ಅಡ್ಡಿ ಆತಂಕ ಇಲ್ಲದೆ ಮಂಗಳೂರಿಗೆ ಬಂದ 'ಕಾಲಾ'

By ಮಂಗಳೂರು ಪ್ರತಿನಿಧಿ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲಾ' ಚಿತ್ರಕ್ಕೆ ಬಿಡುಗಡೆಗೆ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿವೆ. ಆದರೆ ಮಂಗಳೂರಿನಲ್ಲಿ 'ಕಾಲಾ' ಚಿತ್ರ ವಿವಾದ ಸದ್ದು ಮಾಡಿಲ್ಲ. ಮಂಗಳೂರಿನಲ್ಲಿ 'ಕಾಲಾ' ಚಿತ್ರ ಪ್ರದರ್ಶನಕ್ಕೆ ಯಾವುದೇ ರೀತಿಯಲ್ಲಿ ವಿರೋಧ ವ್ಯಕ್ತವಾಗಿಲ್ಲ.

ಮಂಗಳೂರಿನ ಭಾರತ್ ಮಾಲ್ ನಲ್ಲಿರುವ ಬಿಗ್ ಸಿನೆಮಾ, ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಹಾಗು ಫೋರಂ ಮಾಲ್ ನಲ್ಲಿರುವ ಪಿವಿಆರ್ ಮಲ್ಟಿಫ್ಲೆಕ್ಸ್ ಗಳಲ್ಲಿ ಪೊಲೀಸ್ ಭದ್ರತೆದಲ್ಲಿ ಚಿತ್ರ ಪ್ರದರ್ಶನ ಆರಂಭಗೊಂಡಿದೆ.

Rajinikanth Kaala Tamil movie released in mangaluru

ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಆತಂಕದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ಮಾಲ್ ಹಾಗೂ ಮಲ್ಟಿಫ್ಲೆಕ್ಸ್ ಚಿತ್ರಮಂದಿರದ ಹೊರಗಡೆ ಪೊಲೀಸ್ ಭದ್ರತೆ ಒದಗಿಸಿದ್ದು ಯಾವುದೇ ಅಡ್ಡಿ ಆತಂಕಗಳಿಲ್ಲದೇ 'ಕಾಲಾ' ಚಿತ್ರ ಮಂಗಳೂರಿನ ಮಲ್ಟಿಫೆಕ್ಸ್ ಗಳಲ್ಲಿ ಪ್ರದರ್ಶನ ಗೊಳ್ಳುತ್ತಿವೆ. 12:30 ರ ವೇಳೆಗೆ ಚಿತ್ರದ ಮೊದಲ ಪ್ರದರ್ಶನ ಆರಂಭಗೊಂಡಿವೆ.

Rajinikanth Kaala Tamil movie released in mangaluru

ಉಳಿದಂತೆ, ಹಾಸನ, ಮಂಡ್ಯ, ಚಿತ್ರದುರ್ಗ, ಬೆಳಗಾವಿ, ಆನೇಕಲ್, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಬೆಂಗಳೂರಿನ ಅನೇಕ ಚಿತ್ರಮಂದಿರಗಳಲ್ಲಿ 'ಕಾಲಾ' ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. 'ಕಾಲಾ' ಪ್ರದರ್ಶನ ರದ್ದು ಮಾಡಿದ ಹಿನ್ನೆಲೆಯಲ್ಲಿ ನಿರಾಸೆಯಿಂದ ಅಭಿಮಾನಿಗಳು ವಾಪಸ್ ಮನೆಗೆ ತೆರಳುತ್ತಿದ್ದಾರೆ.

More from Filmibeat

English summary
'Kaala' controversy : Super Star Rajinikanth 'Kaala' Tamil movie released in Mangaluru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X