ಜೀವಕ್ಕಾಗಿ ಅಂಗಲಾಚಿದ್ದ ರೇಣುಕಾಸ್ವಾಮಿ; ಅಯ್ಯೋ ಅನಿಸುತ್ತೆ ಈ ಎರಡು ಫೋಟೋ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಅವರ ಗ್ಯಾಂಗ್ ಆರೋಪಿ ಸ್ಥಾನದಲ್ಲಿದೆ. ಸದ್ಯ ಇವರೆಲ್ಲರೂ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದಂತೆ ಈಗ ಪ್ರಬಲವಾದ ಸಾಕ್ಷಿಯೆಂದು ಪರಿಗಣಿಸಿದ್ದ ಫೋಟೋ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಲೇ ಇದ್ದವು. ಅದರಲ್ಲೊಂದು ಈ ಫೋಟೋ

ರೇಣುಕಾಸ್ವಾಮಿ ಸಾಯುವುದಕ್ಕೂ ಮುನ್ನ ದರ್ಶನ್ ಹಾಗೂ ಪವಿತ್ರಾ ಗೌಡ ಮುಂದೆ ಅಂಗಲಾಚಿ ಬೇಡಿಕೊಂಡಿದ್ದ ಎಂದು ಸಾಕಷ್ಟು ವರದಿಗಳಾಗಿದ್ದವು. ಪೊಲೀಸ್ ಮೂಲಗಳಿಂದ ಸಿಕ್ಕಿದ್ದ ಮಾಹಿತಿಯನ್ನಷ್ಟೇ ಇಟ್ಟುಕೊಂಡು ಪ್ರಸಾರ ಮಾಡಲಾಗಿತ್ತು. ಈ ವೇಳೆ ರೇಣುಕಾಸ್ವಾಮಿ ಸಾಯುವುದಕ್ಕೂ ಮುನ್ನ ದರ್ಶನ್ ಹಾಗೂ ಪವಿತ್ರಾ ಗೌಡ ಎದುರು ಅಂಗಲಾಚಿ ಬೇಡಿಕೊಂಡಿದ್ದ ಅನ್ನುವ ಸುದ್ದಿಯೂ ಬಿತ್ತರವಾಗಿತ್ತು.

Renukaswamy begging for life before his death in Pattanagere shed has gone viral

ಈ ವರದಿಗೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಸಾಯುವುದಕ್ಕೂ ಅಂಗಲಾಚಿ ಬೇಡಿಕೊಳ್ಳುತ್ತಿದ್ದ ಫೋಟೋ ಹೊರಬಿದ್ದಿದೆ. ನಿಜಕ್ಕೂ ರೇಣುಕಾಸ್ವಾಮಿ ಅಂಗಲಾಚಿ ಬೇಡಿಕೊಂಡಿದ್ದ ಅನ್ನೋದಕ್ಕೆ ಈ ಫೋಟೋ ಸಾಕ್ಷಿಯಾಗಿದ್ದು, ಈ ಎಲ್ಲಾ ಕಡೆ ವೈರಲ್ ಆಗುತ್ತಿದೆ.

ನಿನ್ನೆಯಷ್ಟೆ (ಸೆಪ್ಟೆಂಬರ್ 5) ಪೊಲೀಸರು ಕೋರ್ಟ್‌ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಎರಡು ಫೋಟೋಗಳು ವೈರಲ್ ಆಗಿವೆ. ಈ ಎರಡೂ ಫೋಟೋಗಳು ಎಂತಹವರನ್ನೂ ಬೆಚ್ಚಿಬೀಳಿಸುತ್ತೆ. ಪಟ್ಟಣಗೆರೆ ಶೆಡ್‌ನಲ್ಲಿ ನಡೆದ ಕ್ರೌರ್ಯವನ್ನು ಎತ್ತಿ ತೋರಿಸುತ್ತಿದೆ. ಇದೇ ಫೋಟೋಗಳನ್ನು ಆರೋಪಿ ವಿನಯ್ ಫೋನ್‌ನಿಂದ ರಿಟ್ರೀವ್ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಬೆಂಗಳೂರಿನ ಆರ್ ಆರ್‌ ನಗರ ಸಮೀಪವಿರುವ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ದರ್ಶನ್ ಗ್ಯಾಂಗ್ ಹತ್ಯೆ ಮಾಡಿತ್ತು. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಇದೇ ಪಟ್ಟಣಗೆರೆ ಶೇರ್‌ಗೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ದರ್ಶನ್ ಗ್ಯಾಂಗ್ ಮುಂದೆ ರೇಣುಕಾಸ್ವಾಮಿ ಕಣ್ಣೀರಿಟ್ಟು ಬೇಡಿಕೊಂಡರೂ ಕನಿಕರ ತೋರದೆ ಹತ್ಯೆ ಮಾಡಿದ್ದಾರೆ. ಈ ವೇಳೆ ತೆಗೆದುಕೊಂಡಿದ್ದ ಫೋಟೋವನ್ನು ರಿಟ್ರೀವ್ ಮಾಡಿಕೊಂಡಿದ್ದು, ಅದನ್ನೂ ಸಾಕ್ಷಿಯಾಗಿ ಪರಿಗಣಿಸಲಾಗಿದೆ ಎನ್ನಲಾಗಿದೆ.

ಇನ್ನೊಂದು ಫೋಟೋದಲ್ಲಿ ರೇಣುಕಾಸ್ವಾಮಿ ನೆಲದ ಮೇಲೆ ಮಲಗಿರುವ ಫೋಟೋ. ರೇಣುಕಾಸ್ವಾಮಿ ಎದೆ ಮೇಲೆ ಕೈ ಇಟ್ಟು ಮಲಗಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಈ ಫೋಟೊಗಳನ್ನು ವಿನಯ್ ಮೊಬೈಲ್‌ನಿಂದ ರಿಟ್ರೀವ್ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈ ಎರಡು ಫೋಟೋಗಳ ಬಗ್ಗೆ ಪೊಲೀಸರಿಂದ ಅಧಿಕೃತ ಸ್ಪಷ್ಟನೆ ಇನ್ನೂ ಸಿಗಬೇಕಿದೆ.

Renukaswamy begging for life before his death in Pattanagere shed has gone viral

ಈ ಎರಡು ಫೋಟೋಗಳ ಜೊತೆ ರೇಣುಕಾಸ್ವಾಮಿ ಕೊಲೆಯಾದ ಬಳಿಕ ಬಂಧಿಸಿದ್ದ ದರ್ಶನ್ ಅಂಡ್ ಗ್ಯಾಂಗ್ ಅನ್ನು ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಹೋಗಿದ್ದರು. ಈ ಪ್ರಕರಣ ನಡೆದ ವೇಳೆ ದರ್ಶನ್ ಅಂಡ್ ಗ್ಯಾಂಗ್ ಪಾರ್ಟಿ ಮಾಡಿದ್ದ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿದ್ದರು ಆ ವೇಳೆ ತೆಗೆದ ಫೋಟೋಗಳು ಹೊರಬಿದ್ದಿವೆ.

ಇನ್ನು ದರ್ಶನ್ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ದರ್ಶನ್‌ ಗ್ಯಾಂಗ್ ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ ಕರೆದುಕೊಂಡು ಬಂದಿದ್ದರು. ಅಲ್ಲಿ ರೇಣುಕಾಸ್ವಾಮಿ ಹಿಂಸೆ ಕೊಟ್ಟು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಜೂನ್‌ 8ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಕರೆತಂದಿದ್ದರು.

More from Filmibeat

English summary
Renukaswamy begging for life before his death in Pattanagere shed has gone viral:
Read more about: darshan case filmibeat news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X