For Quick Alerts
  ALLOW NOTIFICATIONS  
  For Daily Alerts

  'ಎಡಗೈ ಅಪಘಾತಕ್ಕೆ ಕಾರಣ' ತಂಡ ಸೇರಿಕೊಂಡ 'ರಂಗಿತರಂಗ' ಖ್ಯಾತಿಯ ರಾಧಿಕಾ ನಾರಾಯಣ್

  |

  ದೂದ್ ಪೇಡ ದಿಗಂತ್ ಸ್ಯಾಂಡಲ್‌ವುಡ್ ಫುಲ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ದಿಗಂತ್ ನಟಿಸುತ್ತಿರುವ 'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾ ಶೂಟಿಂಗ್ ಜೋರಾಗಿ ನಡೆಯುತ್ತಿದೆ.

  ಸಮರ್ಥ್ ಬಿ ಕಡಕೊಳ್ 'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಸಮರ್ಥ್ ನಿರ್ದೇಶಿಸುತ್ತಿರುವ ಮೊದಲ ಸಿನಿಮಾ. ಇತ್ತೀಚೆಗಷ್ಟೇ ಈ ಸಿನಿಮಾ ತಂಡವನ್ನು ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ರು. ಇದೀಗ ಮತ್ತೊಬ್ಬ ನಾಯಕಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಮತ್ಯಾರೂ ಅಲ್ಲ ರಾಧಿಕಾ ನಾರಾಯಣ್.

  ಕನ್ನಡದ ಸೂಪರ್‌ಹಿಟ್ ಸಿನಿಮಾ 'ರಂಗಿತರಂಗ'ಖ್ಯಾತಿಯ ನಟಿ ರಾಧಿಕಾ ನಾರಾಯಣ್ ಈ ತಂಡವನ್ನು ಸೇರಿಕೊಂಡಿದ್ದಾರೆ. 'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದು, ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್ ಕಾಣಿಸಿಕೊಳ್ಳಿದ್ದಾರೆ. ಈಗಾಗಲೇ ರಾಧಿಕಾ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಿದ್ದಾರೆ. ಈ ಮೂಲಕ 'ಎಡಗೈ ಅಪಘಾತಕ್ಕೆ ಕಾರಣ' ಕುತೂಹಲವನ್ನು ದುಪ್ಪಟ್ಟು ಮಾಡಿದೆ.

  'ಎಡಗೈ ಬಳಸುವವರ ಸಮಸ್ಯೆ ಹೇಗಿರುತ್ತೆ? ಅನ್ನೋದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡು ಹೆಣೆದ ಕಥೆಯೇ 'ಎಡಗೈ ಅಪಘಾತಕ್ಕೆ ಕಾರಣ'. ಬ್ಲ್ಯಾಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸ್ಟೋರಿಯ ಸಿನಿಮಾವಿದು. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್‌ಗೆ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ.

  Rangitaranga Actress Radhika Narayan Joining Edagaiye Apaghatakke Karana Team

  'ಎಡಗೈ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಶೇಕಡಾ 80ರಷ್ಟು ಶೂಟಿಂಗ್ ಮುಗಿದಿದೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಸೇರಿದಂತೆ ಹಲವು ಮಂದಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಬರೆದಿದ್ದಾರೆ.

  English summary
  Rangitaranga Actress Radhika Narayan Joining Edagaiye Apaghatakke Karana Team, Know More.
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X