ರಕ್ಷಿತ್ ಶೆಟ್ಟಿ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಪೋಸ್ಟರ್ ರಿಲೀಸ್

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪ್ರತಿ ಚಿತ್ರಗಳಲ್ಲೂ ಹೊಸದೊಂದು ಪ್ರಯೋಗವನ್ನು ಮಾಡುತ್ತಲೇ ಇರುತ್ತಾರೆ. ತಮ್ಮ ಸಿನಿಮಾಗಳಲ್ಲಿ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಇನ್ನು ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾ '777 ಚಾರ್ಲಿ' ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ.

ಸದ್ಯ '777 ಚಾರ್ಲಿ' ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ರಕ್ಷಿತ್ ಶೆಟ್ಟಿ, ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ಸಿನಿಮಾ ಮೇಲೂ ಜನರ ಕುತೂಹಲವನ್ನು ಹೆಚ್ಚಿಸಿದ್ದಾರೆ. '777 ಚಾರ್ಲಿ'ಯಲ್ಲಿ ರಕ್ಷಿತ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಕೂಡ ಜನರಿಗೆ ಭಾವನಾತ್ಮಕವಾಗಿ ಕನೆಕ್ಟ್ ಕೂಡ ಆಗಿದೆ.

ಈಗ '777 ಚಾರ್ಲಿ' ಸಿನಿಮಾ ರಿಲೀಸ್ ಆದ ಬಳಿಕ ರಕ್ಷಿತ್ ಶೆಟ್ಟಿಯ ಮತ್ತೊಂದು ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರ ಈಗಿನಿಂದಲೇ ಸಖತ್ ಸುದ್ದಿ ಮಾಡುತ್ತಿದೆ. ಸದ್ಯ ಈಗ ಸಿನಿಮಾದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ್ದು, ರಕ್ಷಿತ್ ಶೆಟ್ಟಿ ಇದರಲ್ಲಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ

ನಿರ್ದೇಶಕ ಹೇಮಂತ್ ಎಂ. ರಾವ್ ಆಕ್ಷನ್ ಕಟ್ ಹೇಳುತ್ತಿರುವ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ( ಮೇ 23) ಸಿನಿಮಾದ ಪೋಸ್ಟರ್‌ ಕೂಡ ರಿಲೀಸ್ ಆಗಿದ್ದು, ಪೋಸ್ಟರ್‌ನಲ್ಲಿ ರಕ್ಷಿತ್ ಶೆಟ್ಟಿ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮೇಲೆ ಮತ್ತಷ್ಟು ಕೌತುಕ ಹೆಚ್ಚಾಗಿದ್ದು, ರಕ್ಷಿತ್ ಶೆಟ್ಟಿ ವಿಭಿನ್ನ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅಲ್ಲದೆ ಈ ಸಿನಿಮಾ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 ಎರಡು ಭಾಗದಲ್ಲಿ ಸಿನಿಮಾ ಚಿತ್ರೀಕರಣ

ಎರಡು ಭಾಗದಲ್ಲಿ ಸಿನಿಮಾ ಚಿತ್ರೀಕರಣ

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಎರಡು ಕಾಲಘಟ್ಟಗಳಲ್ಲಿ ಚಿತ್ರೀಕರಣವಾಗುತ್ತಿದೆ. ಈಗಾಗಲೇ ಸಿನಿಮಾದ ಅರ್ಧ ಕಥೆ 2010 ರ ಕಾಲಘಟ್ಟದಲ್ಲಿರುವಂತೆ ಶೂಟಿಂಗ್ ಆಗಿದ್ದರೆ, ಉಳಿದ ಅರ್ಧ 2020 ರ ಕಾಲಘಟ್ಟದ ದೃಶ್ಯಗಳನ್ನು ಚಿತ್ರೀಕರಣ ನಡೆಯಲಿದೆ. 2010 ರಲ್ಲಿ ರಕ್ಷಿತ್ ಶೆಟ್ಟಿ ಕಾಲೇಜಿನ ಯುವಕನಂತೆ ಕಾಣಿಸಿಕೊಂಡಿದ್ದಾರೆ. ಸದ್ಯ ಇದರ ಮುಂದಿನ 10 ವರ್ಷದ ಶೂಟಿಂಗ್‌ಗಾಗಿ ರಕ್ಷಿತ್ ತಮ್ಮ ತೂಕವನ್ನು 15 ರಿಂದ 20 ಕೆಜಿ ಹೆಚ್ಚಿಸಿಕೊಂಡಿದ್ದಾರೆ. ಹೀಗಾಗಿ ಪೋಸ್ಟರ್‌ನಲ್ಲಿ ಇದುವರೆಗೂ ಕಾಣದ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಪೋಸ್ಟರ್‌ ಮೂಲಕವೇ ರಕ್ಷಿತ್ ಯಾಕಿಷ್ಟು ದಪ್ಪ ಆಗಿದ್ದಾರೆ ಎಂದು ಪ್ರಶ್ನೆ ಕೇಳಿದ್ದವರಿಗೆ ಉತ್ತರ ಸಿಕ್ಕಂತಾಗಿದೆ.

 ಅರ್ಧದಷ್ಟು ಸಿನಿಮಾ ಚಿತ್ರೀಕರಣ ಮುಕ್ತಾಯ

ಅರ್ಧದಷ್ಟು ಸಿನಿಮಾ ಚಿತ್ರೀಕರಣ ಮುಕ್ತಾಯ

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಚಿತ್ರೀಕರಣ ಈಗಾಗಲೇ ಅರ್ಧದಷ್ಟು ಮುಕ್ತಾಯಗೊಂಡಿದೆ. ಈವರೆಗೂ ನಡೆದ ಚಿತ್ರೀಕರಣದಲ್ಲಿ ರಕ್ಷಿತ್, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್ ಸೇರಿಂದಂತೆ ಹಲವು ಕಲಾವಿದರು ನಟಿಸಿದ್ದಾರೆ. ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರದ ಅರ್ಧದಷ್ಟು ಶೂಟಿಂಗ್ ನಡೆದಿದೆ. ಇನ್ನುಳಿದ ಚಿತ್ರೀಕರಣವನ್ನು ಮಂಗಳೂರು, ಬೆಂಗಳೂರಿನಲ್ಲಿ ಮಾಡಲು ನಿರ್ದೇಶಕ ಹೇಮಂತ್ ರಾವ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

 ಜೂನ್ 10ಕ್ಕೆ '777 ಚಾರ್ಲಿ' ರಿಲೀಸ್

ಜೂನ್ 10ಕ್ಕೆ '777 ಚಾರ್ಲಿ' ರಿಲೀಸ್

ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ '777 ಚಾರ್ಲಿ' ಬಿಡುಗಡೆಗೆ ಸಜ್ಜಾಗಿದೆ. ಹೀಗಾಗಿ ಸಿನಿಮಾ ಪ್ರಚಾರ ಕಾರ್ಯದಲ್ಲಿ ರಕ್ಷಿತ್ ಬ್ಯುಸಿಯಾಗಿದ್ದಾರೆ. ಜೂನ್ 10 ರಂದು ವಿಶ್ವದಾದ್ಯಂತ 5 ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಇದಾದ ಬಳಿಕ ಜೂನ್ ಅಂತ್ಯದಲ್ಲಿ ಸಪ್ತ ಸಾಗರದಾಚೆ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ. ಸದ್ಯಕ್ಕೆ ರಕ್ಷಿತ್ ಶೆಟ್ಟಿ ಎಲ್ಲಾ ಗಮನ '777 ಚಾರ್ಲಿ' ಸಿನಿಮಾದ ಮೇಲಿದ್ದು, ಈಗಾಗಲೇ ಸಿನಿಮಾ ಕೂಡ ಟ್ರೈಲರ್ ಹಾಗೂ ಹಾಡು, ಪೋಸ್ಟರ್‌ಗಳಿಂದ ಜನರ ಮನಸ್ಸನ್ನು ಗೆದ್ದಿದೆ. ಸಿನಿಮಾ ಥಿಯೇಟರ್‌ನಲ್ಲಿ ಬಂದು ಬಾಕ್ಸಾಫೀಸ್‌ನಲ್ಲಿ ದಾಖಲೆ ಬರೆಯುವುದಷ್ಟೇ ಬಾಕಿ ಉಳಿದಿದೆ.

More from Filmibeat

English summary
Rakshit Shetty Starrer Sapta Sagaradaache Yello Poster Release. Know More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X