ಡಾ.ರಾಜ್ ಹುಟ್ಟುಹಬ್ಬದ ವಿಶೇಷ: 'ರಾಜಕುಮಾರ' ಚಿತ್ರತಂಡದಿಂದ ಬಂಪರ್ ಕೊಡುಗೆ
ವರನಟ ಡಾ.ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 24) 'ರಾಜಕುಮಾರ' ಚಿತ್ರತಂಡದಿಂದ ಅಭಿಮಾನಿಗಳಿಗೆ ವಿಶೇಷ ಆಫರ್ ನೀಡಲಾಗಿದೆ. ಇಂದು 'ರಾಜಕುಮಾರ' ಸಿನಿಮಾ ನೋಡುವ ಪ್ರೇಕ್ಷಕರಿಗೆ ಪ್ರತಿ ಟಿಕೆಟ್ ಬೆಲೆಯಲ್ಲಿ ಅರ್ಧದಷ್ಟು ಹಣ ಕಡಿತಗೊಳಿಸಲಾಗಿದೆ.[ಫೋಟೋ ಗ್ಯಾಲರಿ; ಡಾ.ರಾಜ್ ರವರ ಅಪರೂಪದ ಭಾವಚಿತ್ರಗಳು]
ಡಾ.ರಾಜ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಕ್ಕಾಗಿ ಚಿತ್ರತಂಡದಿಂದ ಈ ವಿಶೇಷ ರಿಯಾಯಿತಿ ನೀಡಲಾಗಿದೆ. ಈ ಆಫರ್ ರಾಜ್ಯದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಮಾತ್ರ ಅವಕಾಶವಿದ್ದು, ಮಲ್ಟಿಫ್ಲೆಕ್ಸ್ ಗಳಲ್ಲಿ ಈ ಆಫರ್ ಇರುವುದಿಲ್ಲ.[ಡಾ.ರಾಜ್ ಡಾಕ್ಟರೇಟ್ ಪಡೆದ ಅಪರೂಪದ ಕ್ಷಣ ನೋಡಿ!]

ಪುನೀತ್ ರಾಜ್ ಕುಮಾರ್ ಅಭಿನಯದ 'ರಾಜಕುಮಾರ' ಚಿತ್ರ ಮಾರ್ಚ್ 24ರಂದು ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರವನ್ನ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ ಕಿರಗಂದೂರ್ ನಿರ್ಮಾಣ ಮಾಡಿದ್ದರು.[ಡಾ.ರಾಜ್ ಅವರನ್ನು ದೇವರು ಅಂದ ಆ ನಟ ಯಾರು?]
ವಿ.ಹರಿಕೃಷ್ಣ ಸಂಗೀತವಿದ್ದು, ಪ್ರಿಯಾ ಆನಂದ್ ಪುನೀತ್ ರಾಜ್ ಕುಮಾರ್ ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪ್ರಕಾಶ್ ರೈ, ಅನಂತ್ ನಾಗ್, ಅಚ್ಯುತ್ ಕುಮಾರ್, ಸಾಧುಕೋಕಿಲಾ, ಚಿಕ್ಕಣ್ಣ, ರಂಗಾಯಣ ರಘು, ತಮಿಳು ನಟ ಶರತ್ ಕುಮಾರ್, ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ.[ನಾವು ನೀವು ಅರಿಯದ ರಾಜ್ ಅಪರೂಪದ ಸಂಗತಿಗಳು]


Click it and Unblock the Notifications











