರಾಡ್ರಿಗಸ್ ಅವರ ಮದುವೆ ನಡೆಯಬೇಕಿತ್ತು. ಅನಿರೀಕ್ಷಿತವಾಗಿ ಬಂದ ಕೊರೊನಾ ವೈರಸ್ ಕಾಯಿಲೆ ಹಾಗೂ ಲಾಕ್‌ಡೌನ್ ಕಾರಣದಿಂದ ಮುಂದೂಡಲಾಗಿತ್ತು.
Recommended Video

ಬೇಡಿಕೆಯ ಖಳನಟ
ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿರುವ ರಾಜ್ ದೀಪಕ್ ಶೆಟ್ಟಿ ಪ್ರಸ್ತುತ, ರಣಂ, ಭರಾಟೆ, ಕೋಟಿಗೊಬ್ಬ 3, ರವಿಚಂದ್ರ, ಗಡಿಯಾರ ಚಿತ್ರಗಳಲ್ಲಿ ನಟಿಸಿದ್ದು ಬಿಡುಗಡೆಗೆ ತಯಾರಾಗಿದೆ. ಅಲ್ಲು ಅರ್ಜುನ್ ಅಭಿನಯದ 'ಪುಷ್ಪ', ವೆಂಕಟೇಶ್ ನಟನೆಯ ಅಸುರನ್ ರೀಮೇಕ್ 'ನಾರಪ್ಪ', ರಾಣಾ ದಗ್ಗುಬಾಟಿ ಅವರೊಟ್ಟಿಗೆ ನಟಿಸಿರುವ 'ವಿರಾಟಪರ್ವಂ' ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ರಾಜ್ ದೀಪಕ್ ಶೆಟ್ಟಿ ನಟಿಸುತ್ತಿದ್ದಾರೆ.


Click it and Unblock the Notifications











