Just In
Don't Miss!
- News
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಾಂಗ ಸಭೆ ನಿರ್ಣಯಗಳು
- Automobiles
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- Sports
ಐಪಿಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Education
Indian Postal Circle Recruitment 2021: 1421 ಬಿಪಿಎಂ, ಅಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಿಂದಿಗೆ ರಿಮೇಕ್ ಆಗುತ್ತಾ 'ರಾಜು ಕನ್ನಡ ಮೀಡಿಯಂ', ನಿರ್ಮಾಪಕರು ಏನಂತಾರೆ?

'ರಾಜು ಕನ್ನಡ ಮೀಡಿಯಂ' ಸಿನಿಮಾ ಕಳೆದ ಶುಕ್ರವಾರ ತೆರೆಗೆ ಬಂದಿದೆ. ಎಲ್ಲ ವರ್ಗದ ಪ್ರೇಕ್ಷಕರು ಸಹ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಪಕ್ಕಾ ಕಾಮಿಡಿ ಎಂಟಟೈನರ್ ಆಗಿರುವ 'ರಾಜು ಕನ್ನಡ ಮೀಡಿಯಂ' ಯಶಸ್ವಿ ಪ್ರದರ್ಶನವನ್ನು ಮುಂದುವರೆಸಿದೆ. ಇದರ ಜೊತೆಗೆ ಸಿನಿಮಾ ಹಿಂದಿಗೆ ರಿಮೇಕ್ ಆಗುವ ಸುದ್ದಿ ಕೂಡ ಹರಿದಾಡಿದೆ.
ಕನ್ನಡದ ಒಳ್ಳೆಯ ಸ್ವಮೇಕ್ ಸಿನಿಮಾಗಳು ಪರಭಾಷೆಗೆ ರಿಮೇಕ್ ಆಗುವ ಸಂಖ್ಯೆ ಇದೀಗ ಹೆಚ್ಚಾಗುತ್ತಿದೆ. ಆ ಸಾಲಿಗೆ ಈಗ 'ರಾಜು ಕನ್ನಡ ಮೀಡಿಯಂ' ಕೂಡ ಸೇರಿಕೊಳ್ಳಲಿದೆ. ಅಂದಹಾಗೆ, ಈ ಚಿತ್ರದ ರಿಮೇಕ್ ವಿಚಾರದ ಬಗ್ಗೆ ಚಿತ್ರದ ನಿರ್ಮಾಪಕ ಕೆ.ಎಂ.ಸುರೇಶ್ ಮತ್ತು ನಿರ್ದೇಶಕ ನರೇಶ್ 'ಫಿಲ್ಮಿಬೀಟ್ ಕನ್ನಡ'ಕ್ಕೆ ಸ್ಪಷ್ಟಪಡಿಸಿದ್ದಾರೆ.
ಸದ್ಯ ಚಿತ್ರದ ಹಿಂದಿ ರಿಮೇಕ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿರುವ ನಿರ್ಮಾಪಕ ಸುರೇಶ್ ನಟ ಅಮೀರ್ ಖಾನ್ ಅವರ ಪ್ರೊಡಕ್ಷನ್ ನಲ್ಲಿ ಸಿನಿಮಾ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಈ ಜೊತೆಗೆ ಸಿನಿಮಾಗೆ ಸಿಕ್ಕಿರುವ ಪ್ರತಿಕ್ರಿಯೆಗೆ ನಿರ್ದೇಶಕ ಮತ್ತು ನಿರ್ಮಾಪಕರು ಇಬ್ಬರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ನಟ ಸುದೀಪ್, ಗುರುನಂದನ್, ಅವಂತಿಕಾ ಶೆಟ್ಟಿ ಮತ್ತು ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ.
ಇತ್ತೀಚಿಗಷ್ಟೆ 'ಕಿರಿಕ್ ಪಾರ್ಟಿ' ಮತ್ತು 'ಉಳಿದವರು ಕಂಡಂತೆ' ಸಿನಿಮಾಗಳು ತೆಲುಗು ಮತ್ತು ತಮಿಳು ಭಾಷೆಗೆ ರಿಮೇಕ್ ಆಗಿತ್ತು. ಈಗ 'ರಾಜು ಕನ್ನಡ ಮೀಡಿಯಂ' ಸಹ ಅದೇ ಹಾದಿಯಲ್ಲಿ ಸಾಗಿದೆ.