ಸುದೀಪ್ 'ರನ್ನ' ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗಷ್ಟೆ ನಿಧಿನಹೊಂದಿದ ಖ್ಯಾತ ನಿರ್ಮಾಪಕ ಕೋಟಿ ರಾಮು ಅವರನ್ನು ಕಳೆದುಕೊಂಡಿರುವ ದುಃಖ ಮಾಸುವ ಮೊದಲೇ ಮತ್ತೋರ್ವ ನಿರ್ಮಾಪಕನ ಸಾವು ಚಿತ್ರರಂಗಕ್ಕೆ ಆಘಾತತಂದಿದೆ.
Recommended Video
ನಿಮಿಶಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ ನ ಅನ್ನದಾತನನ್ನು ಕೊರೊನಾ ಬಲಿ ಪಡೆದಿದೆ.
ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಮಣಿಪಾಲ್ ಸೆಂಟರ್ ಗೆ ದಾಖಲಾಗಿದ್ದರು. ಬಳಿಕ ಕೋವಿಡ್ ನಿಂದ ಗುಣಮುಖರಾಗಿದ್ದಾದರೂ ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಇಂದು (ಏಪ್ರಿಲ್ 29) ಕೊನೆಯುಸಿರೆಳೆದಿದ್ದಾರೆ.

ನಿರ್ಮಾಪಕ ಚಂದ್ರಶೇಖರ್ ಇತ್ತೀಚಿಗಷ್ಟೆ ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನದ ಉಪೇಂದ್ರ ನಟನೆಯ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. ಆದರೆ ವಿಧಿಯಾಟ ಬೇರೆನೇ ಆಗಿತ್ತು. ಸಿನಿಮಾ ಸೆಟ್ಟೇರುವ ಮೊದಲೆ ಇಹಲೋಕ ತ್ಯಜಿಸಿದ್ದಾರೆ.
ಕೊರೊನಾ ಎರಡನೇ ಅಲೆಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆ, ಬೆಸ್, ಆಕ್ಸಿಜನ್ ಇಲ್ಲದೆ ಜನ ಒದ್ದಾಡುತ್ತಿದ್ದಾರೆ. ಚಿತ್ರರಂಗದ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇತ್ತೀಚಿಗಷ್ಟೆ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಶ್ರೀರಾಮು ಕಣಗಾಲ್ ಅವರು ಕೂಡ ಕೊರೊನಾಗೆ ಬಲಿಯಾಗಿದ್ದಾರೆ.


Click it and Unblock the Notifications











