ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಶಕೀಲಾ' ಬಿಡುಗಡೆಗೆ ದಿನಾಂಕ ನಿಗದಿ

ಖ್ಯಾತ ನಟಿ ಶಕೀಲಾ ಜೀವನಾಧರಿತ ಸಿನಿಮಾ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಶಕೀಲಾ ಪಾತ್ರದಲ್ಲಿ ನಟಿ ರಿಚಾ ಚಡ್ಡಾ ಕಾಣಿಸಿಕೊಂಡಿದ್ದು, ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಆಕ್ಷನ್ ಕಟ್ ಹೇಳಿದ್ದಾರೆ.

ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ಶಕೀಲಾ ಸಿನಿಮಾ ಇದೇ ತಿಂಗಳು ಕೊನೆಯಲ್ಲಿ ಅಂದರೆ ಕ್ರಿಸ್ಮಸ್ ಗೆ ರಿಲೀಸ್ ಆಗುತ್ತಿದೆ. ಕನ್ನಡ ಸೇರಿದಂತೆ ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲೂ ಸಿನಿಮಾ ತೆರೆಗೆ ಬರುತ್ತಿದೆ.

ಚಿತ್ರದಲ್ಲಿ ಪಂಕಜ್ ತ್ರಿಪಾಠಿ ಮತ್ತು ಮಲಯಾಳಂ ನಟ ರಾಜೀವ ಪಿಳ್ಲೈ ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ಚಿತ್ರಾಭಿಮಾನಿಗಳ ಗಮನ ಸೆಳೆಯುತ್ತಿದೆ. ಅಂದಹಾಗೆ ಶಕೀಲಾ ಸಿನಿಮಾ ಈ ವರ್ಷದ ಆರಂಭದಲ್ಲೇ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ರಿಲೀಸ್ ತಡವಾಗುತ್ತಲೆ ಬಂದಿದೆ.

Richa Chadda starrer Shakeela movie set to release on December 25th

ಇದೀಗ ಶಕೀಲಾ ಎಂಟ್ರಿಗೆ ಕಾಲಕೂಡಿಬಂದಿದ್ದು, ಕ್ರಿಸ್ಮಸ್ ನಲ್ಲಿ ಚಿತ್ರಮಂದಿರಕ್ಕೆ ಬರ್ತಿದೆ. ಶಕೀಲಾ 1990 ದಶಕದಲ್ಲಿ ಜನಪ್ರಿಯ ನಟಿಯಾಗಿದ್ದರು. ಕೇರಳ ಮೂಲಕ ನಟಿ ಶಕೀಲಾ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದ ಹಲವು ವಯಸ್ಕರ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ರಿಲೀಸ್ ಡೇಟ್ ಬಹಿರಂಗ ಪಡಿಸಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ರಿಚಾ ಸೇರೆಯುಟ್ಟು, ಗನ್ ಹಿಡಿದು ಪೋಸ್ ನೀಡಿದ್ದಾರೆ. ಸದ್ಯ ಕನ್ನಡದಲ್ಲಿ ರಿಲೀಸ್ ಆಗುತ್ತಿದ್ದು, ಮುಂದಿನ ತಿಂಗಳು ಹಲವು ಭಾಷೆಯಲ್ಲಿ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.

More from Filmibeat

English summary
Richa Chadda starrer Shakeela movie set to release on December 25th. This movie is directed by Indrajit Lankesh.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X