ರಿಷಬ್ ಶೆಟ್ಟಿ- ಪ್ರಗತಿ ದಂಪತಿಗೆ ಹೆಣ್ಣು ಮಗು ಜನನ: ಸಂತಸ ಹಂಚಿಕೊಂಡ ನಿರ್ದೇಶಕ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ದಂಪತಿ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತ: ರಿಷಬ್ ಶೆಟ್ಟಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹೊಸ ವರ್ಷದಂದೇ ರಿಷಬ್ ಶೆಟ್ಟಿ ಪ್ರಗತಿ ಎರಡನೇ ಮಗುವಿಗೆ ತಾಯಿಯಾಗುತ್ತಿರುವ ಸಂತಸದ ವಿಷಯವನ್ನು ಹಂಚಿಕೊಂಡಿದ್ದರು. ಇಂದು (ಮಾರ್ಚ್ 4) ರಿಷಬ್ ಶೆಟ್ಟಿ ಎರಡನೇ ಮಗುವಿನ ಬಗ್ಗೆ ಖುಷಿ ವಿಷಯವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೊಂದು ಕಡೆ ರಿಷಬ್ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಗೆದ್ದಿವೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ನಿರೀಕ್ಷೆಗೂ ಮೀರಿ ಹಿಟ್ ಆಗಿದೆ. ಕೈಯಲ್ಲಿ ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳಿವೆ. ಬದುಕು ಸುಂದರ ಎನಿಸಿರುವಾಗಲೇ ರಿಷಬ್ ಶೆಟ್ಟಿ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೀಗಾಗಿ ರಿಷಬ್ ಶೆಟ್ಟಿ ಬದುಕೀಗ ಅತೀ ಸುಂದರ ಎನಿಸಿದೆ.

ಹೆಣ್ಣು ಮಗುವಿನ ತಂದೆಯಾದ ರಿಷಬ್

ರಿಷಬ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಹೊಸ ಸಿನಿಮಾ ಇರಲಿ, ಸಿನಿಮಾದ ಬಗ್ಗೆ ಮಾಹಿತಿನೇ ಇರಲಿ. ಸೋಶಿಯಲ್ ಮೀಡಿಯಾದಲ್ಲಿ ಮೊದಲು ಹಂಚಿಕೊಳ್ಳುತ್ತಾರೆ. ಅದರಂತೆ ರಿಷಬ್‌ ಹಾಗೂ ಪ್ರಗತಿ ದಂಪತಿಗೆ ಹೆಣ್ಣು ಜನಿಸಿರುವ ಖುಷಿ ವಿಷಯವನ್ನು ತಮ್ಮ ಅಭಿಮಾನಿಗಳಿಗೆ ಟ್ವಿಟ್ಟರ್‌ ಮೂಲಕ ಶೇರ್ ಮಾಡಿಕೊಂಡು ಆನಂದಿಸಿದ್ದಾರೆ. ಪತ್ನಿಯೊಂದಿಗಿನ ಫೋಟೊ ಹಂಚಿಕೊಂಡು "ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗು ಆರೋಗ್ಯವಾಗಿದ್ದಾರೆ." ಎಂದು ಟ್ವಿಟ್ಟರ್‌ನಲ್ಲಿ ಸಂತಸವನ್ನು ಶೇರ್ ಮಾಡಿಕೊಂಡಿದ್ದಾರೆ.

ತುಂಬು ಗರ್ಭಿಣಿಯ ಫೋಟೊಶೇರ್

ತುಂಬು ಗರ್ಭಿಣಿಯ ಫೋಟೊಶೇರ್

ರಿಷಬ್ ಶೆಟ್ಟಿ ಎರಡನೇ ಬಾರಿ ತಂದೆಯಾಗುತ್ತಿರುವ ಖುಷಿಯ ವಿಷಯವನ್ನು ಹೊಸ ವರ್ಷದಂದೇ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದರು. 'ಸಂತಸ'ವೊಂದು ನಮ್ಮ ಕುಟುಂಬದ ಜೊತೆಯಾಗಲಿದೆ, ರಣ್‌ವಿತ್ ಶೆಟ್ಟಿ ಸದ್ಯದಲ್ಲೇ ಅಣ್ಣನಾಗಲಿದ್ದಾನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದವಿರಲಿ". ಎಂದು ಟ್ವೀಟ್ ಮಾಡಿದ್ದರು. ಇದರೊಂದಿಗೆ ತುಂಬು ಗರ್ಭಿಣಿಯಾಗಿದ್ದ ಪತ್ನಿಯ ಫೋಟೊಶೂಟ್ ಮಾಡಿಸಿದ್ದರು. ಪತ್ನಿ ಪ್ರಗತಿ ಶೆಟ್ಟಿ ಹಾಗೂ ಪುತ್ರ ರಣ್ವಿತ್ ಶೆಟ್ಟಿಯೊಂದಿಗೆ ಫೋಸ್ ಕೊಟ್ಟಿದ್ದರು. ಆ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ಸಿನಿಮಾಗಳಲ್ಲಿ ರಿಷಬ್ ಶೆಟ್ಟಿ ಬ್ಯುಸಿ

ಸಿನಿಮಾಗಳಲ್ಲಿ ರಿಷಬ್ ಶೆಟ್ಟಿ ಬ್ಯುಸಿ

ರಿಷಬ್ ಶೆಟ್ಟಿ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಕೈ ತುಂಬಾ ಸಿನಿಮಾಗಳಿವೆ. ಒಂದು ಲೆಕ್ಕದ ಪ್ರಕಾರ, ರಿಷಬ್ ಶೆಟ್ಟಿ ಕೈಯಲ್ಲಿ 5 ಸಿನಿಮಾಗಳಿವೆ. ಈಗಾಗಲೇ ರಿಷಬ್ ಶೆಟ್ಟಿ 'ಹರಿಕಥೆ ಅಲ್ಲ ಗಿರಿಕಥೆ' , 'ಬೆಲ್ ಬಾಟಂ 2', 'ಮಹಾನೀಯರೆ ಮಹಿಳೆಯರೇ' , 'ಆಂಟಗೋನಿ ಶೆಟ್ಟಿ', 'ಕಾಂತರ' ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕರಾವಳಿ ಸುತ್ತಮುತ್ತ ಇತ್ತೀಚೆಗೆ ಕಾಂತಾರ ಸಿನಿಮಾ ಚಿತ್ರೀಕರಣ ಕೂಡ ನಡೆದಿದೆ. ಇನ್ನು ರಿಷಬ್ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ ಕಾಂಬಿನೇಶನ್‌ನಲ್ಲಿ 'ಕಿರಿಕ್ ಪಾರ್ಟಿ 2' ನಿರ್ದೇಶನ ಕೈ ಹಾಕುತ್ತಿದ್ದಾರೆ ಎನ್ನಲಾಗಿದೆ.

ಚಿತ್ರೋತ್ಸವದ ವಿರುದ್ಧ ಬೇಸರ

ಚಿತ್ರೋತ್ಸವದ ವಿರುದ್ಧ ಬೇಸರ

ರಿಷಬ್ ಶೆಟ್ಟಿ ನಿರ್ಮಿಸಿದ 'ಪೆದ್ರೊ' ಸಿನಿಮಾ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆ ಆಗಿಲ್ಲ. ಈ ಕಾರಣಕ್ಕೆ ರಿಷಬ್ ಶೆಟ್ಟಿ ಬೇಸರ ಹೊರ ಹಾಕಿ ಬಹಿರಂಗ ಪತ್ರವನ್ನು ಬರೆದಿದ್ದರು. ನಮ್ಮದೇ ನಾಡಿನಲ್ಲಿ ನಮ್ಮದೇ ಸಿನಿಮಾ ಪ್ರದರ್ಶನವಾಗುತ್ತಿಲ್ಲ ಎಂದು ಕಿಡಿಕಾರಿದ್ದರು. 'ಪೆದ್ರೊ' ಚಿತ್ರವನ್ನು ನಟೇಶ್ ಹೆಗ್ಡೆ ನಿರ್ದೇಶನ ಮಾಡಿದ್ದು, ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಈಗಾಗಲೇ ಭಾಗಿಯಾಗಿದೆ. ಆದರೆ, ನಮ್ಮ ನಾಡಿನಲ್ಲೇ ಬೆಲೆ ಕೊಟ್ಟಿಲ್ಲ ಎಂದು ಬೇಸರ ಹೊರಹಾಕಿದ್ದರು.

More from Filmibeat

English summary
Rishab Shetty and his wife Pragathi blessed with a baby girl. Rishab Shetty announced on twitter.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X