ರಕ್ಷಿತ್ ಶೆಟ್ಟಿಯ 777 ಚಾರ್ಲಿ ರಿಲೀಸ್‌ಗೆ ರೆಡಿ!
ನಟ ರಕ್ಷಿತ್ ಶೆಟ್ಟಿ ಯನ್ನು ಅವರ ಅಭಿಮಾನಿಗಳು ಬಿಗ್ ಸ್ಕ್ರೀನ್ ಮೇಲೆ ಮಿಸ್ ಮಾಡಿಕೊಳ್ಳುತ್ತಾ ಇದ್ದಾರೆ. ವರ್ಷ ಕಳೆದರು ರಕ್ಷಿತ್ ಸಿನಿಮಾಗಳು ರಿಲೀಸ್ ಆಗಿಲ್ಲ. ಈಗ ರಕ್ಷಿತ್ 777 ಚಾರ್ಲಿ ಮೂಲಕ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸಿನಿಮಾದ ಬಿಡುಗಡೆ ದಿನಾಂಕವು ಶೀಘ್ರದಲ್ಲೇ ಘೋಷಣೆಯಾಗಲಿದೆ.
777 ಚಾರ್ಲಿ ಚಿತ್ರದ ಸೆನ್ಸಾರ್ ಪೂರ್ಣಗೊಂಡಿದ್ದು, ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ನೀಡಲಾಗಿದೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಕಾರ್ತಿಕ್ ಅವರು ಸೋಷಿಯಲ್ ಮೀಡಿಯಾದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಟ್ವಿಟರ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿ ಅವರು ಚಿತ್ರದ ರಿಲೀಸ್ ಬಗ್ಗೆಯೂ ಬರೆದುಕೊಂಡಿದ್ದಾರೆ. ಶೀಘ್ರವೇ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಲಾಗುವುದು ಅಂತಾ ನಮೂದಿಸಿದ್ದಾರೆ.

ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗಿದೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾಗಳ ಸಾಲಿಗೆ ಸೇರುತ್ತಿದೆ. ಈ ಚಿತ್ರ ಕಳೆದ ಡಿಸೆಂರ್ 31ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು.
ಈ ಚಿತ್ರ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲು ಸಿದ್ಧವಾಗಿದೆ. ಚಿತ್ರದ ನಿರ್ದೇಶಕ ಕಿರಣ್ ರಾಜ್‌ಚಿತ್ರದ ಬಗ್ಗೆ ಟ್ವೀಟ್ ಮಾಡಿದ್ದು, "ನಾವು ಈ ಚಿತ್ರಕ್ಕೆ 'ಯು' ಪ್ರಮಾಣಪತ್ರ ನಿರೀಕ್ಷಿಸಿದ್ದೇವು. ಆದರೆ 'ಧರ್ಮ' ಎಂಬ ಪಾತ್ರದ ಜೀವನಶೈಲಿಯನ್ನು ವಿವರಿಸಲು ಸಿಗರೇಟ್, ಬಿಯರ್ ಉಪಯೋಗಿಸುವುದು ಅನಿವಾರ್ಯವಾಗಿತ್ತು. ಇದೇ ಕಾರಣದಿಂದ ಸೆನ್ಸಾರ್ ಮಂಡಳಿ ನಮ್ಮ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡಿದೆ" ಬರೆದುಕೊಂಡಿದ್ದಾರೆ.
ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ನಾಯಕಿಯಾಗಿ ಸಂಗೀತಾ ಶೃಂಗೇರಿ ನಟಿಸಿದ್ದಾರೆ. ನಟ, ನಿರ್ದೇಶಕ ರಾಜ್ ಬಿ.ಶೆಟ್ಟಿ, ಡ್ಯಾನಿಶ್ ಸೇಠ್ ಸೇರಿದಂತೆ ಪ್ರಮುಖರು ತಾರಾಗಣದಲ್ಲಿದ್ದಾರೆ. ಈ ಚಿತ್ರಕ್ಕೆ ಜಿ.ಎಸ್.ಗುಪ್ತ ಮತ್ತು ರಕ್ಷಿತ್ ಶೆಟ್ಟಿ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.


Click it and Unblock the Notifications











