For Quick Alerts
  ALLOW NOTIFICATIONS  
  For Daily Alerts

  'ಕನ್ನಡಿಗ' ಸಿನಿಮಾದ ರವಿಚಂದ್ರನ್ ಲುಕ್ ರಿವೀಲ್

  |

  ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಬಹುನಿರೀಕ್ಷೆಯ 'ಕನ್ನಡಿಗ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಮುಹೂರ್ತ ಮಾಡಿದ್ದ ಸಿನಿಮಾತಂಡ ಆಗಲೇ ಚಿತ್ರೀಕರಣ ಪ್ರಾರಂಭ ಮಾಡಿದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಸಿನಿಮಾದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ಪ್ರಾರಂಭವಾಗಿದೆ.

  ಚಿತ್ರದಲ್ಲಿ ರವಿಚಂದ್ರನ್ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಿರುವ ರವಿಚಂದ್ರನ್ ಗೆಟಪ್ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಆದರೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಇದೀಗ ರವಿಚಂದ್ರನ್ ಲುಕ್ ರಿವೀಲ್ ಆಗಿದೆ. ಚಿತ್ರೀಕರಣ ಸೆಟ್ ನಲ್ಲಿರುವ ರವಿಚಂದ್ರನ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

  ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರದ ಮೂಲಕ ಜೇಮಿ ಆಲ್ಟರ್ ಸ್ಯಾಂಡಲ್‌ವುಡ್ ಎಂಟ್ರಿಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರದ ಮೂಲಕ ಜೇಮಿ ಆಲ್ಟರ್ ಸ್ಯಾಂಡಲ್‌ವುಡ್ ಎಂಟ್ರಿ

  ಬಿಳಿ ಪಂಚೆ ಬಿಳಿ ಶರ್ಟ್ ಧರಿಸಿ, ಉದ್ದ ಮೀಸೆ ಬಿಟ್ಟಿರುವ ರವಿಚಂದ್ರನ್ ಲುಕ್ ಅಭಿಮಾನಿಗಳ ಮನಗೆದ್ದಿದೆ. 'ಕನ್ನಡಿಗ' ಚಿತ್ರಕ್ಕೆ ನಿರ್ದೇಶಕ ಬಿ ಎಂ ಗಿರಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಜಟ್ಟ ಮತ್ತು ಮೈತ್ರಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಗಿರಿರಾಜ್ ಇದೀಗ ಕನ್ನಡಿಗ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮುಂದೆ ಬರ್ತಿದ್ದಾರೆ.

  'ಕನ್ನಡಿಗ' ಸಿನಿಮಾದಲ್ಲಿ 1858ರ ಕಾಲಘಟ್ಟವನ್ನು ಮರು ಸೃಷ್ಟಿಸಲಾಗುತ್ತಿದೆ. ಇಲ್ಲಿ ನಾಯಕಿಯಾಗಿ ಪಾವನಾ ನಟಿಸುತ್ತಿದ್ದಾರೆ. ಸಂಕಮ್ಮಬ್ಬೆಯಾಗಿ ಸ್ವಾನಿ ಚಂದ್ರಶೇಖರ್ ಕಾಣಿಸಿಕೊಂಡರೇ, ರೆವರೆಂಡ್ ಫರ್ಡಿನಾಂಡ್ ಕಿಟೆಲ್ ಪಾತ್ರದಲ್ಲಿ ಪಾತ್ರದಲ್ಲಿ ಜೇಮಿ ಆಲ್ಟರ್ ಬಣ್ಣಹಚ್ಚುತ್ತಿದ್ದಾರೆ. ದತ್ತಣ್ಣ, ಅಚ್ಯುತ್ ಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.

  English summary
  Kannada Actor Ravichandran's look from the period drama Kannadiga revealed.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X