Darshan Bail; ನಟ ದರ್ಶನ್‌ಗೆ ಕೊನೆಗೂ ಮಧ್ಯಂತರ ಜಾಮೀನು ಮಂಜೂರು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್‌ನಿಂದ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಆಗಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಚಿಕಿತ್ಸೆ ಪಡೆಯಲು ಕೋರ್ಟ್ ಜಾಮೀನು ನೀಡಿದೆ. 131 ದಿನಗಳ ಹಿಂದೆ ನಟ ದರ್ಶನ್ ಜೈಲು ಸೇರಿದ್ದರು. ಅಂತೂ ಇಂತೂ ಇದೀಗ ಸೆರೆವಾಸದಿಂದ ಮುಕ್ತಿ ಪಡೆಯಲಿದ್ದಾರೆ.

ಅಭಿಮಾನಿಗಳು ನಟ ದರ್ಶನ್ ಬೇಗ ಸಂಕಷ್ಟದಿಂದ ಪಾರಾಗಿ ಬರಲಿ ಎಂದು ಪ್ರಾರ್ಥಿಸುತ್ತಿದ್ದರು. ಕೊನೆಗೂ ಅಭಿಮಾನಿಗಳ ಆಸೆಯಿಂದ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬರಲಿದ್ದಾರೆ.ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಒಂದಷ್ಟು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ದರ್ಶನ್ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿದೆ.
ನಟ ದರ್ಶನ್ ವಿದೇಶಕ್ಕೆ ತೆರಳುವಂತಿಲ್ಲ. ಪಾಸ್ ಪೋರ್ಟ್ ಸರೆಂಡರ್ ಮಾಡುವಂತೆ ಕೋರ್ಟ್ ಷರತ್ತು ವಿಧಿಸಿದೆ. ದರ್ಶನ್ ಬಯಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಯಾವ ಚಿಕಿತ್ಸೆ ಆಗಿದೆ ಅಂತ ಕೂಡ ಕೋರ್ಟ್‌ಗೆ ರಿಪೋರ್ಟ್ ನೀಡಬೇಕು. ಒಂದು ವಾರದಲ್ಲಿ ಚಿಕಿತ್ಸೆಯ ವಿವರ ನೀಡುವಂತೆ ಸೂಚಿಸಲಾಗಿದೆ. ತಮಗೆ ಮಧ್ಯಂತರ ಜಾಮೀನು ಸಿಕ್ಕ ಬಗ್ಗೆ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗ್ತಿದೆ.
ಕೆಲವೇ ಕ್ಷಣಗಳಲ್ಲಿ ನಟ ದರ್ಶನ್ ಕುಟುಂಬಸ್ಥರು ಬಳ್ಳಾರಿ ಜೈಲಿಗೆ ಭೇಟಿ ನೀಡಲಿದ್ದಾರೆ. ಚಿಕಿತ್ಸೆಗಾಗಿ ಮಾತ್ರ ಅವಕಾಶ ಮಾಡಿಕೊಳ್ಳಲಾಗಿದೆ. ಇಂದೇ ದರ್ಶನ್ ಜೈಲಿನಿಂದ ಬಿಡುಗಡೆ ಆಗಿ ಮನೆಗೆ ಮರಳುವ ನಿರೀಕ್ಷೆಯಿದೆ.
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಜೂನ್ ಮೊದಲ ವಾರ ಕೆಟ್ಟದಾಗಿ ಮೆಸೇಜ್ ಮಾಡಲು ಆರಂಭಿಸಿದ್ದ. ಈ ವಿಚಾರ ದರ್ಶನ್‌ಗೆ ಗೊತ್ತಾಗಿ ಆಪ್ತರ ಮೂಲಕ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ಆತನನ್ನು ಕೂಡಿ ಹಾಕಿ ಥಳಿಸಲಾಗಿತ್ತು. ಇನ್ನು ಮುಂದೆ ಈ ರೀತಿ ಮಾಡದಂತೆ ಬುದ್ಧಿ ಕಲಿಸಲು ಪ್ರಯತ್ನಿಸಿದ್ದರು. ದರ್ಶನ್ & ಗ್ಯಾಂಗ್ ಆತನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಆತನಿಗೆ ಚಿತ್ರಹಿಂಸೆ ನೀಡಲಾಗಿತ್ತು. ಆದರೆ ಆತನ ಪ್ರಾಣವೇ ಹಾರಿ ಹೋಗಿತ್ತು.
ರೇಣುಕಾಸ್ವಾಮಿ ಪ್ರಾಣಬಿಟ್ಟ ನಂತರ ತಪ್ಪಿಸಿಕೊಳ್ಳಲು ಶವವನ್ನು ಬೇರೆ ಕಡೆ ಸಾಗಿಸಲಾಗಿತ್ತು. ಪಟ್ಟಣಗೆರೆ ಶೆಡ್‌ನಿಂದ ಶವವನ್ನು ಸುಮನಹಳ್ಳಿ ರಿಂಗ್ ರೋಡ್ ಬಳಿ ಎಸೆಯಲಾಗಿತ್ತು. ಬಳಿಕ ಹಣಕ್ಕಾಗಿ ಮೂವರು ಹೋಗಿ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದರು. ಹಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಹೇಳಿದ್ದರು. ಆದರೆ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿತ್ತು. ಜೂನ್ 11ರಂದು ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದರು.
ಪ್ರಕರಣದಲ್ಲಿ 17 ಜನ ಆರೋಪಿಗಳನ್ನಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಬಳಿಕ ಸೆಷನ್ ಕೋರ್ಟ್‌ನಲ್ಲಿ ಹಾಜರುಪಡಿಸಲಾಗಿತ್ತು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಪದೇ ಪದೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾಥಿತ್ಯ ಸಿಗುತ್ತಿದೆ ಎನ್ನುವ ಆರೋಪ ಕೇಳಿಬಂದಾಗ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಸದ್ಯ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧವಾಗಿದ್ದ 17 ಆರೋಪಿಗಳ ಪೈಕಿ ದರ್ಶನ್ ಸೇರಿ 6 ಮಂದಿಗೆ ರಿಲೀಫ್ ಸಿಕ್ಕಂತಾಗಿದೆ. ಆದರೆ ನಟ ದರ್ಶನ್‌ಗೆ 6 ವಾರಗಳ ಮಧ್ಯಂತರ ಜಾಮೀನು ಮಾತ್ರ ಮಂಜೂರಾಗಿದೆ.


Click it and Unblock the Notifications











