For Quick Alerts
  ALLOW NOTIFICATIONS  
  For Daily Alerts

  ತುಂಬಾ ಕಷ್ಟದ ಹಂತದ ಚಿತ್ರೀಕರಣ ಮಾಡಿ ಮುಗಿಸಿದ ರಕ್ಷಿತ್ ಶೆಟ್ಟಿ '777 ಚಾರ್ಲಿ' ತಂಡ

  |

  ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.

  777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

  ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

  777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

  ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ.

  ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

  ಮಾಡಿದ ತಪ್ಪನ್ನೆಲ್ಲ ಡೈರಿಯಲ್ಲಿ ಬರೆದು ಕ್ಷಮೆ ಕೇಳಿ ಪಶ್ಚಾತಾಪ ಪಟ್ಟಿದ್ದ ಜಯಶ್ರೀ | Filmibeat Kannada

  ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.

  English summary
  Kannada Actor Rakshit shetty starrer 777 Charlie movie Kashmir schedule completed.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X