Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾಶ್ಮೀರದಿಂದ ಬಂತು ರಕ್ಷಿತ್ ಶೆಟ್ಟಿ '777 ಚಾರ್ಲಿ' ಸಿನಿಮಾದ ಅಪ್ ಡೇಟ್; ಏನದು?
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಕೊನೆಯ ಹಂತದ ಚಿತ್ರೀಕರಣವನ್ನು ದೂರದ ಕಾಶ್ಮೀರದಲ್ಲಿ ಮಾಡುತ್ತಿದೆ.
ಲಾಕ್ ಡೌನ್ ಬಳಿಕ ಅಕ್ಟೋಬರ್ ನಿಂದ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ಈಗಾಗಲೇ ಬೆಂಗಳೂರು, ಕೊಡೈಕೆನಾಲ್ ಗಳಲ್ಲಿ ಚಿತ್ರೀಕರಣ ಮಾಡಿ ಮುಗಿಸಿದೆ. ಇದೀಗ ರಕ್ಷಿತ್ ಮತ್ತು ತಂಡ ಚಾರ್ಲಿ ಜೊತೆ ಕಾಶ್ಮೀರದಲ್ಲಿ ಬೀಡುಬಿಟ್ಟಿದೆ.
ನವೆಂಬರ್ 26ರಿಂದ ಕಾಶ್ಮೀರದಲ್ಲಿ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ದೂರದ ಹಿಮ ಪ್ರದೇಶದಿಂದ ಚಿತ್ರದ ಬಗ್ಗೆ ಅಪ್ ನೀಡಿದೆ. ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸಿನಿಮಾತಂಡ ಈಗಾಗಲೇ ಮೊದಲ ಭಾಗದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದ ಸಂತಸದಲ್ಲಿದೆ. ಈ ಬಗ್ಗೆ ಸಿನಿಮಾತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿ, ದೂರದ ಕಾಶ್ಮೀರದಿಂದ ಪೋಟೋವನ್ನು ಶೇರ್ ಮಾಡಿದ್ದಾರೆ.
'ಚಾರ್ಲಿ' ಜೊತೆ ಕಾಶ್ಮೀರಕ್ಕೆ ಹೊರಟ ನಟ ರಕ್ಷಿತ್ ಶೆಟ್ಟಿ
777 ಚಾರ್ಲಿ ನಿರ್ದೇಶಕ ಕಿರಣ್ ರಾಜ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು,
'ಕಾಶ್ಮೀರದಿಂದ ಶಿಮ್ಲಾವರೆಗಿನ ಕೊನೆಯ ಹಂತದ ಮೊದಲನೇ ಭಾಗದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದ್ದೇವೆ' ಎಂದು ಹೇಳಿದ್ದಾರೆ. ಸದ್ಯದಲ್ಲೇ ಬಹುತೇಕ ಚಿತ್ರೀಕರಣ ಮುಗಿಸಿ ಚಾರ್ಲಿ ತಂಡ ಕರ್ನಾಟಕಕ್ಕೆ ವಾಪಸ್ ಆಗಲಿದೆ.
ಚಿತ್ರದಲ್ಲಿ ತಮಿಳಿನ ಖ್ಯಾತ ನಟ ಬಾಬಿ ಸಿಂಹ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಿಂದ ಈಗಾಗಲೇ ಸಾಕಷ್ಟು ಫೋಟೋಗಳು ರಿಲೀಸ್ ಆಗಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಅವನೇ ಶ್ರೀಮನ್ನಾರಾಯಣ ಬಳಿಕ ರಕ್ಷಿತ್ ಶೆಟ್ಟಿ 777 ಚಾರ್ಲಿ ಮೂಲಕ ಅಭಿಮಾನಿಗಳ ಮುಂದೆ ಬರ್ತಿರುವ ರಕ್ಷಿತ್ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ.