ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಕಾದಿದೆ ಬಿಗ್ ಸರ್ಪ್ರೈಸ್; ಏನದು?
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಇತ್ತೀಚಿಗಷ್ಟೆ ಕೊಡೈಕೆನಾಲ್ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಲಾಕ್ ಡೌನ್ ಬಳಿಕ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ಈಗಾಗಲೇ ಶೇ 90ರಷ್ಟು ಚಿತ್ರೀಕರಣ ಪೂರ್ಣಗೊಳಿಸಿದೆ. ಬೆಂಗಳೂರು, ಕೊಡೈಕೆನಾಲ್ ಅಂತ ಬ್ಯಾಕ್ ಟು ಬ್ಯಾಕ್ ಶೆಡ್ಯೂಲ್ ನಲ್ಲಿ ಶೂಟಿಂಗ್ ಮಾಡಿರುವ ಚಿತ್ರತಂಡ ಇದೀಗ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೊಡಲು ಮುಂದಾಗಿದೆ. ರಕ್ಷಿತ್ ಕಡೆಯಿಂದ ಸಿಗುವ ಸರ್ಪ್ರೈಸ್ ಏನು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿರುವ ರಕ್ಷಿತ್ ಶೆಟ್ಟಿ 'ಶುಕ್ರವಾರ ಬೆಳಗ್ಗೆ 7.30ಕ್ಕೆ ನಿಮಗೆಲ್ಲಾ ಸರ್ಪ್ರೈಸ್ ಕಾದಿದೆ' ಎಂದು ಹೇಳಿದ್ದಾರೆ. ಜೊತೆಗೆ ಬಿಗ್ ಅನೌನ್ಸ್ ಮೆಂಟ್ ಎಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಅಂದ್ಹಾಗೆ 777 ಚಾರ್ಲಿ ಸಿನಿಮಾದಿಂದ ಸಾಕಷ್ಟು ಪೋಸ್ಟರ್ ಗಳು ಈಗಾಗಲೇ ರಿಲೀಸ್ ಆಗಿವೆ. ಹಾಗಾಗಿ ನಾಳೆ ಸಿನಿಮಾದಿಂದ ಟೀಸರ್, ಸಾಂಗ್ ಅಥವಾ ಟ್ರೈಲರ್ ರಿಲೀಸ್ ಮಾಡ್ತಾರಾ ಅಥವಾ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಬಹುದಾ ಎನ್ನುವುದನ್ನು ನಾಳೆವರೆಗೂ ಕಾದು ನೋಡಬೇಕು.

777 ಚಾರ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ಪುಷ್ಕರ್ ಫಿಲ್ಮ್ ಬ್ಯಾನರ್ ನಲ್ಲಿ ಸಿದ್ಧವಾಗುತ್ತಿದೆ. ಚಿತ್ರಕ್ಕೆ ಕಿರಣ್ ರಾಜ್ ಆಕ್ಷನ್ ಹೇಳುತ್ತಿದ್ದಾರೆ. ಈಗಾಗಲೇ ಫಸ್ಟ್ ಮತ್ತು ಪೋಸ್ಟರ್ ಗಳ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ ಸಿನಿಮಾದ ಮೇಲೆ ನಿರೀಕ್ಷೆ ತುಸು ಜಾಸ್ತಿನೇ ಇದೆ.


Click it and Unblock the Notifications











