ವಿಜಯ್ ದೇವರಕೊಂಡ ನಿರ್ಮಾಣದ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ

ಸ್ಯಾಂಡಲ್ ವುಡ್ ನ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಈಗ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕೈತುಂಬ ಸಿನಿಮಾಗಳನ್ನು ಇಟ್ಟುಕೊಂಡಿರುವ ರಶ್ಮಿಕಾ ತೆಲುಗು ಚಿತ್ರರಂಗದ ಸ್ಟಾರ್ ನಟರ ಜೊತೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿಗಷ್ಟೆ ಪ್ರಿನ್ಸ್ ಮಹೇಶ್ ಬಾಬು ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ ರಶ್ಮಿಕಾ, ಅಲ್ಲು ಅರ್ಜುನ್, ನಿತಿನ್ ಸಿನಿಮಾಗಳಲ್ಲು ಬಣ್ಣ ಹಚ್ಚುತ್ತಿದ್ದಾರೆ. ಇದರ ಜೊತೆಗೀಗ ರಶ್ಮಿಕಾ ಕಡೆಯಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.

ವಿಜಯ್ ದೇವರಕೊಂಡ ನಿರ್ಮಾಣದ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ. ಹೌದು, ವಿಜಯ್ ದೇವರಕೊಂಡ ಕಳೆದ ವರ್ಷ 'ಕಿಂಗ್ ಆಫ್ ದಿ ಹಿಲ್' ನಿರ್ಮಾಣ ಸಂಸ್ಥೆಯನ್ನು ತೆರೆದಿದ್ದಾರೆ. ತಮ್ಮ ಬ್ಯಾನರ್ ನಲ್ಲಿ ಉತ್ತಮ ಸಿನಿಮಾಗಳನ್ನು ಮಾಡುವ ಉದ್ದೇಶ ಇಟ್ಟು ಕೊಂಡಿರುವ ವಿಜಯ್ ಒಂದೊಳ್ಳೆ ಕಥೆಗಾಗಿ ಕಾಯುತ್ತಿದ್ದರು.

Rashmika Mandanna will be playing the female lead in the vijay devarakonda production

ಆದ್ರೀಗ ವಿಜಯ್ ಗೆ ಉತ್ತಮ ಕಥೆ ಸಿಕ್ಕಿದೆಯಂತೆ. ವಿಜಯ್ ಬ್ಯಾನರ್ ನಿಂದ ಮೂಡಿ ಬರುತ್ತಿರುವ ಸಿನಿಮಾಗೆ ರಶ್ಮಿಕಾ ನಾಯಕಿಯಾಗಿ ಅಭಿನಯಿಸಲಿದ್ದಾರಂತೆ. ಆದ್ರೆ ನಾಯಕ ಮತ್ತು ನಿರ್ದೇಶಕರ ಬಗ್ಗೆ ಸ್ಪಷ್ಟವಾಗಿ ಯಾವುದೆ ಮಾಹಿತಿ ಹೊರಬಿದ್ದಿಲ್ಲ. ಆದ್ರೆ ಕೆಲ ಮೂಲಗಳ ಪ್ರಕಾರ ವಿಜಯ್ ದೇವರಕೊಂಡ ಅವರೆ ರಶ್ಮಿಕಾಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

'ಗೀತಾ ಗೋವಿಂದಂ' ಸಿನಿಮಾ ಮೂಲಕ ಸೂಪರ್ ಹಿಟ್ ಜೋಡಿಯಾಗಿ ಹೊರಹೊಮ್ಮಿರುವ ವಿಜಯ್ ಮತ್ತು ರಶ್ಮಿಕಾ, ಆನಂತರ 'ಡಿಯರ್ ಕಾಮ್ರೇಡ್' ಸಿನಿಮಾದಲ್ಲೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸದ್ಯ ಡಿಯರ್ ಕಾಮ್ರೇಡ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈಗ ಮೂರನೆ ಬಾರಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಒಟ್ಟಿಗೆ ಅಭಿನಯಿಸುವ ಸಾಧ್ಯತೆ ಇದೆ.

More from Filmibeat

English summary
Kannada actress Rashmika Mandanna will be playing the female lead in the Vijay Devonda production. Vijay is likely to be playing lead opposite Rashmika.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X