For Quick Alerts
  ALLOW NOTIFICATIONS  
  For Daily Alerts

  ಜನವರಿಯಿಂದ 'ಸಪ್ತ ಸಾಗರದಾಚೆ ಎಲ್ಲೋ' ಹೊರಟ ನಟ ರಕ್ಷಿತ್ ಶೆಟ್ಟಿ

  |

  ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ 777 ಚಾರ್ಲಿ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಚಾರ್ಲಿ ತಂಡ ಕಾಶ್ಮೀರದ ಕಡೆ ಪಯಣ ಬೆಳೆಸಿದೆ. ಕಾಶ್ಮೀರದ ಕಣಿವೆಯಲ್ಲಿ 777ಚಾರ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ.

  ಈ ನಡುವೆ ರಕ್ಷಿತ್ ಶೆಟ್ಟಿ ಕಡೆಯಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. 777 ಚಾರ್ಲಿ ಸಿನಿಮಾ ಬಳಿಕ ರಕ್ಷಿತ್ ಯಾವ ಸಿನಿಮಾದಲ್ಲಿ ನಿರತರಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ. ಹೌದು, ರಕ್ಷಿತ್ ಚಾರ್ಲಿ ಮುಗಿಸಿ 'ಸಪ್ತ ಸಾಗರದಾಚೆ ಎಲ್ಲೋ' ಹೊಗಲಿದ್ದಾರೆ.

  'ಚಾರ್ಲಿ' ಜೊತೆ ಕಾಶ್ಮೀರಕ್ಕೆ ಹೊರಟ ನಟ ರಕ್ಷಿತ್ ಶೆಟ್ಟಿ

  ರಕ್ಷಿತ್ ಸಿನಿಮಾಗಳ ಲಿಸ್ಟ್ ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ಚಿತ್ರ ಕೂಡ ಇದೆ. ಜನವರಿಯಿಂದ ಈ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಡಿಸೆಂಬರ್ ತಿಂಗಳಲ್ಲಿ 777 ಚಾರ್ಲಿ ಸಿನಿಮಾದ ಚಿತ್ರೀಕರಣ ಮುಗಿಯಲಿದೆ. ಬಳಿಕ ಜನವರಿಯಿಂದ ಹೊಸ ಸಿನಿಮಾಗೆ ಸಜ್ಜಾಗಿದ್ದಾರೆ ಸಿಂಪಲ್ ಸ್ಟಾರ್.

  ಅಂದಹಾಗೆ ಸಪ್ತ ಸಾಗರದಾಚೆ ಎಲ್ಲೋ ನಿರ್ದೇಶಕ ಹೇಮಂತ್ ಎಂ ರಾವ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಚಿತ್ರಕ್ಕೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಂಡವಾಳ ಹೂಡುತ್ತಿದ್ದಾರೆ. ಗೋಧಿ ಬಣ್ಣ ಸಾಧಾರಣ ಮೈಗಟ್ಟು ಸಿನಿಮಾ ಬಳಿಕ ಹೆಮಂತ್ ಮತ್ತು ರಕ್ಷಿತ್ ಶೆಟ್ಟಿ ಒಟ್ಟಿಗೆ ಬರ್ತಿರುವುದು ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ. ಅಂದಹಾಗೆ ಸಪ್ತ ಸಾಗರದಾಚೆ ಎಲ್ಲೋ ಸಿ ನಿಮಾದ ಚಿತ್ರೀಕರಣ ಬಹುತೇಕ ಬೆಂಗಳೂರಿನಲ್ಲೇ ನಡೆಯಲಿದೆ.

  ಚಿತ್ರದಲ್ಲಿ ರಕ್ಷಿತ್ ಎರಡು ಶೇಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲು 777 ಚಾರ್ಲಿ ಸಿನಿಮಾದ ಗೆಟಪ್ ನಲ್ಲೇ ಶೂಟಿಂಗ್ ಪ್ರಾರಂಭ ಮಾಡಲಿದ್ದಾರೆ. ಬಳಿಕ ಮತ್ತೊಂದು ಲುಕ್ ರಿವೀಲ್ ಆಗಲಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಇನ್ನೂ ಉಳಿದಂತೆ ಪಾತ್ರವರ್ಗ, ತಂತ್ರಜ್ಞರ ತಂಡದ ಬಗ್ಗೆ ಸದ್ಯದಲ್ಲೇ ಬಹಿರಂಗವಾಗಲಿದೆ.

  ರಾಜಕೀಯಕ್ಕೆ ಮಾಸ್ ಎಂಟ್ರಿ ಕೊಟ್ಟ ರಜನಿಕಾಂತ್ | Filmibeat Kannada

  ರಕ್ಷಿತ್ ಶೆಟ್ಟಿ ಸದ್ಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಜೊತೆಗೆ, ರಿಚ್ಚಿ, ಕಿರಿಕ್ ಪಾರ್ಟಿ-2 ಮತ್ತು ಪುಣ್ಯಕೋಟಿ ಸಿನಿಮಾಗಳಿವೆ. ಸದ್ಯ ಚಿತ್ರೀಕರಣ ನಡೆಯುತ್ತಿರುವ 777 ಚಾರ್ಲಿ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು, ಮುಂದಿನ ವರ್ಷ ತೆರೆಗೆ ಬರುತ್ತಿದೆ.

  English summary
  Simple Star Rakshit Shetty to begin Shoot for Sapta Sagaradache Yello in January.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X