For Quick Alerts
  ALLOW NOTIFICATIONS  
  For Daily Alerts

  ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ಶ್ರುತಿ

  |

  ಸ್ಯಾಂಡಲ್ ವುಡ್ ಪಾಲಿಗೆ ಇಂದು (ಸೆಪ್ಟಂಬರ್ 18) ವಿಶೇಷವಾದ ದಿನ. ಚಂದನವನದ ಮೂವರು ಖ್ಯಾತ ಕಲಾವಿದರು ಹುಟ್ಟಿದ ದಿನ. ಸಾಹಸ ಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ಶ್ರುತಿ ಈ ಮೂವರು ಸ್ಟಾರ್ ಕಲಾವಿದರು ಹುಟ್ಟಿದ್ದು ಒಂದೇ ದಿನ. ಮೂವರು ಸ್ಟಾರ್ ಕಲಾವಿದರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

  ವಿಷ್ಣುದಾದಾನ ಹುಟ್ಟುಹಬ್ಬವನ್ನು ಅಭಿಮಾನಿಗಳು ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದಾರೆ. ರಕ್ತದಾನ, ಅನ್ನದಾನ ಸೇರಿದಂತೆ ನಾನಾರೀತಿಯ ಸಾಮಾಜಿಕ ಕೆಲಸಗಳ ಮೂಲಕ ವಿಷ್ಣುವರ್ಧನ್ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಶುಭಾಶಯ ಮಹಾಪೂರವೇ ಹರಿದುಬರುತ್ತಿದೆ. ಅಭಿಮಾನಿಗಳ ಜೊತೆಗೆ ಸಿನಿಮಾ ಕಲಾವಿದರು ಸಹ ವಿಶ್ ಮಾಡುವ ಮೂಲಕ ಅಭಿನಯ ಭಾರ್ಗವನನ್ನು ಸ್ಮರಿಸುತ್ತಿದ್ದಾರೆ. ವಿಷ್ಣುದಾದಾನ ಹುಟ್ಟುಹಬ್ಬದ ದಿವನೇ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ಶ್ರುತಿ ಕೂಡ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಮುಂದೆ ಓದಿ..

  ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಉಪೇಂದ್ರ

  ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಉಪೇಂದ್ರ

  ಸಾಹಸ ಸಿಂಹ ಹುಟ್ಟಿದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅವರ ಜನ್ಮದಿನ ಇರುವುದು ವಿಶೇಷ. ಉಪೇಂದ್ರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಅದ್ದೂರಿ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಹಾಗಾಗಿ ಉಪೇಂದ್ರ ಸರಳವಾಗಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

  ವಿಶೇಷ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

  ವಿಶೇಷ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

  ವಿಶೇಷ ಎಂದರೆ ಈಗಾಗಲೇ ವೈರಲ್ ಆಗಿರುವ ಹೊಸ ಸಿನಿಮಾದ ಟೈಟಲ್ ಹಾಗೆ ಇರುವ ಕೇಕ್ ಕತ್ತರಿಸಿ ಉಪೇಂದ್ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ.

  ಅಭಿಮಾನಿಗಳಲ್ಲಿ ವಿಶೇಷ ಮನವಿ

  ಅಭಿಮಾನಿಗಳಲ್ಲಿ ವಿಶೇಷ ಮನವಿ

  ಇನ್ನು ಹುಟ್ಟುಹಬ್ಬದ ಪ್ರಯುಕ್ತ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳ ವಿಶೇಷ ಮನವಿ ಸಹ ಮಾಡಿದ್ದರು. ಕೊರೊನಾ ಕಾರಣದಿಂದ ಅದ್ದೂರಿ ಹುಟ್ಟುಹಬ್ಬ ಆಚರಿಸುತ್ತಿಲ್ಲ, ತಾವು ಇದ್ದಲ್ಲಿಯೇ ವಿಶ್ ಮಾಡಿ ಎಂದು ಕೇಳಿಕೊಂಡಿದ್ದರು. ''ಅಭಿಮಾನಿಗಳ ದಿನ, 18.09.2021 ಪ್ರತಿವರ್ಷ ಅಭಿಮಾನಿಗಳೊಂದಿಗೆ ಆಚರಿಸುತ್ತಿದ್ದ ಅಭಿಮಾನಿಗಳ ದಿನದ ಸಂಭ್ರಮ ಈ ವರ್ಷವೂ ಆಚರಿಸಲು ಆಗದಿರುವುದಕ್ಕೆ ವಿಷಾದಿಸುತ್ತೇನೆ. ನಾನು ಬೆಂಗಳೂರಿನಲ್ಲಿ ಇಲ್ಲದಿರುವ ಕಾರಣ ಎಲ್ಲಾ ಅಭಿಮಾನಿಗಳು ಅವರವರು ಇರುವ ಕಡೆಯೇ ಸರಳವಾಗಿ ಈ ದಿನವನ್ನು ಆಚರಿಸಿ ಹಾರೈಸಬೇಕಾಗಿ ಬಯಸುತ್ತೇನೆ.'' -ನಿಮ್ಮ ಉಪೇಂದ್ರ ಎಂದು ಹೇಳಿದ್ದರು.

  ಅಭಿಮಾನಿಗಳಿಗೆ ಏನೆಲ್ಲ ಸರ್ಪ್ರೈಸ್ ಸಿಗಲಿದೆ

  ಅಭಿಮಾನಿಗಳಿಗೆ ಏನೆಲ್ಲ ಸರ್ಪ್ರೈಸ್ ಸಿಗಲಿದೆ

  ಹುಟ್ಟುಹಬ್ಬದ ದಿನ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ಈಗಾಗಲೇ ಟೈಟಲ್ ವೈರಲ್ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಪೇಂದ್ರ ಸಿನಿಮಾ ಅಂದ್ಮೇಲೆ ವಿಶೇಷತೆ ಇದ್ದೆ ಇರುತ್ತದೆ. ಅದರಂತೆ ಸದ್ಯ ವೈರಲ್ ಆಗಿರುವ ಪೋಸ್ಟರ್ ಸಹ ಭಾರಿ ಚರ್ಚೆಗೆ ಕಾರಣವಾಗಿದೆ. ಇನ್ನು ಬಹುನಿರೀಕ್ಷೆಯ ಕಬ್ಜ ಸಿನಿಮಾದಿಂದ ಸರ್ಪ್ರೈಸ್ ಸಿಗುವ ಸಾಧ್ಯತೆ ಇದೆ.

  ನಟಿ ಶ್ರುತಿ ಹುಟ್ಟುಹಬ್ಬ

  ನಟಿ ಶ್ರುತಿ ಹುಟ್ಟುಹಬ್ಬ

  ಸ್ಯಾಂಡಲ್ ವುಡ್ ನ ಹಿರಿಯ ನಟಿ ಶ್ರುತಿ ಅವರು ಸಹ ಇಂದು (ಸೆಪ್ಟಂಬರ್ 18) ಆಚರಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟಿ ಅವರಿಗೂ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇಂದು ಹುಟ್ಟುಹಬ್ಬದ ವಿಶೇಷವಾಗಿ ನಟಿ ಶ್ರುತಿ ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿದ್ದಾರೆ. ಹುಟ್ಟುಹಬ್ಬದ ದಿನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಧನ್ಯರಾಗಿದ್ದಾರೆ. ಈ ಬಗ್ಗೆ ಶ್ರುತಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. "ಜನುಮದಿನದಂದು ತಿರುಪತಿ ತಿಮ್ಮಪ್ಪನ ದರ್ಶನ, ಪ್ರತ್ಯಕ್ಷ ದೇವರಾದ ಹೆತ್ತವರ ಆಶೀರ್ವಾದ, ದೇವರವರದಂತ ಮಗಳು, ನೆನ್ನೆ ಇಂದಲೇ ಶುಭಕೋರಿದ ಅಭಿಮಾನಿಗಳು, ಅಚ್ಚರಿಯ ಶುಭಾಶಯ ಕಳಿಸಿದ ಸ್ನೇಹಿತರು, ಹಿತೈಷಿಗಳು. ನಾನೇ ಪುಣ್ಯವಂತಳು" ಎಂದು ಬರೆದುಕೊಂಡಿದ್ದಾರೆ.

  English summary
  Real star Upendra and Actress Shruthi Celebrating birthday today. Shruthi visits to tirupati on her birthday.
  Saturday, September 18, 2021, 15:33
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X