ರೆಬೆಲ್ ಸ್ಟಾರ್ 'ಅಂಬಿ ನಿಂಗ್ ವಯಸ್ಸಾಯ್ತೋ' ಒಪ್ಪಿಕೊಳ್ಳಲು ರಜನಿಕಾಂತ್ ಕಾರಣ.!
Recommended Video

'ಅಂಬಿ ನಿಂಗ್ ವಯಸ್ಸಾಯ್ತೋ' ಟೈಟಲ್ ಮತ್ತು ಸ್ಟಾರ್ ಕಾಸ್ಟ್ ನಿಂದಲೇ ಭಾರಿ ನಿರೀಕ್ಷೆ ಮೂಡಿಸಿರುವ ಚಿತ್ರ. ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಸಾಕಷ್ಟು ದಿನಗಳ ನಂತರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ.
ಇತ್ತಿಚಿಗಷ್ಟೆ ಸಿನಿಮಾತಂಡ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಖುಷಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆದಿತ್ತು. ಇದೇ ಸಂದರ್ಭದಲ್ಲಿ ಅಂಬಿ ಈ ಚಿತ್ರದಲ್ಲಿ ಅಭಿನಯ ಮಾಡಲು ಕಾರಣವೇನು ? ಎನ್ನುವ ಬಗ್ಗೆ ಮಾಹಿತಿಯನ್ನಿ ಕೊಟ್ಟಿದ್ದಾರೆ.

'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾದ ಕಥೆ ನಿನಗೆ ಚೆನ್ನಾಗಿ ಸೂಟ್ ಆಗುತ್ತೆ ಎನ್ನುವ ವಿಚಾರವನ್ನು ರಜನಿಕಾಂತ್, ರೆಬೆಲ್ ಸ್ಟಾರ್ ಗೆ ತಿಳಿಸಿದ್ದರಂತೆ. ದೂರವಾಣಿ ಮೂಲಕ ಸಂಪರ್ಕ ಮಾಡಿದ ರಜನಿಕಾಂತ್ ಈ ಚಿತ್ರದಲ್ಲಿ ಅಭಿನಯ ಮಾಡಲೇಬೇಕು ಎಂದು ಹೇಳಿದ್ದಾರೆ. ಸಿನಿಮಾ ಒಪ್ಪಿಕೊಳ್ಳಲು ಇದು ಕೂಡ ಒಂದು ಕಾರಣವಂತೆ.

ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿರುವ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿದೆ. ಗುರುದತ್ತ್ ಗಾಣಿಗ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಕಿಚ್ಚ ಕ್ರಿಯೇಷನ್ಸ್ ಅಡಿಯಲ್ಲಿ ಜಾಕ್ ಮಂಜು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಶೃತಿ ಹರಿಹರನ್, ಸುಹಾಸಿನಿ, ಸುದೀಪ್, ಅಂಬರೀಶ್ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ.


Click it and Unblock the Notifications











