For Quick Alerts
  ALLOW NOTIFICATIONS  
  For Daily Alerts

  ಉಪೇಂದ್ರ ಹೇರ್ ಸ್ಟೈಲ್‌ನಲ್ಲಿ ಕಾಣಿಸಿಕೊಂಡು ಗಮನ ಸೆಳೆದ ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್

  By ಫಿಲ್ಮಿಬೀಟ್ ಡೆಸ್ಕ್
  |

  ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ನಿರ್ದೇಶಕ ಶಂಕರ್ ಮತ್ತು ರಾಮ್ ಚರಣ್ ಪ್ಯಾನ್ ಇಂಡಿಯಾ ಸಿನಿಮಾದ ಮುಹೂರ್ತ ಸಮಾರಂಭ ಸೆಪ್ಟಂಬರ್ 08ರಂದು ಅದ್ದೂರಿಯಾಗಿ ನೆರವೇರಿತು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನಿನ್ನೆ ಬಳೆಗ್ಗೆ 10.15ಕ್ಕೆ ನಡೆದ ಮುಹೂರ್ತ ಸಮಾರಂಭದಲ್ಲಿ ಬಾಲಿವುಡ್, ಟಾಲಿವುಡ್, ಕಾಲಿವುಡ್ ನ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿರುವುದು ಅಚ್ಚರಿ ಮೂಡಿಸಿದೆ. ಅದ್ದೂರಿಯಾಗಿ ನಡೆದ ಪೂಜಾ ಕಾರ್ಯದಲ್ಲಿ ಸಿನಿಮಾತಂಡ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳ ಸಮಾಗಮ ಅಭಿಮಾನಿಗಳ ಗಮನ ಸೆಳೆಯಿತು.

  ರಾಮ್ ಚರಣ್ ಮತ್ತು ಶಂಕರ್ ಕಾಂಬಿನೇಷನ್‌ನ ಹೊಸ ಸಿನಿಮಾಗೆ ಸದ್ಯ 'ಆರ್ ಸಿ 15' ಎಂದು ನಾಮಕರಣ ಮಾಡಲಾಗಿದೆ. ರಾಮ್ ಚರಣ್ ನಟನೆಯ 15ನೇ ಸಿನಿಮಾ ಇದಾಗಿದೆ. ಚಿತ್ರದ ಮುಹೂರ್ತ ಸಮಾರಂಭದಲ್ಲಿ ಬಾಲಿವುಡ್ ಖ್ಯಾತ ನಟ ರಣ್ವೀರ್ ಸಿಂಗ್, ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ, ಖ್ಯಾತ ನಿರ್ದೇಶಕ ರಾಜಮೌಳಿ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದರು.

  ವಿಶೇಷ ಎಂದರೆ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದ ಬಾಲಿವುಡ್ ಖ್ಯಾತ ನಟ ರಣ್ವೀರ್ ಸಿಂಗ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ರಣ್ವೀರ್ ಸಿಂಗ್ ಹೇರ್ ಸ್ಟೈಲ್ ಅಭಿಮಾನಿಗಳ ಆಕರ್ಷಣೆಯಾಗಿದೆ. ರಣ್ವೀರ್ ಸಿಂಗ್ ಸದಾ ವಿಭಿನ್ನ ಹೇರ್ ಸ್ಟೈಲ್ ಮತ್ತು ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಮ್ ಚರಣ್ ಸಿನಿಮಾ ಮುಹೂರ್ತದಲ್ಲೂ ರಣ್ವೀರ್ ವಿಭಿನ್ನ ಹೇರ್ ಸ್ಟೈಲ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.

  ಅಂದಹಾಗೆ ರಣ್ವೀರ್ ಸಿಂಗ್ ಹೇರ್ ಸ್ಯಾಂಡಲ್‌ವುಡ್ ಸ್ಟಾರ್ ರಿಯಲ್ ಸ್ಟಾರ್ ಉಪೇಂದ್ರ ಅವರ ಹೇರ್ ಸ್ಟೈಲ್ ಹಾಗೆ ಇದೆ. ಉಪೇಂದ್ರ ಅವರು ಅನೇಕ ವರ್ಷಗಳ ಹಿಂದೆಯೇ ರಣ್ವೀರ್ ಸಿಂಗ್ ಹೇರ್ ಸ್ಟೈಲ್‌ನಲ್ಲಿ ಮಿಂಚಿದ್ದರು. ಇದೀಗ ಉಪ್ಪಿ ಹೇರ್ ಸ್ಟೈಲ್‌ನಲ್ಲೇ ಕಾಣಿಸಿಕೊಂಡು ರಣ್ವೀರ್ ಅಚ್ಚರಿ ಮೂಡಿಸಿದ್ದಾರೆ.

  ರಣ್ವೀರ್ ಸಿಂಗ್ ನಿರ್ದೇಶಕ ಶಂಕರ್ ಜೊತೆ ಅನ್ನಿಯನ್ ಸಿನಿಮಾದ ರಿಮೇಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ಅನೌನ್ಸ್ ಮಾಡಲಾಗಿದೆ. ಶಂಕರ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ರಣ್ವೀರ್ ಸಿಂಗ್ ಇಂದು ಶಂಕರ್ ಹೊಸ ಸಿನಿಮಾದ ಮುಹೂರ್ತದಲ್ಲಿ ಕಾಣಿಸಿಕೊಂಡಿದ್ದರು.

  ಅಂದಹಾಗೆ ಚಿತ್ರದಲ್ಲಿ ರಾಮ್ ಚರಣ್‌ಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಳ್ಳುತ್ತಿದ್ದಾರೆ. ಶೇರ್ ಷಾ ಸಕ್ಸಸ್‌ನ ಸಂತಸದಲ್ಲಿರುವ ಕಿಯಾರಾ ಇದೀಗ ರಾಮ್ ಚರಣ್ ಜೊತೆ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು 'ಆರ್ ಸಿ 15' ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದ್ದು 3ಡಿ ಸಿನಿಮಾ ಇದಾಗಿದೆ. ಬಿಗ್ ಬಜೆಟ್‌ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜ್ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡುವ ಉತ್ಸಾಹದಲ್ಲಿದ್ದಾರೆ.

  English summary
  Ranveer Singh attend RC15 movie Muhurtha with Real star Upendra's hairstyle.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X