ಕಬ್ಜ ಚಿತ್ರಕ್ಕೆ ಸಾಥ್ ನೀಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
ಭಾರತೀಯ ಚಿತ್ರರಂಗದಲ್ಲಿ ಬಹುದೊಡ್ಡ ಪ್ರಾಜೆಕ್ಟ್ ಎಂದು ಬಿಂಬಿತವಾಗಿರುವ ಕಬ್ಜ ಪ್ರತಿಯೊಂದು ಹಂತದಲ್ಲೂ ನಿರೀಕ್ಷೆ ಹೆಚ್ಚಿಸಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಚಿತ್ರದ ಭರ್ಜರಿ ಫೋಟೋಶೂಟ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಸದ್ದು ಮಾಡಿರುವ ಕಬ್ಜ ಈಗ ಥೀಮ್ ಪೋಸ್ಟರ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಇದಕ್ಕೆ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಾಥ್ ನೀಡಿದ್ದಾರೆ.
ಹೌದು, ಸೆಪ್ಟೆಂಬರ್ 18 ರಂದು ಉಪೇಂದ್ರ ಅವರ ಹುಟ್ಟುಹಬ್ಬವಿದೆ. ಈ ವಿಶೇಷವಾಗಿ ಕಬ್ಜ ಚಿತ್ರತಂಡ ಭರ್ಜರಿ ಉಡುಗೊರೆ ನೀಡುತ್ತಿದೆ.

ಸೆಪ್ಟೆಂಬರ್ 17 ರಂದು ಸಂಜೆ 5 ಗಂಟೆಗೆ ರಾಮ್ ಗೋಪಾಲ್ ವರ್ಮಾ ಕಬ್ಜ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದಾರೆ. ಇನ್ನುಳಿದಂತೆ 'ಕಬ್ಜ' ಚಿತ್ರದಲ್ಲಿ ನಾನಾ ಪಾಟೇಕರ್, ಅತುಲ್ ಕುಲಕರ್ಣಿ, ಜಗಪತಿ ಬಾಬು, ಪ್ರಕಾಶ್ ರಾಜ್ ಕಾಣಿಸಿಕೊಳ್ಳುತ್ತಿದ್ದಾರೆ.
ಕನ್ನಡ, ತೆಲುಗು, ತಮಿಳು, ಹಿಂದಿ, ಮರಾಠಿ, ಬೆಂಗಾಲಿ ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸುಮಾರು ನೂರು ಕೋಟಿ ಬಜೆಟ್ ಹೊಂದಿರಲಿದೆ.


Click it and Unblock the Notifications











