For Quick Alerts
  ALLOW NOTIFICATIONS  
  For Daily Alerts

  ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ

  |
  Rashmika Mandanna apologizes to Allu Arjun , why ? | FILMIBEAT KANNADA

  ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಇದಕ್ಕೆ ಕಾರಣ ತಮ್ಮ ಸಿನಿಮಾದ ಸಂಭ್ರಮದ ಕ್ಷಣದಲ್ಲಿ ಅವರು ಭಾಗಿಯಾಗಲು ಆಗುತ್ತಿಲ್ಲ.

  ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

  ಮೈಕಲ್ ಜಾಕ್ಸನ್ ಸ್ಟೈಲ್ ನಲ್ಲಿ ರಶ್ಮಿಕಾ ಮಂದಣ್ಣಮೈಕಲ್ ಜಾಕ್ಸನ್ ಸ್ಟೈಲ್ ನಲ್ಲಿ ರಶ್ಮಿಕಾ ಮಂದಣ್ಣ

  ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯ ಆಗಿಲ್ಲ. ಈ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿರುವ ರಶ್ಮಿಕಾ ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಚಿತ್ರತಂಡದ ಜೊತೆಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

  ಇದು ಅಲ್ಲು ಅರ್ಜುನ್ ನಟನೆಯ 20ನೇ ಸಿನಿಮಾವಾಗಿದೆ. 'ರಂಗಸ್ಥಳಂ' ನಂತರ ಸುಕುಮಾರ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಮೊದಲ ಬಾರಿಗೆ ಸ್ಟೈಲಿಷ್ ಸ್ಟಾರ್ ಜೊತೆಗೆ ತೆರೆ ಹಂಚಿಕೊಳ್ಳುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ.

  'ಮಾತೃಭಾಷೆ ಬಿಟ್ಟವರು ಮೂರು ಬಿಟ್ಟವರಿಗಿಂತ ಮೂರ್ಖರು' ಡೈಲಾಗ್ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ'ಮಾತೃಭಾಷೆ ಬಿಟ್ಟವರು ಮೂರು ಬಿಟ್ಟವರಿಗಿಂತ ಮೂರ್ಖರು' ಡೈಲಾಗ್ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

  ಮತ್ತೊಂದು ವಿಶೇಷ ಏನೆಂದರೆ, ಸಿನಿಮಾದಲ್ಲಿ ಕಾಲಿವುಡ್ ನಟ ವಿಜಯ್ ಸೇತುಪತಿ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಇದೆ. ಇತ್ತೀಚಿಗೆ 'ಸೈರಾ ನರಸಿಂಹ ರೆಡ್ಡಿ' ಸಿನಿಮಾದಲ್ಲಿ ನಟಿಸಿದ್ದ ವಿಜಯ್ ಸೇತುಪತಿ ಇದೀಗ ಅಲ್ಲು ಅರ್ಜುನ್ ಜೊತೆ ನಟಿಸುವ ಸಾಧ್ಯತೆ ಇದೆ.

  English summary
  Actress Rashmika Mandanna said sorry to AA 20 movie team.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X