For Quick Alerts
  ALLOW NOTIFICATIONS  
  For Daily Alerts

  'ಕನ್ನಡಿಗ' ಸಿನಿಮಾ ಬಳಿಕ ಮತ್ತೆ ನಿರ್ದೇಶನಕ್ಕೆ ಸಜ್ಜಾದ ರವಿ ಚಂದ್ರನ್

  |

  ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ ಕನ್ನಡಿಗ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಕನ್ನಡಿಗ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿರುವ ರವಿಚಂದ್ರನ್, ಸದ್ಯ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಕನ್ನಡಿಗ ಸಿನಿಮಾ ಮುಗಿಯುತ್ತಿದ್ದಂತೆ ರವಿಚಂದ್ರನ್ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

  ಹೌದು ರವಿಚಂದ್ರನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ ಎನ್ನಲಾಗುತ್ತಿದೆ. ರವಿಚಂದ್ರನ್ ನಿರ್ದೇಶನದ ರಾಜೇಂದ್ರ ಪೊನ್ನಪ್ಪ ಸಿನಿಮಾ ಇನ್ನು ರಿಲೀಸ್ ಆಗಿಲ್ಲ. ಈ ನಡುವೆ ರವಿಚಂದ್ರನ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

  ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ

  ಮೂಲಗಳ ಪ್ರಕಾರ ರವಿಚಂದ್ರನ್ ರಾಜಕೀಯ ಕಥಾಹಂದರ ಹೊಂದಿರುವ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ. ಈ ಸಿನಿಮಾಗೆ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳುವ ಜೊತೆಗೆ ನಟನೆ ಸಹ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

  ಚಿತ್ರಕ್ಕೆ ಎನ್ ಎಸ್ ರಾಜ್ ಕುಮಾರ್ ಬಂಡವಾಳ ಹೂಡಲಿದ್ದಾರಂತೆ. ಈಗಾಗಲೇ ಕನ್ನಡಿಗ ಸಿನಿಮಾಗೆ ಬಂಡವಾಳ ಹೂಡಿರುವ ಎನ್ ಎಸ್ ರಾಜ್ ಕುಮಾರ್ ಮತ್ತೆ ರವಿಚಂದ್ರನ್ ಜೊತೆ ಕೈಜೋಡಿಸುತ್ತಿದ್ದಾರೆ. ಎನ್ ಎಸ್ ರಾಜ್ ಕುಮಾರ್ ಈ ಹಿಂದೆ ಪೃಥ್ವಿ, ಜಟ್ಟಾ, ಮೈನಾ, ಮೈತ್ರಿ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.

  ಬಾಕ್ಸರ್ ಮುಂದೆ ಘರ್ಜಿಸಲಿದ್ದಾರೆ ಉಪೇಂದ್ರ | Filmibeat Kannada

  ರವಿಚಂದ್ರನ್ ಸದ್ಯ ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿದ್ದು, ಬಹುತೇಕ ಕಥೆಯ ಕೆಲಸ ಮುಗಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತವಾಗಿ ಸಿನಿಮಾ ಅನೌನ್ಸ್ ಮಾಡುವ ಸಾಧ್ಯತೆ ಇದೆ. ರವಿಚಂದ್ರನ್ ನಿರ್ದೇಶನದ ರಾಜಕೀಯ ಹಿನ್ನಲೆ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

  English summary
  Kannada Actor Ravichandran to Direct and Act political drama after Kannadiga movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X