Don't Miss!
- News
ಶಿಕ್ಷಕರಾಗಿ ಆಯ್ಕೆಯಾದರೂ ನೇಮಕಾತಿಯಲ್ಲಿ ಕಾನೂನು ತೊಡಕು, ಭವಿಷ್ಯದ ಆತಂಕದಲ್ಲಿ 13,363 ಅಭ್ಯರ್ಥಿಗಳು
- Sports
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪರಭಾಷೆಯಿಂದಲೂ ವ್ಯಕ್ತವಾಯ್ತು ನಟ ಸುದೀಪ್‌ಗೆ ಬೆಂಬಲ
ನಟ ಸುದೀಪ್ ಹಾಗೂ ಅಜಯ್ ದೇವಗನ್ ನಡುವೆ ನಡೆದಿರುವ ಟ್ವೀಟ್ ವಾರ್‌ಗೆ ಕನ್ನಡಿಗರೆಲ್ಲ ಒಟ್ಟಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್ ದೇವಗನ್ ಹೇಳಿಕೆಯನ್ನು ಒಕ್ಕೂರಲಿನಿಂದ ಖಂಡಿಸಿರುವ ಕನ್ನಡಿಗರು, ಅಜಯ್ ದೇವಗನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕನ್ನಡ ಚಿತ್ರರಂಗದ ರಮ್ಯಾ, ಸತೀಶ್ ನೀನಾಸಂ, ಆಶಿಕಾ ರಂಗನಾಥ್, ಶ್ರೀನಗರ ಕಿಟ್ಟಿ, ನಿರ್ದೇಶಕ ಮಂನೋರೆ ಇನ್ನೂ ಹಲವರು ಸುದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಸಹ ಸುದೀಪ್ ಹೇಳಿಕೆ ಬೆಂಬಲ ವ್ಯಕ್ತಪಡಿಸಿದ್ದು, ಅಜಯ್ ದೇವಗನ್‌ಗೆ ತಪರಾಕಿ ಹಾಕಿದ್ದಾರೆ. ಈಗ ಪರಭಾಷೆಗಳಿಂದಲೂ ಸುದೀಪ್‌ಗೆ ಬೆಂಬಲ ವ್ಯಕ್ತವಾಗುತ್ತಿದೆ.
ಜನಪ್ರಿಯ ನಿರ್ದೇಶಕ, ತೆಲುಗಿನ ರಾಮ್ ಗೋಪಾಲ್ ವರ್ಮಾ ಈಗ ಸುದೀಪ್ ಹೇಳಿಕೆ ವಿಷಯವಾಗಿ ಟ್ವೀಟ್ ಮಾಡಿದ್ದು, ಸುದೀಪ್ ಮಾತುಗಳಿಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರಣಿ ಟ್ವೀಟ್‌ಗಳನ್ನು ಮಾಡುವ ಮೂಲಕ ಅಜಯ್ ದೇವಗನ್ ಮಾತುಗಳನ್ನು ಖಂಡಿಸಿದ್ದಾರೆ.
ನೀವು ಹಿಂದಿಯಲ್ಲಿ ಮಾಡಿದ ಟ್ವೀಟ್ ನನಗೆ ಅರ್ಥವಾಯಿತು, ಅದಕ್ಕೆ ಕಾರಣ, ನನಗೆ ಆ ಭಾಷೆಯ ಮೇಲಿರುವ ಗೌರವ, ನಿಮ್ಮ ಟ್ವೀಟ್‌ಗೆ ನಾನು ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿದ್ದರೆ ನಿಮಗೆ ಅರ್ಥವಾಗುತ್ತಿತ್ತೆ?'' ಎಂಬ ಸುದೀಪ್‌ರ ಟ್ವೀಟ್ ಅನ್ನು ಮೆಚ್ಚಿಕೊಂಡಿರುವ ವರ್ಮಾ, ''ಭಾಷೆಯ ವಿಷಯವನ್ನು ನಿಮ್ಮ ಈ ಪ್ರಶ್ನೆಗಿಂತಲೂ ಚೆನ್ನಾಗಿ ಯಾವುದೂ ಅರ್ಥೈಸಲು ಸಾಧ್ಯವಿಲ್ಲ. ಅಜಯ್‌ರ ಹಿಂದಿ ಟ್ವೀಟ್‌ಗೆ ಕನ್ನಡದಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಿದ್ದರೆ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು. ಈಗಲಾದರು ಅರ್ಥ ಮಾಡಿಕೊಳ್ಳಲಿ ಭಾರತ ಒಂದು ಎಂಬುದನ್ನು'' ಎಂದಿದ್ದಾರೆ.
ನಂತರ ಅಜಯ್ ದೇವಗನ್ ಸುದೀಪ್‌ಗೆ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯೆ ನೀಡುತ್ತಾ, ''ಅಜಯ್ ಅನ್ನು ಬಹು ವರ್ಷಗಳಿಂದಲೂ ನಾನು ಬಲ್ಲೆ, ಯಾರನ್ನೂ ನೋಯಿಸುವ ಉದ್ದೇಶ ಅವರಿಗಿಲ್ಲ, ಅವರ ಟ್ವೀಟಿ ಅನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಭಾಷೆಯು ಇಂದು ಪ್ರಾದೇಶಿಕ ಗಡಿ ಹಾಗೂ ಸಂಸ್ಕೃತಿಗಳನ್ನು ಮೀರಿ ಬೆಳೆದಿದೆ. ಭಾಷೆ ಇರುವುದು ಜನರನ್ನು ಹತ್ತಿರ ತರಲೆಂದು ಒಡೆಯಲೆಂದಲ್ಲ'' ಎಂದಿದ್ದಾರೆ ವರ್ಮಾ.
'ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ'' ಎಂಬ ಸುದೀಪ್‌ರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡುತ್ತಾ, ''ನೀವು ಉದ್ದೇಶಪೂರ್ವಕವಾಗಿ ಅಥವಾ ಬೇರೆ ಯಾವುದೇ ಕಾರಣಕ್ಕಾದರೂ ಈ ಟ್ವೀಟ್ ಅನ್ನು ಮಾಡಿರಬಹುದು ಆದರೆ ಈ ನಿಮ್ಮ ಹೇಳಿಕೆ ನನಗೆ ಇಷ್ಟವಾಯಿತು. ಉತ್ತರ ಮತ್ತು ದಕ್ಷಿಣ ಭಾರತ ಚಿತ್ರರಂಗಗಳ ನಡುವೆ ಯುದ್ಧದಂತಹಾ ಪರಿಸ್ಥಿತಿ ಇದ್ದಾಗ ಈ ರೀತಿಯ ಯುದ್ಧಶಮನ ಮಾಡುವ ಮನಸ್ಥಿತಿಯ ಹೇಳಿಕೆಗಳು ಅವಶ್ಯಕವಾಗಿರುತ್ತವೆ'' ಎಂದಿದ್ದಾರೆ ವರ್ಮಾ.
ಮತ್ತೆ ಸುದೀಪ್‌ಗೆ ಪ್ರತ್ಯೇಕ ಟ್ವೀಟ್ ಮಾಡಿರುವ ವರ್ಮಾ, ''ಸುದೀಪ್ ಅವರೆ, ಸತ್ಯವೆಂದರೆ ಬಾಲಿವುಡ್ ಸ್ಟಾರ್ ನಟರು ದಕ್ಷಿಣ ಭಾರತದ ಸಿನಿಮಾ ಸ್ಟಾರ್ ನಟರ ಬಗ್ಗೆ ಅಸೂಯೆ ಹೊಂದಿದ್ದಾರೆ. 'ಕೆಜಿಎಫ್ 2' ಸಿನಿಮಾ ಮೊದಲ ದಿನವೇ 50 ಕೋಟಿ ಕಲೆಕ್ಷನ್ ಮಾಡಿದ್ದಕ್ಕೆ ಅವರಿಗೆ ಉರಿ ಎದ್ದಿದೆ. ಹಿಂದಿ ಸಿನಿಮಾಗಳು ಇಂಥಹಾ ಓಪನಿಂಗ್ ಅನ್ನು ಪಡೆದುಕೊಳ್ಳಲಾರವು'' ಎಂದಿದ್ದಾರೆ.
ಅಂತಿಮವಾಗಿ, ''ರನ್‌ವೇ 34 ಸಿನಿಮಾದ ಕಲೆಕ್ಷನ್ ತೋರಿಸಲಿದೆ ಹಿಂದಿ ವರ್ಸಸ್ ಕನ್ನಡ ಯುದ್ಧದಲ್ಲಿ ಗೆದ್ದವರ್ಯಾರು ಎಂದು. ಅಥವಾ ಅಜಯ್ ದೇವಗನ್ v/s ಸುದೀಪ್ ಯುದ್ಧದಲ್ಲಿ ಗೆದ್ದವರ್ಯಾರು ಎಂದು'' ಎಂದಿದ್ದಾರೆ ವರ್ಮಾ.