For Quick Alerts
  ALLOW NOTIFICATIONS  
  For Daily Alerts

  ಮತ್ತೊಬ್ಬ ಹೊಸ ನಿರ್ದೇಶಕನ ಸಿನಿಮಾಕ್ಕೆ ರಕ್ಷಿತ್ ಶೆಟ್ಟಿ ಬಂಡವಾಳ

  |

  ಉತ್ತಮ ಸಿನಿಮಾ ಕರ್ಮಿಯೊಬ್ಬನ ಸಿನಿಮಾ ಗೆದ್ದರೆ ಇನ್ನಷ್ಟು ಸಿನಿಮಾಗಳಿಗೆ, ಕಲಾವಿದರಿಗೆ, ತಂತ್ರಜ್ಞರಿಗೆ ಸಹಾಯವಾಗುತ್ತದೆ ಎಂಬ ಮಾತು ನಿಜ ಇದಕ್ಕೆ ತಾಜಾ ಉದಾಹರಣೆ ನಟ ರಕ್ಷಿತ್ ಶೆಟ್ಟಿ.

  ಸಿನಿಮಾವನ್ನು ಅತೀವವಾಗಿ ಪ್ರೀತಿಸುವ ರಕ್ಷಿತ್ ಶೆಟ್ಟಿ '777 ಚಾರ್ಲಿ' ಸಿನಿಮಾ ದೊಡ್ಡ ಮಟ್ಟದಲ್ಲಿ ಗೆದ್ದಿದೆ. ಸಿನಿಮಾದ ನಿರ್ಮಾಪಕ ಸ್ವತಃ ರಕ್ಷಿತ್ ಶೆಟ್ಟಿಯಾಗಿದ್ದು, ಸಿನಿಮಾದಿಂದ ಬಂದ ಆದಾಯವನ್ನು ಮತ್ತೆ ಸಿನಿಮಾಕ್ಕೆ ತೊಡಗಿಸುತ್ತಿದ್ದಾರೆ. ಕೆಲವು ಯುವ, ಹೊಸ ಪ್ರತಿಭೆಗಳ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ ರಕ್ಷಿತ್ ಶೆಟ್ಟಿ.

  "ಕಾಲ್‌ ಕೆಜಿ ಪ್ರೀತಿ", "ಪಂಚತಂತ್ರ" ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ ವಿಹಾನ್‌ ಮತ್ತೆ ಬೆಳ್ಳಿತೆರೆಮೇಲೆ ಮಿಂಚಲು ಬರುತ್ತಿದ್ದಾರೆ. ವಿಶೇಷ ಏನೆಂದರೆ, ಈ ಸಲ ವಿಹಾನ್‌ಗೆ ರಕ್ಷಿತ್‌ ಶೆಟ್ಟಿ ಸಾಥ್‌ ನೀಡುತ್ತಿದ್ದಾರೆ. ಅಂದರೆ, ರಕ್ಷಿತ್‌ ಶೆಟ್ಟಿ ಹೋಮ್‌ ಬ್ಯಾನರ್‌ "ಪರಂವಃ‌ ಸ್ಟುಡಿಯೋಸ್‌" ಬ್ಯಾನರ್‌ನಲ್ಲಿ ಮೂಡಿಬರುವ ಚಿತ್ರದಲ್ಲಿ ವಿಹಾನ್‌ ಹೀರೋ!

  ಸಿನಿಮಾದ ನಾಯಕ ವಿಹಾನ್

  ಸಿನಿಮಾದ ನಾಯಕ ವಿಹಾನ್

  ಕಳೆದ ಮೂರು ವರ್ಷಗಳ ಹಿಂದೆ ಯೋಗರಾಜ್‌ ಭಟ್‌ ನಿರ್ದೇಶನದಲ್ಲಿನ "ಪಂಚತಂತ್ರ" ಸಿನಿಮಾದಲ್ಲಿ ನಟಿಸಿದ ಬಳಿಕ ಬೇರೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ವಿಶೇಷ ಕಥೆಯೊಂದಿಗೆ ಅವರ ಆಗಮನವಾಗುತ್ತಿದೆ. ರೊಮ್ಯಾನ್ಸ್‌ ಡ್ರಾಮಾ ಶೈಲಿಯ ಈ ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳೂ ಈಗಾಗಲೇ ಶುರುವಾಗಿವೆ. ಚಿತ್ರದಲ್ಲಿ ನಾಯಕನಿಗೆ ಮೂರು ಹಂತಗಳಿರಲಿವೆ. ಕಾಲೇಜ್‌ ವಿದ್ಯಾರ್ಥಿ, ಕ್ರಿಕೆಟ್‌ ಆಟಗಾರ ಹಾಗೂ ಬಿಜಿನೆಸ್‌ ಮ್ಯಾನ್‌ ಆಗಿಯೂ ವಿಹಾನ್‌ ಕಾಣಿಸಿಕೊಳ್ಳಲಿದ್ದಾರೆ. ಇದೆಲ್ಲದಕ್ಕೂ ಸೂಟ್‌ ಆಗಲಿದ್ದಾರೆ ಎಂಬ ಕಾರಣಕ್ಕೆ ಚಿತ್ರತಂಡ ವಿಹಾನ್‌ರನ್ನು ಆಯ್ಕೆ ಮಾಡಿದ್ದಾರೆ.

  ಸೆವೆನ್ ಆಡ್ಸ್ ತಂಡದ ಬರಹಗಾರ

  ಸೆವೆನ್ ಆಡ್ಸ್ ತಂಡದ ಬರಹಗಾರ

  ರಕ್ಷಿತ್‌ ಅವರ ಸೆವೆನ್‌ ಆಡ್ಸ್‌ ಟೀಮ್‌ನಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿರುವ ಚಂದ್ರಜೀತ್‌ ಬೆಳ್ಳಿಯಪ್ಪ, ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಈ ಮೊದಲು ರಿಷಬ್‌ ಶೆಟ್ಟಿ ಅವರ ಕಥಾಸಂಗಮ ಸಿನಿಮಾದಲ್ಲಿನ "ರೇನ್‌ಬೋ ಲ್ಯಾಂಡ್‌" ಏಪಿಸೋಡ್‌ ಅನ್ನು ಚಂದ್ರಜಿತ್‌ ನಿರ್ದೇಶನ ಮಾಡಿದ್ದರು. ಅದಕ್ಕೂ ಮೊದಲು "ಅವನೇ ಶ್ರೀಮನ್ನಾರಾಯಣ" ಚಿತ್ರದ ಬರವಣಿಗೆಯ ಭಾಗವಾಗಿದ್ದರು.

  ಅಂಕಿತಾ ಮರ್‌ ನಾಯಕಿ

  ಅಂಕಿತಾ ಮರ್‌ ನಾಯಕಿ

  ಈ ಚಿತ್ರಕ್ಕೆ ನಾಯಕಿಯಾಗಿ ನಮ್ಮನ್ನೆ ಯುವರಾಣಿ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದ ಅಂಕಿತಾ ಮರ್‌ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಪರಂವಃ ಸ್ಟುಡಿಯೋಸ್‌ ತನ್ನ ಅಧಿಕೃತ ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ನಲ್ಲಿ ಅವರ ಜನ್ಮದಿನಕ್ಕೆ ಪೋಸ್ಟ್‌ ಹಾಕಿ ಸುಳಿವು ನೀಡಿತ್ತು. ಇದೀಗ ಅವರೇ ನಮ್ಮ ನಾಯಕಿ ಎಂದು ತಂಡ ಅಧಿಕೃತವಾಗಿ ಘೋಷಿಸಿದೆ. ಹಾಗಾದರೆ ಏನಿದು ಸಿನಿಮಾ? ಸದ್ಯ ಚಿತ್ರೀಕರಣ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ತಂಡ, ಆಗಸ್ಟ್‌ ವೇಳೆಗೆ ಚಿತ್ರದ ಶೀರ್ಷಿಕೆ ಘೋಷಣೆ ಮಾಡಿಕೊಳ್ಳುವ ಮೂಲಕ ಸಿನಿಮಾ ಕೆಲಸಗಳಿಗೆ ಚಾಲನೆ ನೀಡಲಿದೆ. ಅದಾದ ಬಳಿಕ ಸೆಪ್ಟೆಂಬರ್‌ನಲ್ಲಿ ಚಿತ್ರದ ಶೂಟಿಂಗ್‌ ಶುರುಮಾಡುವುದು ತಂಡದ ಪ್ಲಾನ್.

  ಡ್ರಾಮಾ ಮತ್ತು ಮ್ಯೂಸಿಕಲ್‌ ಲವ್‌ಸ್ಟೋರಿ

  ಡ್ರಾಮಾ ಮತ್ತು ಮ್ಯೂಸಿಕಲ್‌ ಲವ್‌ಸ್ಟೋರಿ

  ರೊಮ್ಯಾನ್ಸ್‌ ಡ್ರಾಮಾ ಮತ್ತು ಮ್ಯೂಸಿಕಲ್‌ ಲವ್‌ಸ್ಟೋರಿ ಹಿನ್ನಲೆಯ ಈ ಸಿನಿಮಾದಲ್ಲಿ ಕಾಲೇಜು ಜೀವನವೂ ಕಾಣಿಸಲಿದೆ. ತಾಂತ್ರಿಕ ವರ್ಗದ ವಿಚಾರಕ್ಕೆ ಬಂದರೆ, ಅಮೆರಿಕಾದ ನ್ಯೂಯಾರ್ಕ್‌ ಫಿಲಂ ಅಕಾಡೆಮಿಯಲ್ಲಿ ಪದವಿ ಪಡೆದು, ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್‌ ಸೆಲ್ವರಾಜನ್‌ ಈ ಸಿನಿಮಾಕ್ಕೆ ಕ್ಯಾಮರಾ ಹಿಡಿಯಲಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿರಲಿದೆ. ಗಗನ್‌ ಬದೇರಿಯಾ ಸಂಗೀತ ಸಂಯೋಜಿಸಲಿದ್ದಾರೆ.

  English summary
  Rakshit Shetty producing Vihan's new movie. Chandrajit Belliyappa directing the movie. Chandrajit was one of the Seven Ods writing team of Rakshit Shetty.
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X