For Quick Alerts
  ALLOW NOTIFICATIONS  
  For Daily Alerts

  ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

  |

  ಸ್ಯಾಂಡಲ್ ವುಡ್ ನ 'ಬುದ್ಧಿವಂತ' ನಟ ಮತ್ತು ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರಗೆ ಹುಟ್ಟುಹಬ್ಬ ಸಂಭ್ರಮ. 53ನೇ ವಸಂತಕ್ಕೆ ಕಾಲಿಟ್ಟಿರುವ ಉಪೇಂದ್ರ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ.

  ಅಂದ್ಹಾಗೆ ಉಪೇಂದ್ರ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೊನಾ ವೈರಸ್ ಹಾವಳಿಯ ಪರಿಣಾಮ ಈ ಬಾರಿಯ ಅದ್ದೂರಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಪ್ರತೀ ವರ್ಷ ಉಪೇಂದ್ರ ನಿವಾಸದ ಮುಂದೆ ಅಭಿಮಾನಿಗಳ ದಂಡೇ ನೆರದಿರುತ್ತಿತ್ತು.

  'ಉಪೇಂದ್ರ ಡೆಡ್ಲಿ ಲುಕ್': ಕಬ್ಜ ಪೋಸ್ಟರ್ ಬಿಡುಗಡೆ ಮಾಡಿದ ವರ್ಮಾ ಖುಷ್'ಉಪೇಂದ್ರ ಡೆಡ್ಲಿ ಲುಕ್': ಕಬ್ಜ ಪೋಸ್ಟರ್ ಬಿಡುಗಡೆ ಮಾಡಿದ ವರ್ಮಾ ಖುಷ್

  ನೆಚ್ಚಿನ ನಟನನ್ನು ನೋಡಲು, ಶುಭಹಾರೈಸಲು ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಬಂದು ಜಮಾಯಿಸುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಅದ್ದೂರಿತನಕ್ಕೆ ಬ್ರೇಕ್ ಬಿದ್ದಿದೆ. ಈ ಬಾರಿ ಮನೆಯಲ್ಲಿ ಇರುವುದಿಲ್ಲ, ಯಾರು ಮನೆಯ ಬಳಿ ಬರಬೇಡಿ ಎಂದು ರಿಯಲ್ ಸ್ಟಾರ್ ಉಪೇಂದ್ರ ಈಗಾಗಲೇ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

  ಇನ್ನೂ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ 'ಕಬ್ಜ' ಸಿನಿಮಾದ ಥೀಮ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. 'ಕಬ್ಜ' ಸಿನಿಮಾ ದಕ್ಷಿಣ ಭಾರತದ ಎಲ್ಲಾ ಭಾಷೆಯ ಜೊತೆಗೆ ಹಿಂದಿಯಲ್ಲಿಯೂ ತೆರೆಗೆ ಬರುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾಗುತ್ತಿರುವ 'ಕಬ್ಜ' ಸಿನಿಮಾದ ಥೀಮ್ ಪೋಸ್ಟರ್ ಅನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ರಿಲೀಸ್ ಮಾಡಿದ್ದಾರೆ.

  ನನ್ನ ನಂಬಿ ಸರ್ಕಾರ ದೊಡ್ಡ ಜವಾಬ್ದಾರಿ ಕೊಟ್ಟಿದೆ | Shruthi Krishna | Filmibeat Kannada

  ಇನ್ನೂ ವಿಶೇಷ ಅಂದರೆ ರಿಯಲ್ ಸ್ಟಾರ್ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಸದ್ಯದಲ್ಲೇ ಸಿನಿಮಾ ಅನೌನ್ಸ್ ಮಾಡುವುದಾಗಿ ಹೇಳಿದ್ದರು. ಹಾಗಾಗಿ ಇಂದು ಹುಟ್ಟುಹಬ್ಬದ ಪ್ರಯುಕ್ತ ಉಪ್ಪಿ ನಿರ್ದೇಶನದ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ಅಭಿಮಾನಿಗಳು ಉಪ್ಪಿ ನಿರ್ದೇಶನದ ಸಿನಿಮಾಗಾಗಿ ಕಾತರದಿಂದ ಕಾಯುತ್ತಿದ್ದಾರೆ.

  English summary
  Real Star Upendra celebrating his 53rd birthday. Ram Gopal Varma to release the theme poster of Kabza for Upendra's birthday.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X