ಅಂಬಿ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದ ರಜನಿಕಾಂತ್
Recommended Video

ಕನ್ನಡ ಚಿತ್ರರಂಗದ ಹಿರಿಯ ಹಾಗೂ ದಿಗ್ಗಜ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ. ಅಂಬಿಯ ಆಪ್ತ ಸ್ನೇಹಿತ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ನಮನ ಸಲ್ಲಿದ್ದಾರೆ.
ಅಂಬಿಯ ಪಾರ್ಥಿವ ಶರೀರದ ಮುಂದೆ ನಿಂತು ಭಾವುಕರಾದ ತಲೈವಾ, ಸ್ನೇಹಿತನನ್ನ ನೆನೆದು ಕಣ್ಣೀರು ಹಾಕಿದ್ದಾರೆ. ಈ ವೇಳೆ ಅಂಬರೀಶ್ ಅವರ ಪತ್ನಿ ಸುಮಲತಾ ಹಾಗೂ ಮಗ ಅಭಿಷೇಕ್ ಅವರಿಗೆ ರಜನಿ ಸಾಂತ್ವನ ಹೇಳಿದರು.
ಬಳಿಕ, ಕೆಲ ಕಾಲ ಕುಳಿತುಕೊಂಡ ರಜನಿಕಾಂತ್, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದರು. ಇದದೇ ವೇಳೆ ತಮಿಳು ನಟ ಶರತ್ ಕುಮಾರ್, ಪ್ರಕಾಶ್ ರೈ ಸೇರಿದಂತೆ ಹಲವರು ಅಂಬಿಯ ಅಂತಿಮ ದರ್ಶನ ಪಡೆದುಕೊಂಡರು.

ನಗರದ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಅಂತಮ ನಮನ ಸಲ್ಲಿಸಿದ್ದಾರೆ.
ಇದಕ್ಕೂ ಮುಂಚೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದ ರಜನಿಕಾಂತ್ ''''ಅಂಬರೀಶ್ ಅದ್ಭುತ ವ್ಯಕ್ತಿ. ನನ್ನ ಆತ್ಮೀಯ ಸ್ನೇಹಿತ. ಇಂದು ನಿಮ್ಮನ್ನ ಕಳೆದುಕೊಂಡಿದ್ದೇವೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದರು.
ಅಂಬರೀಶ್, ರಜನಿಕಾಂತ್, ವಿಷ್ಣುವರ್ಧನ್ ಅವರು ಒಂದೇ ಸಮಕಾಲಿನವರು. ಒಟ್ಟಿಗೆ ಸಿನಿಮಾ ರಂಗ ಪ್ರವೇಶಿಸಿದವರು. ಅಲ್ಲಿಂದ ಇಲ್ಲಿಯವರೆಗೂ ಪರಸ್ಪರ ಉತ್ತಮವಾದ ಬಾಂಧವ್ಯ ಮುಂದುವರಿಸಿಕೊಂಡು ಬಂದಿದ್ದರು.


Click it and Unblock the Notifications











