Breaking: ಕನ್ನಡದ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ

ಕನ್ನಡದ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್(76) ಕೊನೆಯುಸಿರೆಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ಹಾಸ್ಯ ಕಲಾವಿದರಾಗಿ ಅವರು ಪ್ರೇಕ್ಷಕರನ್ನು ರಂಜಿಸಿದ್ದರು. ರಾತ್ರಿ 2.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧವಶರಾಗಿದ್ದಾರೆ.

ಸುಲ್ತಾನ್‌ ಪಾಳ್ಯದಲ್ಲಿರುವ ನಿವಾಸದಲ್ಲಿ ಬ್ಯಾಂಕ್ ಜನಾರ್ಧನ್ ಪಾರ್ಥೀವ ಶರೀರ ಇರಿಸಲಾಗಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಹಾಸ್ಯ ಕಲಾವಿದರಾಗಿ ಅವರು ಬಣ್ಣ ಹಚ್ಚಿದ್ದರು. 80 ಹಾಗೂ 90ರ ದಶಕದಲ್ಲಿ ಬಹುಬೇಡಿಕೆಯ ಹಾಸ್ಯ ಎನಿಸಿಕೊಂಡಿದ್ದರು. ಕನ್ನಡ ಕಿರುತೆರೆಯಲ್ಲಿ ಕೂಡ ಬ್ಯಾಂಕ್ ಜನಾರ್ಧನ್ ಮಿಂಚಿದ್ದರು.

Renowned Kannada comedian Bank Janardhan passes away

ಜಗ್ಗೇಶ್ ಹಾಗೂ ಬ್ಯಾಂಕ್ ಜನಾರ್ಧನ್ ಕಾಂಬಿನೇಷನ್ ಹಿಟ್ ಆಗಿತ್ತು. ಕೆಲ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. 22 ವರ್ಷಗಳ ಹಿಂದೆ ಹೃದಯಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿ ಬ್ಯಾಂಕ್ ಜನಾರ್ಧನ್ ಚಿಕಿತ್ಸೆ ಪಡೆದಿದ್ದರು. ಅದೇ ಸಮಯದಲ್ಲಿ ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಇತ್ತೀಚಿನ ದಿನಗಳಲ್ಲಿ ವಯಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

'ಶ್' ಚಿತ್ರದ ಪೊಲೀಸ್ ಆಫೀಸರ್ ಪಾತ್ರದಲ್ಲಿ ಬ್ಯಾಂಕ್ ಜನಾರ್ಧನ್ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದುಬಿಟ್ಟಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಲ್ಲಿ ನಟಿಸೋದು ಕಮ್ಮಿ ಆಗಿತ್ತು. ಸಂಜೆ ವೇಳೆಗೆ ಜನಾರ್ಧನ್ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ನಟ, ನಿರ್ದೇಶಕ ಉಪೇಂದ್ರ "ತರ್ಲೆನನ್ ಮಗ" "ಶ್" ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿ ಪಯಣದಲ್ಲಿ ಯಶಸ್ವೀ ಹೆಜ್ಜೆ ಇಡಲು ಕಾರಣಕರ್ತರಾದ ಸರಳ, ಸ್ನೇಹ ಜೀವಿ, ಅಪರೂಪದ ಕಲಾವಿದ ಬ್ಯಾಂಕ್ ಜನಾರ್ಧನ್
ಬೇರೆ ಪಾತ್ರಕ್ಕೆ ಸಜ್ಜಾಗಿ ಬರಲು ವಿಧಿವಶರಾಗ್ಗಿದ್ದಾರೆ. ಬೇಗ ಬನ್ನಿ ಸಾರ್" ಎಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ನಟ ಜಗ್ಗೇಶ್ ಟ್ಟೀಟ್ ಮಾಡಿ "ಆತ್ಮೀಯ ಗೆಳೆಯ ಜನಾರ್ದನ ಹೋಗಿ ಬಾ. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ. ಆತ್ಮಕ್ಕೆ ಶಾಂತಿ ಸಿಗಲಿ" ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಕಾಮಿಡಿ ಸನ್ನಿವೇಶಗಳನ್ನು ಕನ್ನಡ ಸಿನಿರಸಿಕರು ಎಂದೂ ಮರೆಯುವುದಿಲ್ಲ.

1948ರಲ್ಲಿ ಹೊಳಲ್ಕೆರೆಯಲ್ಲಿ ಹುಟ್ಟಿ ಬೆಳೆದವರು ಜನಾರ್ಧನ್. 1985ರಲ್ಲಿ ತೆರೆಕಂಡ 'ಪಿತಾಮಹ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಬ್ಯಾಂಕ್ ಉದ್ಯೋಗಿ ಆಗಿದ್ದ ಜನಾರ್ಧನ್ ಸಂಬಳ ಸಾಲದೇ ಬಣ್ಣದಲೋಕದಲ್ಲಿ ತೊಡಗಿಸಿಕೊಂಡಿದ್ದರು. ಉಪೇಂದ್ರ ನಿರ್ದೇಶನದ 'ತರ್ಲೆ ನನ್ಮಗ','ಶ್' 'ಬೆಳ್ಳಿಯಪ್ಪ ಬಂಗಾರಪ್ಪ', 'ಗಣೇಶ ಸುಬ್ರಮಣ್ಯ', 'ಕೌರವ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು. 'ಪಾಪಪಾಂಡು', 'ಮಾಂಗಲ್ಯ', 'ರೋಬೋ ಫ್ಯಾಮಿಲಿ', 'ಜೋಕಾಲಿ' ಅವರು ನಟಿಸಿದ ಧಾರಾವಾಹಿಗಳು.

3 ಬಾರಿ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿತ್ತು. ಎರಡು ವರ್ಷಗಳ ಹಿಂದೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಶಿವರಾಜ್‌ಕುಮಾರ್, ರವಿಚಂದ್ರನ್, ಶಂಕರ್ ನಾಗ್, ಅನಂತ್ ನಾಗ್ ಸಿನಿಮಾಗಳಲ್ಲಿ ಅವರು ಹೆಚ್ಚು ನಟಿಸಿದ್ದಾರೆ. ದೊಡ್ಡಮಟ್ಟಕ್ಕೆ ಅವಕಾಶಗಳು ಸಿಗದೇ ಇದ್ದರೂ ಸಿಕ್ಕ ಪಾತ್ರಗಳನ್ನು ಚೆನ್ನಾಗಿ ನಿಭಾಯಿಸಿ ಗೆದ್ದಿದ್ದರು. ಶಾಲಾ ಕಾಲೇಜು ದಿನಗಳಲ್ಲೇ ನಾಟಕಗಳಲ್ಲಿ ನಟಿಸೋಕೆ ಆರಂಭಿಸಿದ್ದರು. ಹಾಗಾಗಿ ಕೊನೆಗೆ ಚಿತ್ರರಂಗ ಪ್ರವೇಶಿಸಿದರು. ಉಪೇಂದ್ರ ಹಾಗೂ ಕಾಶಿನಾಥ್ ಸಿನಿಮಾಗಳಲ್ಲಿ ಒಳ್ಳೆ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದರು.

More from Filmibeat

English summary
Veteran comedian Bank Janardhan dies at 76
Read more about: bank janardhan actor sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X