ರಕ್ಷಿತ್ v/s ರಶ್ಮಿಕಾ; ಡಿಸೆಂಬರ್ ನಲ್ಲಿ 'ಪುಷ್ಪ' ಮತ್ತು '777 ಚಾರ್ಲಿ' ನಡುವೆ ಪೈಪೋಟಿ

By ಫಿಲ್ಮಿಬೀಟ್ ಡೆಸ್ಕ್

ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷೆಯ 777 ಚಾರ್ಲಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಭಾರಿ ಕುತೂಹಲ ಮೂಡಿಸಿರುವ 777 ಚಾರ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗಿದೆ.

ಈ ನಡುವೆ ಚಿತ್ರದಿಂದ ಮತ್ತೊಂದು ಭರ್ಜರಿ ಸುದ್ದಿ ಕೇಳಿಬರುತ್ತಿದೆ. 777 ಚಾರ್ಲಿ ಸಿನಿಮಾದ ಬಿಡುಗಡೆ ದಿನಾಂಕ ಈಗ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಚಾರ್ಲಿ ಆಗಮನದ ಕುತೂಹಲಕ್ಕೆ ತೆರೆಬಿದ್ದಿದೆ. ಮೂಲಗಳ ಪ್ರಕಾರ 777 ಚಾರ್ಲಿ ಸಿನಿಮಾ ಡಿಸೆಂಬರ್ 31ಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

777 ಚಾರ್ಲಿ ತಂಡ ಈಗಾಗಲೇ ಚಿತ್ರೀಕರಣ ಮುಗಿಸಿ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ಗೌರಿ-ಗಣೇಶ ಹಬ್ಬಕ್ಕೆ ಅಭಿಮಾನಿಗಳಿಗೆ ಸಖತ್ ಗಿಫ್ಟ್ ಕೊಡಲು ಮುಂದಾಗಿರುವ ಚಾರ್ಲಿ ಚಿತ್ರದಿಂದ ಮೊದಲ ಹಾಡನ್ನು ಬಿಡುಗಡೆ ಮಾಡುತ್ತಿದೆ. ಚಿತ್ರದಿಂದ ಮೊದಲ ವಿಡಿಯೋ ಹಾಡನ್ನು ಬಿಡುಗಡೆ ಮಾಡುತ್ತಿದೆ. ಹಾಡು ಬಿಡುಗಡೆ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

Rakshit Shetty Starrer 777 Charlie Movie to Release on December 31

ಡಿಸೆಂಬರ್ ತಿಂಗಳು ರಕ್ಷಿತ್ ಶೆಟ್ಟಿಗೆ ಲಕ್ಕಿ ತಿಂಗಳು. ರಕ್ಷಿತ್ ನಟನೆಯ ಸೂಪರ್ ಹಿಟ್ ಕಿರಿಕ್ ಪಾರ್ಟಿ ಸಿನಿಮಾ ಬಿಡುಗಡೆಯಾಗಿದ್ದು ಸಹ ಡಿಸೆಂಬರ್ ನಲ್ಲಿ. ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗಿತ್ತು. ಬಳಿಕ ಬಂದ ಅವನೇ ಶ್ರೀಮನ್ನಾರಾಯಣ ಸಿನಿಮಾ ಕೂಡ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಇದೀಗ 777 ಚಾರ್ಲಿ ಸಿನಿಮಾ ಕೂಡ ಡಿಸೆಂಬರ್ 31ರಂದು ಬಿಡುಗಡೆಯಾಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

ಇನ್ನು ವಿಶೇಷ ಎಂದರೆ ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾ ಬಿಡುಗಡೆ ಸಮಯದಲ್ಲೇ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ಪ್ಯಾನ್ ಮಟ್ಟದಲ್ಲಿ ಮೂಡಿಬರುತ್ತಿರುವ ಪುಷ್ಪ ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತವಾಗಿ ಮಾಹಿತಿ ಬಹಿರಂಗವಾಗಿಲ್ಲ. ಅದೇ ಸಮಯದಲ್ಲಿ ರಕ್ಷಿತ್ ಸಿನಿಮಾ ಬಿಡುಗಡೆ ಆಗುತ್ತಿರುವುದು ವಿಶೇಷ. 777 ಚಾರ್ಲಿ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ.

ಇಂದು ಬಿಡುಗಡೆಯಾಗುತ್ತಿರುವ 777ಚಾರ್ಲಿ ಸಿನಿಮಾದ ಟಾರ್ಚರ್ ವಿಡಿಯೋ ಹಾಡು ಸಾಂಗ್ ಕುತೂಹಲ ಮೂಡಿಸಿದೆ. ಅಂದಹಾಗೆ ಈ ಹಾಡು ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ತೆರೆಗೆ ಬರುತ್ತಿದೆ.

ಚಾರ್ಲಿ ಸಿನಿಮಾದಲ್ಲಿ ಮನುಷ್ಯ ಮತ್ತು ನಾಯಿಯ ಜೊತೆಗಿನ ಭಾವುಕ, ಪ್ರೀತಿಯ ಪಯಣದ ಕಥೆ ಎನ್ನುವುದು ಈಗಾಗಲೇ ಗೊತ್ತಾಗಿದೆ. ಚಿತ್ರದಲ್ಲಿ ರಕ್ಷಿತ್ ಹೆಸರು ಧರ್ಮ ಮತ್ತು ನಾಯಿಯ ಹೆಸರು ಚಾರ್ಲಿ. ಚಿತ್ರಕ್ಕೆ ಕಿರಣ್ ರಾಜ್ ಆಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಸಂಗೀತ ಶೃಂಗೇರಿ, ರಾಜ್ ಬಿ ಶೆಟ್ಟಿ, ದಾನಿಶ್ ಸೇಠ್, ಬಾಬಿ ಸಿಂಹ ಇನ್ನೂ ಹಲವರು ನಟಿಸಿದ್ದಾರೆ.

ಇನ್ನು ರಕ್ಷಿತ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬರುವುದಾದರೆ ರಕ್ಷಿತ್ ಸದ್ಯ 777 ಚಾರ್ಲಿ ಬಿಡುಗಡೆ ಜೊತೆಗೆ, ಸಪ್ತಸಾಗರದಾಚೆ ಎಲ್ಲೋ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚಿತ್ರಕ್ಕೆ ಹೇಮಂತ್ ರಾವ್ ಆಕ್ಷನ್ ಕಟ್ ಹೇಳಿದ್ದಾರೆ. ಇನ್ನು ಈ ಸಿನಿಮಾ ಬಳಿಕ ಪುಣ್ಯಕೋಟಿ ಸಿನಿಮಾ ಕೂಡ ರಕ್ಷಿತ್ ಕೈಯಲ್ಲಿದೆ. ಇತ್ತೀಚಿಗಷ್ಟೆ 'ರಿಚರ್ಡ್' ಸಿನಿಮಾ ಘೋಷಣೆ ಮಾಡಿದ್ದಾರೆ. ಚಿತ್ರಕ್ಕೆ ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ.

More from Filmibeat

English summary
Actor Rakshit Shetty Starrer 777 Charlie Movie to Release on December 31.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X